ಬನವಾಸಿ: ಅಂಧತ್ವ (Blindness)ನಿವಾರಣೆಗಾಗಿ ರೋಟರಿ ಆಸ್ಪತ್ರೆಯು ಅನೇಕ ಶಿಬಿರಗಳನ್ನು (Camp) ಆಯೋಜಿಸಿ ಬಡವರಿಗೆ ಉಚಿತ ತಪಾಸಣೆ (Free checkup) ಹಾಗೂ ಶಸ್ತ್ರ ಚಿಕಿತ್ಸೆಯ ಸೌಲಭ್ಯ ಒದಗಿಸುತ್ತಾ ಬಂದಿದ್ದು, ಇಂತಹ ಶಿಬಿರಗಳನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ರೋಟರಿ ಚಾರಿಟೇಬಲ್ ಆಸ್ಪತ್ರೆಯ ಸಂಯೋಜಕ ಗಿರೀಶ್ ಹೇಳಿದರು.
ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸೇವಾ ಸಮಿತಿ, ಶಿರಸಿ ರೋಟರಿ ಚಾರಿಟೇಬಲ್ ಆಸ್ಪತ್ರೆ, ಕಾರವಾರ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಕಾರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಶಿರಸಿ ತಾಲೂಕು ಆಸ್ಪತ್ರೆ ಮತ್ತು ಗ್ರೀನ್ ಕೇರ್(ರಿ) ಇವರ ಸಹಯೋಗದಲ್ಲಿ ಶುಕ್ರವಾರ ನಡೆದ ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಇದನ್ನೂ ಓದಿ: Luxury homes : ಬೆಂಗಳೂರಿನಲ್ಲಿ ಲಕ್ಸುರಿ ಹೋಮ್ಸ್ ಬೇಡಿಕೆ ಕುಸಿತ
ಕಾರ್ಯಕ್ರಮವನ್ನು ಉದ್ಘಾಟಿಸಿದ ನೇತ್ರ ತಜ್ಞ ಡಾ.ಎ.ಜಿ. ವಸ್ತ್ರದ ಮಾತನಾಡಿ, ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಅನುಕೂಲವಾಗಿವೆ. ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಶಿಬಿರದಲ್ಲಿ 194 ಜನ ತಪಾಸಣೆಗೆ ಒಳಗೊಂಡಿದ್ದರು. ಶಸ್ತ್ರ ಚಿಕಿತ್ಸೆಗಾಗಿ 100 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದವರಿಗೆ 2 ಹಂತಗಳಲ್ಲಿ ಶಿರಸಿ ರೋಟರಿ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರ ಚಿಕಿತ್ಸೆ ನೀಡಲಾಗುವುದು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಯಶ್ರೀ ಹೆಗಡೆ ಶಿಬಿರದ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Vijayanagara News: ಗುಡೇಕೋಟೆಯಲ್ಲಿ ಎರಡೇ ಕಾಲುಗಳಿರುವ ಕರುವಿನ ಜನನ
ಈ ವೇಳೆ ಗ್ರೀನ್ ಕೇರ್ ಸಂಸ್ಥೆಯ ನಿರ್ದೇಶಕ ಉದಯ ನಾಯ್ಕ್, ಕಾರ್ಯದರ್ಶಿ ಜಿತೇಂದ್ರ ಕುಮಾರ್ ಸೇರಿದಂತೆ ಗ್ರಾಪಂ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರೋಟರಿ ಸಂಸ್ಥೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.