Site icon Vistara News

Uttara Kannada News: ಅಭಿವೃದ್ಧಿಯಲ್ಲಿ ಲೋಪವಾಗದಂತೆ ಗಮನಹರಿಸಿ: ಶಾಸಕ ಸತೀಶ್ ಕೃಷ್ಣ ಸೈಲ್ ಕ್ಲಾಸ್

MLA Satish Krishna Sail spoke at the Karwar progress review meeting

ಕಾರವಾರ: ಸರ್ಕಾರಿ ಸೌಲಭ್ಯಗಳಿಗಾಗಿ ಸಾರ್ವಜನಿಕರಿಂದ (Public) ಸಲ್ಲಿಕೆಯಾಗುವ ಅರ್ಜಿಗಳಿಗೆ 15 ದಿನದೊಳಗೆ ಸೂಕ್ತ ಮಾಹಿತಿಯೊಂದಿಗೆ (Information) ಪರಿಹಾರ ಕ್ರಮಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅರ್ಜಿದಾರರಿಗೆ ಸೂಚಿಸಬೇಕು ಎಂದು ಶಾಸಕ ಸತೀಶ್ ಕೃಷ್ಣ ಸೈಲ್ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಇಲಾಖಾವಾರು ಕೈಗೊಂಡ ಕಾಮಗಾರಿಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ, ಮಾತನಾಡಿದ ಅವರು, ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಾಹಿತಿ ಫಲಕ ಅಳವಡಿಸಿ ಜನರಿಗೆ ಸರ್ಕಾರದ ಜನಪರ ಯೋಜನೆಗಳ ಸಮಂಜಸ ಮಾಹಿತಿ ಪ್ರದರ್ಶನಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಯು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: Free Electricity: ಅಡೆತಡೆಗಳ ನಡುವೆಯೂ ಭರ್ಜರಿ ನೋಂದಣಿ; ನಾಲ್ಕೇ ದಿನದಲ್ಲಿ 12.51 ಲಕ್ಷ ಅರ್ಜಿ

ತಾಲೂಕಿನ ಅಭಿವೃದ್ಧಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳುವಲ್ಲಿ ಎಲ್ಲಾ ಇಲಾಖೆಗಳು ಗಮನಹರಿಸಬೇಕು. ಮಾನ್ಸೂನ್ ಹಿನ್ನೆಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಮುನ್ನೆಚ್ಚರಿಕೆ ವಹಿಸಿ, ಸೂಕ್ತ ಭದ್ರತೆ ವಹಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಳಿಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು. ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಸಿಬ್ಬಂದಿಗಳ ನೇಮಕಕ್ಕೆ ಶಿಫಾರಸ್ಸು ಮಾಡಬೇಕು ಎಂದರು.

ಸರ್ಕಾರದ ವಿವಿಧ ಯೋಜನೆಯಡಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯಲ್ಲಿ ವಿಳಂಬವಾಗದಂತೆ ನೋಡಿಕೊಳ್ಳುವುದು ಇಲಾಖಾವಾರು ಜವಾಬ್ದಾರಿ. ಹಾಗೆಯೇ ಎಲ್ಲಾ ಇಲಾಖೆಗಳಲ್ಲಿಯೂ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಪೂರ್ಣ ಮಾಹಿತಿ ನೀಡಬೇಕು ಎಂದರು.

ಇದನ್ನೂ ಓದಿ: Shane Warne: ಶೇನ್‌ ವಾರ್ನ್ ಹಠಾತ್​ ಸಾವಿನ ರಹಸ್ಯ ಬಯಲು ಮಾಡಿದ ಭಾರತ ಮೂಲದ ವೈದ್ಯ

ಸಭೆಯಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸೋಮಶೇಖರ ಮೆಸ್ತಾ, ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಾಲಪ್ಪನವರ್ ಆನಂದಕುಮಾರ, ತಹಸೀಲ್ದಾರ್ ಶ್ರೀದೇವಿ ಭಟ್, ವ್ಯವಸ್ಥಾಪಕಿ ಅನಿತಾ ಬಂಡಿಕಟ್ಟಿ, ನರೇಗಾ ಸಹಾಯಕ ನಿರ್ದೇಶಕ ರಾಮದಾಸ್ ನಾಯ್ಕ, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯಿತಿ ಅಧಿಕಾರಿಗಳು ಇದ್ದರು.

Exit mobile version