Site icon Vistara News

Uttara kannada News: ಹೊನ್ನಾವರದ ಬಳಿ ಗ್ಯಾಸ್ ಟ್ಯಾಂಕರ್‌ ಪಲ್ಟಿ; ಹೆದ್ದಾರಿ ಸಂಚಾರ ಅಸ್ತವ್ಯಸ್ತ

Gas tanker overturned at honnavara

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್‌ವೊಂದು (Gas tanker) ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.

ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಶರಾವತಿ ಸರ್ಕಲ್ ಬಳಿ ಈ ಅವಘಡ ಸಂಭವಿಸಿದೆ. ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡ ಟ್ಯಾಂಕರ್ ಹುಬ್ಬಳ್ಳಿಯತ್ತ ತೆರಳುತ್ತಿತ್ತು. ಈ ವೇಳೆ ಹೆದ್ದಾರಿಯಲ್ಲಿ ಏಕಾಏಕಿ ಬೈಕ್‌ವೊಂದು ಎದುರಾಗಿದ್ದು, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಟ್ಯಾಂಕರ್ ಚಾಲಕ ಸ್ಟೇರಿಂಗ್ ತಿರುಗಿಸಿದ ಪರಿಣಾಮ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ.

ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಟ್ಯಾಂಕರ್‌

ಇದನ್ನೂ ಓದಿ: Narendra Modi: ಆಸ್ಟ್ರೇಲಿಯಾದಲ್ಲಿ ಮೋದಿ ಮೋಡಿ, ಬ್ರಿಸ್ಬೇನ್‌ನಲ್ಲಿ ಶೀಘ್ರವೇ ಕಾನ್ಸುಲೇಟ್‌ ಸ್ಥಾಪನೆ ಘೋಷಣೆ

ಟ್ಯಾಂಕರ್ ಬಿದ್ದ ರಭಸಕ್ಕೆ ವಿದ್ಯುತ್ ಕಂಬವೊಂದು ಮುರಿದುಬಿದ್ದಿದ್ದು, ಟ್ಯಾಂಕರ್ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿತ್ತು. ಇದರ ಪರಿಣಾಮವಾಗಿ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು.

ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ದೌಡಾಯಿಸಿದ್ದು, ಗ್ಯಾಸ್ ಸೋರಿಕೆಯನ್ನು ಪರಿಶೀಲಿಸಲಾಗುತ್ತಿದೆ. ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದ ಟ್ಯಾಂಕರ್‌ ಅನ್ನು ಕ್ರೇನ್ ಸಹಾಯದಿಂದ ಪಕ್ಕಕ್ಕೆ ಸರಿಸಲಾಗಿದ್ದು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಹೊನ್ನಾವರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಶರಾವತಿ ಸರ್ಕಲ್ ಬಳಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದ ಟ್ಯಾಂಕರ್‌ ಅನ್ನು ಕ್ರೇನ್ ಸಹಾಯದಿಂದ ಪಕ್ಕಕ್ಕೆ ಸರಿಸುತ್ತಿರುವುದು.

ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕರ್ ಬಿದ್ದ ಸ್ಥಳದ ಸಮೀಪದಲ್ಲಿದ್ದ ಹೋಟೆಲ್, ಮನೆ, ಅಂಗಡಿಗಳಲ್ಲಿ ಬೆಂಕಿ ಹೊತ್ತಿಸದಂತೆ ಸೂಚನೆ ನೀಡಿದ್ದು, ಜನರಿಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಕುರಿತು ಹೊನ್ನಾವರ ಪೊಲೀಸರು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ATP Rankings: ಶ್ರೇಯಾಂಕದಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದ ರೋಹನ್‌ ಬೋಪಣ್ಣ

Exit mobile version