Site icon Vistara News

Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

World Environment Day celebration at Shirsi veda health centere

ಶಿರಸಿ: ಪರಿಸರ ಸಂರಕ್ಷಣೆಗೆ (Environmental protection) ಪ್ರತಿಯೊಬ್ಬರೂ (Everyone) ಕಂಕಣ ಬದ್ಧರಾಗಬೇಕು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ನಗರದ ಹೊರವಲಯದ ವೇದ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷಾರೋಪಣ ನಡೆಸಿ ಮಾತನಾಡಿದ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರೂ ಸ್ವಚ್ಛ ಭಾರತ, ಕಸ ಮುಕ್ತ ಭಾರತದ ಕನಸು ಕಂಡಿದ್ದಾರೆ. ಹುಕ್ಕೇರಿ ಮಠದಿಂದಲೂ ಪ್ಲಾಸ್ಟಿಕ್ ಚೀಲ ಮುಕ್ತ ಮಾಡುವಲ್ಲಿ ನಮ್ಮದೇ ಕೊಡುಗೆ ಕೊಡಬೇಕು ಎಂದು 2.80 ಲಕ್ಷ ಬಟ್ಟೆ ಚೀಲಗಳನ್ನು ಹೊಲಿಸಿ ವಿತರಣೆ ಮಾಡಿದ್ದೆವು ಎಂದರು.

ಇದನ್ನೂ ಓದಿ: Kiccha Sudeep: ಅಭಿಷೇಕ್ ಅಂಬರೀಷ್​ಗೆ ಭರ್ಜರಿ ಗಿಫ್ಟ್‌ ಕೊಟ್ಟ ಕಿಚ್ಚ ಸುದೀಪ್‌!

ಒಂದು ವೃಕ್ಷವು ಸ್ವಚ್ಛ ಮನದಿಂದ ಎಷ್ಟೆಲ್ಲ ನೆರವಾಗುತ್ತದೆ. ಹಾಗೆ ಪರಿಸರದ ಉಳಿವಿಗೆ ಸರ್ವರೂ ಕಂಕಣ ಬದ್ಧರಾಗಬೇಕು. ಇಲ್ಲವಾದರೆ ಭವಿಷ್ಯಕ್ಕೆ ದೊಡ್ಡ ಕಂಟಕ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, 1974 ರಿಂದ ಪರಿಸರದ ದಿನ ಆಚರಣೆ ಮಾಡುತ್ತಿದ್ದೇವೆ. ಈ ಬಾರಿಯ ಘೋಷ ವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ತಡೆಯಬೇಕು. ಎಲ್ಲರಿಗೂ ವೈಯಕ್ತಿಕ, ಸಾಮಾಜಿಕ, ಕೌಟುಂಬಿಕ, ಸಂಘಟಿತ ಜೀವನದಲ್ಲಿ ಪರಿಸರದ ಮಹತ್ವ ಅರಿವಿದೆ. ಆದರೆ, ಈ ಅರಿವನ್ನು ವೈಯಕ್ತಿಕ ಜೀವನದಲ್ಲಿ ಅನುಷ್ಠಾನಕ್ಕೆ ತರಬೇಕು ಎಂದರು.

ಭವಿಷ್ಯದ ಜನಾಂಗದ ಭವಿಷ್ಯ ಅಂಧಕಾರಕ್ಕೆ ಹೋಗದಂತೆ ಪರಿಸರ ಸಂರಕ್ಷಿಸಬೇಕು. ಯಾರೂ ಉದಾಸೀನ ಮಾಡದೇ ಪರಿಸರ ಸಂರಕ್ಷಣೆ ಮಾಡಬೇಕು ಎಂದೂ ಹೇಳಿದರು.

ಇದನ್ನೂ ಓದಿ: Eco friendly Fashion: ಪರಿಸರ ಸ್ನೇಹಿ ಉಡುಪುಗಳಿಗೂ ಸಿಕ್ತು ಗ್ಲಾಮರ್‌ ಟಚ್‌

ಪ್ರಸಿದ್ಧ ವೈದ್ಯ ಡಾ. ವೆಂಕಟ್ರಮಣ ಹೆಗಡೆ ಮಾತನಾಡಿ, ಪ್ರಕೃತಿ ಸಂರಕ್ಷಣೆ ಎಲ್ಲರ ಜವಾಬ್ದಾರಿ. ನಿಸರ್ಗದ ಉಳಿದರೆ ಮಾತ್ರ ಎಲ್ಲ ಜೀವಿಗಳ ಉಳಿವು. ಈ ಸತ್ಯ ಅರಿತರೆ ಮಾತ್ರ ಪರಿಸರ ಉಳಿಸುವ ಜವಬ್ದಾರಿ ಹೃದಯದಿಂದ ಆರಂಭವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಗೀತಾ ಹೆಗಡೆ, ನಾರಾಯಣ ಹೆಗಡೆ ಸೇರಿದಂತೆ ಇತರರು ಇದ್ದರು.

Exit mobile version