ಕಾರವಾರ: ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ (All Grama Panchayat) ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ‘ಮೇರಿ ಮಾಟಿ, ಮೇರಿ ದೇಶ್’ (ನನ್ನ ಮಣ್ಣು, ನನ್ನ ದೇಶ) ಎಂಬ ಅಭಿಯಾನದ ಮೂಲಕ ಸಸಿಗಳನ್ನು (Plants) ನೆಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಸಿಗಳನ್ನು ನೆಡುವುದು ಮತ್ತು ಪಂಚಪ್ರಾಣ ಪ್ರತಿಜ್ಞೆಯನ್ನು ಬೋಧಿಸುವುದು, ಸಾಂಸ್ಕೃತಿಕ ಕಾರ್ಯಕ್ರಮ ಜೊತೆಗೆ ದೇಶಕ್ಕಾಗಿ ಬಲಿದಾನಗೈದ ವೀರರ ಹೆಸರುಗಳನ್ನು ಶಿಲಾಫಲಕಗಳಲ್ಲಿ ಕೆತ್ತಬೇಕು. ಈ ಉದ್ದೇಶಕ್ಕಾಗಿ ಸ್ವಾತಂತ್ರ‍್ಯ ಹೋರಾಟಗಾರರು, ವೀರ ಯೋಧರನ್ನು ಹಾಗೂ ವೀರ ಮರಣ ಹೊಂದಿದ ಕುಟುಂಬದ ಸದಸ್ಯರು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ರಕ್ಷಣಾ ಸಿಬ್ಬಂದಿ, ಕರ್ತವ್ಯದ ಸಾಲಿನಲ್ಲಿ ಪ್ರಾಣ ತ್ಯಾಗ ಮಾಡಿದ ರಾಜ್ಯ ಪೊಲೀಸರನ್ನೂ ಸೇರಿಸಿ ಅಮೃತ ಸರೋವರಗಳ ಬಳಿ ಶಿಲಾಫಲಕಗಳನ್ನು ನಿರ್ಮಿಸಬೇಕು. ಒಂದು ವೇಳೆ ಅಂತಹ ಯಾವುದೇ ಸ್ಥಳ ಲಭ್ಯವಿಲ್ಲದಿದ್ದರೆ ಸ್ಥಳೀಯ ಪ್ರಮುಖ ಸ್ಥಳಗಳಲ್ಲಿ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಾಲಯದ ಆವರಣದಲ್ಲಿ ಶಿಲಾಫಲಕಗಳನ್ನು ನಿರ್ಮಿಸಬೇಕು ಎಂದು ಅವರು ಹೇಳಿದರು.
ಇದನ್ನೂ ಓದಿ: Beauty Product Awareness: ಆನ್‌ಲೈನ್‌ನಲ್ಲಿ ಬ್ಯೂಟಿ ಪ್ರಾಡಕ್ಟ್ ಆರ್ಡರ್ ಮಾಡುವಾಗ ಇದು ತಿಳಿದಿರಲಿ
ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಸ್ಥಳೀಯ ಸ್ವಾತಂತ್ರ‍್ಯ ಹೋರಾಟಗಾರರು, ಯೋಧರು, ಹಾಗೂ ಹುತಾತ್ಮರಾದ ಸ್ವಾತಂತ್ರ‍್ಯ ಹೋರಾಟಗಾರ ಮತ್ತು ಯೋಧರ ಕುಟುಂಬ, ಸಿಅರ್‌ಪಿಎಫ್‌ನ ರಕ್ಷಣಾ ಸಿಬ್ಬಂದಿ, ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಸಿಬ್ಬಂದಿ ಮತ್ತು ಕರ್ತವ್ಯದ ಸಾಲಿನಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ಕುಟುಂಬಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಮಣ್ಣನ್ನು ಸಂಗ್ರಹಿಸಿದ ಮಣ್ಣಿನ ಕಳಶಗಳನ್ನು ನವದೆಹಲಿಯ ಕರ್ತವ್ಯ ಪಥಕ್ಕೆ ಸಾಗಿಸಿ ‘ಅಮೃತ್ ವಾಟಿಕಾ’ ಎಂಬ ವಿಶಿಷ್ಟವಾದ ಉದ್ಯಾನವನ್ನು ಅಭಿವೃದ್ಧಿಪಡಿಸಲು ಬಳಸಲಾಗುವುದು ಎಂದು ಅವರು ಹೇಳಿದರು.
“ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮವನ್ನು ಎಲ್ಲಾ ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಯಶಸ್ವಿಯಾಗಿ ಆಯೋಜಿಸಲು ತಮ್ಮ ವ್ಯಾಪ್ತಿಯಲ್ಲಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡಂತೆ ಎಲ್ಲರನ್ನು ಆಹ್ವಾನಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: Gruha Lakshmi Scheme : ಆಗಸ್ಟ್ 27ಕ್ಕೆ ಎಲ್ಲರ ಮನೆಗೆ ಗೃಹಲಕ್ಷ್ಮಿ; ಸಿಗಲಿದೆ ಪಿಂಕ್ ಸ್ಮಾರ್ಟ್ ಕಾರ್ಡ್!
ಉಪ ವಿಭಾಗಾಧಿಕಾರಿ ಆರ್.ದೇವರಾಜ, ಜಯಲಕ್ಷ್ಮಿ, ಕಲ್ಯಾಣಿ ಕಾಂಬಳೆ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಸ್ಟೆಲ್ಲಾ ವರ್ಗಿಸ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಯಶ್ವಂತ ಯಾದವ, ತಾ.ಪಂ. ಇಓಗಳು, ತಹಸೀಲ್ದಾರರು, ನಗರಸಭೆ ಪೌರಾಯುಕ್ತರು, ಪಟ್ಟಣ ಪಂಚಾಯಿತಿ ಮತ್ತು ಪುರಸಭೆ ಅಧಿಕಾರಿಗಳು, ಇತರರು ಇದ್ದರು.