ಕಾರವಾರ: ಉತ್ತಮ ಆರೋಗ್ಯಕ್ಕಾಗಿ ಯೋಗ (Yoga) ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ನಗರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಮಾತನಾಡಿದರು.
ಇದನ್ನೂ ಓದಿ: Video Viral: ಉಚಿತ ಬಸ್‌ನಲ್ಲಿ ಹೆಚ್ಚಿದ ಮಹಿಳೆಯರ ʼಶಕ್ತಿʼ; ಡ್ರೈವರ್ ಸೀಟ್‌ನಿಂದಲೇ ಹತ್ತಿದ ನಾರಿಯರು!
ಯೋಗವು ಪ್ರಾಚೀನ ಕಾಲದಿಂದಲೂ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ, ಈಗ ಅದು ವಿಶ್ವ ಮಟ್ಟದಲ್ಲೂ ಹೆಸರುವಾಸಿಯಾಗಿದೆ ಎಂದ ಅವರು, ಯೋಗವು ಆರೋಗ್ಯಯುತವಾಗಿ ಬಾಳಲು ಸಹಕರಿಯಾಗುತ್ತದೆ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಸಹಾಯಕಾರಿಯಾಗುತ್ತದೆ ಎಂದರು.
ಬಳಿಕ ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಪ್ರತಿನಿತ್ಯದ ದಿನಚರಿಯಲ್ಲಿ ನಾವು ಯೋಗವನ್ನು ಅಳವಡಿಸಿಕೊಳ್ಳಬೇಕಿದೆ, ಶಾರೀರಿಕ, ಮಾನಸಿಕ ಹಾಗೂ ಸಾಮಾಜಿಕ ಆರೋಗ್ಯ ವೃದ್ಧಿಗೆ ಯೋಗ ಅತ್ಯಗತ್ಯ ಎಂದು ಹೇಳಿದರು.
ಇದನ್ನೂ ಓದಿ: Sandalwood News: ಹಿರಿಯ ನಟಿಗೆ ಮಗ ಸೊಸೆಯಿಂದಲೇ ಟಾರ್ಚರ್! ಕಾಪಾಡಿ ಎಂದು ಪೊಲೀಸ್ ಠಾಣೆಗೆ ಮೊರೆ
ಬಳಿಕ ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಯೋಗ ಭಂಗಿ, ನೃತ್ಯ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ, ಐಎಎಸ್ ಪ್ರೊಬೇಷನರಿಯಾಗಿರುವ ಜೋಯಿಡಾ ತಹಸೀಲ್ದಾರ್ ಜುಬಿನ್ ಮಹಾಪಾತ್ರ ಸೇರಿ ಹಲವರು ಪಾಲ್ಗೊಂಡಿದ್ದರು.