ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಹಳ್ಳಿಯಲ್ಲಿ ರಾಷ್ಟ್ರಪಕ್ಷಿ ನವಿಲನ್ನು (National bird Peacock) ಗುಂಡು ಹಾರಿಸಿ ಸಾಯಿಸಿದ ಆರೋಪಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವ (Accused arrested) ಘಟನೆ ಜರುಗಿದೆ.
ಬಂಧಿತ ಆರೋಪಿಯನ್ನು ಪುರವರ್ಗ ಮುಗಳಿಹೊಂಡದ ನಿವಾಸಿ ಇನಾಯತ್ ಉಲ್ಲಾ ಮೈಲಪ್ಪಿ (40) ಎಂದು ತಿಳಿದುಬಂದಿದೆ.
ಆರೋಪಿಯು ಮುಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಹಳ್ಳಿಯ ಅರಣ್ಯ ಪ್ರದೇಶದಲ್ಲಿ ತನ್ನ ಏರ್‌ಗನ್‌ನಿಂದ ಹೆಣ್ಣು ನವಿಲಿಗೆ ಗುಂಡು ಹಾರಿಸಿ ಸಾಯಿಸಿದ್ದಾನೆ. ನಂತರ ನವಿಲನ್ನು ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಹಾಕಿಕೊಂಡು ಬೇಹಳ್ಳಿಯಿಂದ ಸಬ್ಬತ್ತೆ ಕಡೆಗೆ ಹೋಗುವ ರಸ್ತೆಯಲ್ಲಿ ಸಾಗುತ್ತಿರುವಾಗ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: Asia Cup 2023: ಸಚಿನ್,ಧೋನಿ ಸೇರಿ ಹಲವು ದಿಗ್ಗಜರ ದಾಖಲೆ ಮುರಿಯಲು ಸಜ್ಜಾದ ವಿರಾಟ್,ರೋಹಿತ್
ಈ ಕುರಿತಾಗಿ ವನ್ಯಜೀವಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಭಟ್ಕಳ ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ, ಉಪವಲಯ ಅರಣ್ಯಾಧಿಕಾರಿ ಸಂದೀಪ ಭಂಡಾರಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.