ಶಿರಸಿ: ಪರಿಸರ ಸಂರಕ್ಷಣೆ (Environment protection) ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ (Responsibility) ಎಂದು ಶಿರಸಿಯ ಅರಣ್ಯ ಮಹಾವಿದ್ಯಾಲಯದ ಮುಖ್ಯಸ್ಥ (ಡೀನ್) ಡಾ. ಆರ್. ವಾಸುದೇವ್ ತಿಳಿಸಿದರು.
ಶಿರಸಿಯ ಅರಣ್ಯ ಮಹಾವಿದ್ಯಾಲಯದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡ, ಅರಣ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕ ಹಾಗೂ ವಿಸ್ತಾರ ಮೀಡಿಯಾ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು.
ಇದನ್ನೂ ಓದಿ: Gufi Paintal : ಮಹಾಭಾರತದ ‘ಶಕುನಿ ಮಾಮಾ’ ಇನ್ನಿಲ್ಲ
ಅರಣ್ಯ ಸಂಪತ್ತನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯ. ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆ ಅಲ್ಲ. ಎಲ್ಲಾ ದಿನಮಾನಗಳಲ್ಲೂ ಪರಿಸರದ ಬಗ್ಗೆ ಇರುವ ಕಾಳಜಿಯಾಗಿರಬೇಕು. ಪಕೃತಿಯಲ್ಲಿ ಅನೇಕ ಜೀವ ಸಂಕುಲಗಳಿವೆ, ಅವುಗಳನ್ನು ಕಾಪಾಡುವುದು ಕೂಡ ಪ್ರತಿಯೊಬ್ಬರ ಹೊಣೆಯಾಗಿದೆ ಎಂದರು.
ಇದೇ ವೇಳೆ ಅರಣ್ಯ ಮಹಾವಿದ್ಯಾಲಯದಲ್ಲಿ ಹತ್ತಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಗಳು ಪರಿಸರ ಸಂರಕ್ಷಿಸುವ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಅರಣ್ಯ ಕಾಲೇಜಿನಲ್ಲಿ ಪ್ಲಾಸ್ಟಿಕ್ ಮುಕ್ತ ಆವರಣವನ್ನು ಸೃಷ್ಠಿಸುವ ಪ್ರತಿಜ್ಞಾ ವಿಧಿಯನ್ನು ಕೈಗೊಂಡರು.
ಇದನ್ನೂ ಓದಿ: Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್‌ನಿಂದ ಬಡಿದು ಕೊಂದೇಬಿಟ್ಟರು ದುರುಳರು
ಈ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್. ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಎಲ್. ವೆಂಕಟೇಶ್ ಸೇರಿದಂತೆ ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ಇತರರು ಪಾಲ್ಗೊಂಡಿದ್ದರು.