ಯಲ್ಲಾಪುರ: ಯುಪಿಎಸ್‌ಸಿ (UPSC) ನಡೆಸುವ ಸಿವಿಲ್ ಸರ್ವಿಸ್‌ನ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ (Exam) ತಾಲೂಕಿನ ಸುಚೇತ್ ಬಾಳ್ಕಲ್ ಅವರು ದೇಶಕ್ಕೆ 30ನೇ ರ‍್ಯಾಂಕ್ (Rank) ಗಳಿಸುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.
ಸಿವಿಲ್ ಸರ್ವಿಸ್‌ನ ಪ್ರೀಲಿಮ್ಸ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸುವ ಮೂಲಕ ಭಾರತೀಯ ಅರಣ್ಯ ಸೇವೆಗೆ ಆಯ್ಕೆಯಾದ ಇವರು ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲೂ ತೇರ್ಗಡೆ ಹೊಂದಿದ್ದಾರೆ.
ಇದನ್ನೂ ಓದಿ: Viral News: ಪಕ್ಕದ ಮನೆಯವರ 32 ಮರ ಕಡಿದವನಿಗೆ 12 ಕೋಟಿ ರೂ. ದಂಡ, ಕತ್ತರಿಸಲು ಕಾರಣ ವಿಚಿತ್ರ
ನಾಲ್ಕು ದಶಕಗಳ ಇತಿಹಾಸ ಹೊಂದಿರುವ ಯಲ್ಲಾಫುರದ ಚೇತನಾ ಪ್ರಿಂಟರ್ಸ್ ನ ರಾಮಕೃಷ್ಣ ಮತ್ತು ಶ್ರೀಮತಿ ಬಾಳ್ಕಲ್ ಪುತ್ರರಾಗಿರುವ ಇವರು, ಈ ಹಿಂದೆ ರಾಜ್ಯ ಮಟ್ಟದ ಕ್ವಿಜ್ ಮತ್ತು ಚರ್ಚೆಗಳಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದನ್ನು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಲ್ಲಾಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದು.
ಇದನ್ನೂ ಓದಿ: Viral Video: ಪ್ರಾಣಕ್ಕಿಂತ ಪ್ರಯಾಣವೇ ಮುಖ್ಯ, ಚಲಿಸುವ ರೈಲಿಗೆ ನೇತಾಡಿದ ಯುವಕನ ವಿಡಿಯೊ ವೈರಲ್
ಬೆಂಗಳೂರಿನ ಪ್ರತಿಷ್ಠಿತ ಆರ್.ವಿ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದಿರುವ ಇವರು ಪ್ರತಿಷ್ಠಿತ ಕಂಪನಿಗಳಲ್ಲಿ ದೊರೆತ ಕೆಲಸಗಳಿಗೆ ಸೀಮಿತಗೊಳ್ಳದೇ ನಾಗರಿಕ ಸೇವೆಗಳ ಪರೀಕ್ಷಾ ತಯಾರಿಯಲ್ಲಿ ಕಳೆದ ಮೂರು ವರ್ಷಗಳಿಂದ ತೊಡಗಿಕೊಂಡಿದ್ದರು. ಇವರ ಸಹೋದರಿ ಸಹನಾ ಬಾಳ್ಕಲ್ ಕೂಡ ಕರ್ನಾಟಕ ಆರ್ಥಿಕ ಇಲಾಖೆಯಲ್ಲಿ ಉಪ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದು ಒಂದೇ ಕುಟುಂಬದಿಂದ ಇಬ್ಬರು ನಾಗರಿಕ ಸೇವೆಗೆ ಆಯ್ಕೆಯಾಗಿರುವುದು ವಿಶೇಷ.