Site icon Vistara News

Uttara Kannada News: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

International Yoga Day Inauguration at Yallapura

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು (International Yoga Day) ಆಚರಿಸಲಾಯಿತು.

ಯೋಗ ಶಿಕ್ಷಕ ಸುಬ್ರಾಯ್ ಭಟ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ದೈನಂದಿನ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Video Viral: ಉಚಿತ ಬಸ್‌ನಲ್ಲಿ ಹೆಚ್ಚಿದ ಮಹಿಳೆಯರ ʼಶಕ್ತಿʼ; ಡ್ರೈವರ್‌ ಸೀಟ್‌ನಿಂದಲೇ ಹತ್ತಿದ ನಾರಿಯರು!

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಅಜಯ್ ಭಾರತೀಯ ಮಾತನಾಡಿ, ಯೋಗ ಎನ್ನುವುದು ಇಂದು ನಿನ್ನೆಯದಲ್ಲ. ಇದು ಅನಾದಿ ಕಾಲದಿಂದಲೂ ಭಾರತದಲ್ಲಿ ಪ್ರಚಲಿತದಲ್ಲಿತ್ತು. ಯೋಗ ಪಿತಾಮಹರಾದ ಪತಂಜಲಿ ಮುನಿಗಳು ಅದಕ್ಕೆ ಹೊಸ ಆಯಾಮ ನೀಡಿ, ಜನಸಾಮಾನ್ಯರಿಗೂ ಅಷ್ಟಾಂಗ ಯೋಗದ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ನಡೆಯಿತು.

ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ, ಸೆಂಟ್ರಲ್ ಸ್ಕೂಲ್‌ನ ಪ್ರಾಚಾರ್ಯೆ ಮಹಾದೇವಿ ಭಟ್ ಹಾಗೂ ಶಿಕ್ಷಣ ಸಂಸ್ಥೆಯ ವಿವಿಧ ಅಂಗ ಸಂಸ್ಥೆಯ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Yoga For Kids: ಮಕ್ಕಳ ಸಮಗ್ರ ಬೆಳವಣಿಗೆಗೆ ಸು’ಯೋಗ’, ಯಾವ ಆಸನಗಳು ಸೂಕ್ತ?

ಕು.ಮೇಧಾ ಭಟ್ ಪ್ರಾರ್ಥಿಸಿದರು. ಉಪನ್ಯಾಸಕ ಸಚಿನ್ ಭಟ್ ಸ್ವಾಗತಿಸಿದರು. ಸಂಕರ್ಷಣ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಕ ಮಹೇಶ ಜಿ. ನಾಯ್ಕ ವಂದಿಸಿದರು.

Exit mobile version