Site icon Vistara News

Uttara Kannada News: ಸಮಗ್ರ ಕನ್ನಡ, ಕನ್ನಡಿಗರ ಸಂರಕ್ಷಣೆಗೆ ರಾಜ್ಯಾದ್ಯಂತ ಚಳವಳಿ: ಬೇಕ್ರಿ ರಮೇಶ

State President of Kadamba sainya Bekri Ramesh spoke at a pressmeet in Shirasi

ಶಿರಸಿ: ಸಮಗ್ರ ಕನ್ನಡ (Kannada), ಕನ್ನಡಿಗರ (Kannadigas) ಸಂರಕ್ಷಣೆಗಾಗಿ (Protection) ರಾಜ್ಯಾದ್ಯಂತ ಚಳವಳಿಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸದನದಲ್ಲಿ ಮಂಡಿಸಿ, ಕಾಯ್ದೆಯನ್ನು ಜಾರಿಗೆ ತರಬೇಕು. ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಸಂಪೂರ್ಣವಾಗಿ ನಿಲ್ಲಿಸಿ, ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು. ಕನ್ನಡ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದರ ಮೂಲಕ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ ಅವರು, ಕನ್ನಡದ ಕಲಾವಿದರು, ಕ್ರೀಡಾಪಟುಗಳಿಗೆ ಆರ್ಥಿಕ ಪ್ರೋತ್ಸಾಹ ಅನುದಾನ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ICC World Cup 2023: ಭಾರತ ತಂಡಕ್ಕೆ ಮೆಂಟರ್​ ಆಗಲಿದ್ದಾರೆ ಎಂ.ಎಸ್​ ಧೋನಿ; ವರದಿ

ಕನ್ನಡ ನಾಡಿನ ರೈತರ ಒಡನಾಡಿ ಕೆ.ಎಂ.ಎಫ್ ಜತೆ ಗುಜರಾತಿನ ಅಮೂಲ್ ಹಾಲು ಉತ್ಪನ್ನಗಳ ವಿಲೀನ ರದ್ದುಪಡಿಸಬೇಕು, ಹೊರ ರಾಜ್ಯಗಳ ಹಾಲು ಉತ್ಪನ್ನಗಳ ಮಾರಾಟ ನಿಷೇಧಿಸಬೇಕು. ರಾಷ್ಟ್ರದ ಪ್ರಶ್ನೆ ಬಂದಾಗ ಮೊದಲು ನಾವೆಲ್ಲರೂ ಭಾರತೀಯರು. ಕನ್ನಡ ನಾಡು-ನುಡಿ, ನೆಲ, ಜಲ, ಕನ್ನಡಿಗರ ಸಂರಕ್ಷಣೆ, ಉದ್ಯೋಗಕ್ಕೆ ಕುತ್ತು ಬಂದಾಗ ಮಂತ್ರಿಗಳು, ಶಾಸಕರು, ಅಧಿಕಾರಿಗಳು ಕನ್ನಡ ಪರವಾಗಿ ನಿಲ್ಲಬೇಕು ಎಂದು ಒತ್ತಾಯಿಸಿದರು.

ಕನ್ನಡ ನಾಡಿನ ಪ್ರಥಮ ರಾಜಧಾನಿ ಬನವಾಸಿ ಅಭಿವೃದ್ಧಿ ಪಾಧಿಕಾರ 2017 ರಲ್ಲಿ ರಚನೆ ಆಗಿ 5 ಕೋಟಿ ರೂ. ಬಿಡುಗಡೆಯಾಯಿತು. ಆ ನಂತರ ಹಣ ಬಿಡುಗಡೆಯಾಗಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 250 ಕೋಟಿ ರೂ. ಅನುದಾನ ನೀಡಿ, ಹೆಚ್ಚಿನ ಅಧಿಕಾರವನ್ನು ನೀಡಬೇಕು. ಕನ್ನಡ ಚಕ್ರವರ್ತಿ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಪ್ರತಿಮೆ ವಿಧಾನಸೌಧ ಎದುರು ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸಬೇಕು. ಉತ್ತರ ಕರ್ನಾಟಕದ ಸಹ್ಯಾದ್ರಿ, ಸಸ್ಯಕಾಶಿ, ಕಪ್ಪತಗುಡ್ಡದ ಸಂರಕ್ಷಣೆಗೆ ಅಭಿವೃದ್ಧಿ ಪ್ರಾಧಿಕಾರ ರಚಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಮುಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.

ಇದನ್ನೂ ಓದಿ: World Cup 2023 : ಪಾಕ್​ ತಂಡಕ್ಕೆ ಇನ್ನೂ ಅಭದ್ರತೆ; ಪರಿಶೀಲನೆಗೆ ಬರುತ್ತದಂತೆ ನಿಯೋಗ!

ಪಠ್ಯ-ಪುಸ್ತಕ ಬದಲಾವಣೆಯಲ್ಲಿ ಎರಡು ಪಕ್ಷಗಳು ಕಿತ್ತಾಟ ನಡೆಸುತ್ತಿವೆ. ನಾಡು-ನುಡಿ, ಹಿರಿಯ ಕವಿಗಳ ಪರಿಚಯವನ್ನು ಶಾಲಾ-ಕಾಲೇಜುಗಳ ಪಠ್ಯದಲ್ಲಿ ಅಳವಡಿಸಬೇಕು. ಸಮಗ್ರ ಕರ್ನಾಟಕ ಕನ್ನಡ, ಕನ್ನಡಿಗರ ಸಂರಕ್ಷಣೆಗಾಗಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಬೇಡಿಕೆಯನ್ನು ಸಲ್ಲಿಸುತ್ತೇವೆ. ಜುಲೈ ಅಂತ್ಯದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಭೇಟಿಯಾಗಿ ನಮ್ಮ ಮನವಿ ಸಲ್ಲಿಸುತ್ತೇವೆ. ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಚಳವಳಿ ಹಮ್ಮಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ISIS Terror : ರಾಜ್ಯದಲ್ಲಿ ರೊಬೋಟ್‌ ಬಳಸಿ ವಿಧ್ವಂಸಕ ಕೃತ್ಯ ನಡೆಸಲು ಪ್ಲ್ಯಾನ್‌ ಮಾಡಿದ್ದ ಉಗ್ರರು

ಈ ವೇಳೆ ಕದಂಬ ಸೈನ್ಯದ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ, ಶಿರಸಿ ತಾಲೂಕು ಸಂಚಾಲಕ ಗುತ್ಯಪ್ಪ ಮಾದರ್ ಕಪ್ಪಗೇರಿ ಇದ್ದರು.

Exit mobile version