ಕಾರವಾರ: ದೇಶವನ್ನು (country) ಯೋಧ (Soldier) ಕಾಪಾಡಿದರೆ, ಈ ದೇಶದ ಮಣ್ಣನ್ನು (Soil) ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂಬುದನ್ನು ಪ್ರತಿಯೊಬ್ಬರು ಅರಿತು ಭೂತಾಯಿಯ ರಕ್ಷಣೆಗೆ ಮುಂದಾಗೋಣ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ತಿಳಿಸಿದರು.
ತಾಲೂಕಿನ ಅಸ್ನೋಟಿ ಗ್ರಾಮದ ಶಿವಾಜಿ ವಿದ್ಯಾಮಂದಿರದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ, ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ ಬಾಡ, ಲಯನ್ಸ್ ಕ್ಲಬ್ ಸದಾಶಿವಗಡ, ಶಿವಾಜಿ ವಿದ್ಯಾಮಂದಿರ ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಡೆದ “ಮೇರೆ ಮಾಟಿ, ಮೇರಾ ದೇಶ” ಅಭಿಯಾನಕ್ಕೆ, ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮಣ್ಣು, ಸಸ್ಯ ಹಾಗೂ ನೀರಿನ ಅಗತ್ಯತೆಯನ್ನು ಅರಿತು ರಕ್ಷಣೆ ಮಾಡಲು ಮುಂದಾದಾಗ ಮಾತ್ರ ಪ್ರಗತಿಯನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದರು.
ಇದನ್ನೂ ಓದಿ: Beauty Product Awareness: ಆನ್‌ಲೈನ್‌ನಲ್ಲಿ ಬ್ಯೂಟಿ ಪ್ರಾಡಕ್ಟ್ ಆರ್ಡರ್ ಮಾಡುವಾಗ ಇದು ತಿಳಿದಿರಲಿ
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದಕುಮಾರ ಬಾಲಪ್ಪನವರ್ ಮಾತನಾಡಿ, ಅಸ್ನೋಟಿ ಗ್ರಾಮ ಪಂಚಾಯಿತಿ ಪ್ರಗತಿಪರ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸದಾ ಮುಂಚೂಣಿಯಲ್ಲಿರುತ್ತದೆ. ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ “ಮೇರೆ ಮಾಟಿ ಮೇರಾ ದೇಶ” ಅಭಿಯಾನಕ್ಕೆ ಚಾಲನೆ ನೀಡಿದ್ದು, ತಾಲೂಕಿನಾಧ್ಯಂತ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗೋಣ, ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸೋಣ ಎಂದರು.
ವೀರ ಯೋಧರಿಗೆ ಸನ್ಮಾನ
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತದ ನೌಕಾನಲೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಮೋಹನ್ ಸಾಳುಂಕೆ ಅವರನ್ನು ಸತ್ಕರಿಸಿ ಸನ್ಮಾನಿಸಲಾಯಿತು. “ಮೇರಿ ಮಾಟಿ ಮೇರಾ ದೇಶ” ಕಾರ್ಯಕ್ರಮದಡಿ ಗಿಡಗಳನ್ನು ನೆಟ್ಟು, ದೇಶ ಹಾಗೂ ಮಣ್ಣಿನ ರಕ್ಷಣೆಯ ಜತೆಗೆ ಘೋಷ ವಾಕ್ಯಗಳೊಂದಿಗೆ ಮೆರವಣಿಗೆ ನಡೆಸಿದರು.
“ಆಜಾದಿ ಕಾ ಅಮೃತ ಮಹೋತ್ಸವ”ದಡಿಯಲ್ಲಿ ಶಾಲಾ ಮಕ್ಕಳಿಗೆ ಚದುರಂಗ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಈ ವೇಳೆ ದಾನಿಗಳಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೇರಂ ಬೋರ್ಡ್ ನೀಡಿ ಉನ್ನತ ಮಟ್ಟದ ವ್ಯಾಸಂಗ ನಿಮ್ಮದಾಗಲಿ ಎಂದು ಹಾರೈಸಿದರು.
ಇದನ್ನೂ ಓದಿ: Gruha Lakshmi Scheme : ಆಗಸ್ಟ್ 27ಕ್ಕೆ ಎಲ್ಲರ ಮನೆಗೆ ಗೃಹಲಕ್ಷ್ಮಿ; ಸಿಗಲಿದೆ ಪಿಂಕ್ ಸ್ಮಾರ್ಟ್ ಕಾರ್ಡ್!
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜಯ್ ಸಾಳುಂಕೆ, ಶಿವಾಜಿ ಮಹಾವಿದ್ಯಾಲಯದ ಪ್ರಾಚಾರ್ಯ ಸುಮನ್ ಸಾವಂತ್, ವಲಯ ಅರಣ್ಯಾಧಿಕಾರಿ ಗಜಾನನ ನಾಯ್ಕ, ಶಿವಾಜಿ ವಿದ್ಯಾ ಮಂದಿರದ ಮುಖ್ಯಾಧ್ಯಾಪಕ ದಿನೇಶ ಗಾಂವಕರ್, ಹಾಗೂ ವಿವಿಧ ಟ್ರಸ್ಟ್‌ಗಳ ನರೇಂದ್ರ ದೇಸಾಯಿ, ಆರ್ ಪ್ರಭು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯೇಶ್ವರಿ ನಾಯ್ಕ, ಐಇಸಿ ಸಂಯೋಜಕರು, ಶಾಲಾ ವಿದ್ಯಾರ್ಥಿಗಳು, ಹಾಗೂ ಇತರರು ಇದ್ದರು.