ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರು (Accident Case) ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೀನು ಹಿಡಿಯಲು ಹೋಗಿದ್ದಾಗ (Drowned in water) ಈ ಅವಘಡ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ಘಟನೆ ನಡೆದಿದೆ.
ದಾವುದ್ ಘಾರಿಯಾ (67) ಮೃತ ಗ್ರಾಮ ಪಂಚಾಯತ್ ಸದಸ್ಯ. ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದ ದಾವುದ್, ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್-ಬೈಕ್ ಅಪಘಾತ, ಸವಾರ ಸಾವು
ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಸವಾರ ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಕ್ರಾಸ್ ಬಳಿ ನಡೆದಿದೆ. ಕರಮುಡಿ ಗ್ರಾಮದ ಜಗದೀಶ್ ಚಲವಾದಿ (24) ಮೃತ ದುರ್ದೈವಿ. ಬಸ್ ಅಸೂಟಿ ಗ್ರಾಮದಿಂದ ರೋಣ ಪಟ್ಟಣಕ್ಕೆ ಬರುವಾಗ, ಹೊಳೆ ಆಲೂರ ಗ್ರಾಮದಿಂದ ಕರಮುಡಿ ಗ್ರಾಮಕ್ಕೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:Physical Abuse : ಅತ್ಯಾಚಾರ ಆರೋಪ ವಿದೇಶಿ ಮಹಿಳೆಯಿಂದ ದೂರು; ಚಿಕ್ಕಮಗಳೂರಿನಲ್ಲಿ ಯೋಗ ಗುರು ಬಂಧನ
ಕೊಪ್ಪಳದಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಸಾವು
ಬೈಕ್‌ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ಓರ್ವನಿಗೆ ಗಂಭೀರ ಗಾಯವಾಗಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಲಾರಿ ಇಬ್ಬರ ಮೇಲೆ ಹರಿದಿದೆ. ಅಪಘಾತದ ಬಳಿಕ ಸ್ಥಳದಿಂದ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಕ್ರಾಸ್ ಬಳಿ ಘಟನೆ ನಡೆದಿದೆ.
ಹನುಮಂತ ಗುರಿಕಾರ (33), ಪರಶುರಾಮ ಗುರಿಕಾರ(34) ಮೃತ ದುರ್ದೈವಿಗಳು. ಮೃತರು ಕುಷ್ಟಗಿ ತಾಲೂಕಿನ ವಣಗೇರಿ ಗ್ರಾಮದವರು. ಗಾಯಾಳು ಪರಶುರಾಮ ಎಂಬವರನ್ನು ಕುಷ್ಟಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ
ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನವಾಗಿದೆ. ದಾಸರ್ಲಹಳ್ಳಿ ಗ್ರಾಮದ ಜನಮಡುಗಪ್ಪ ಬಂಧಿತ ಆರೋಪಿ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲ್ಲೂಕಿನ ದಾಸರ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಯಿಂದ ಸುಮಾರು 4.70 ಗ್ರಾಂ ತೂಕದ ಸುಮಾರು 1,50,000 ಲಕ್ಷ ಬೆಲೆ ಬಾಳುವ ಗಾಂಜಾ ಜಪ್ತಿ ಮಾಡಲಾಗಿದೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ