ಕಾರವಾರ: ಚಿತ್ರನಟ ದರ್ಶನ್ (Actor Darshan) ರೇಣುಕಾಸ್ವಾಮಿ ಹತ್ಯೆ (Renukaswamy murder case) ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಕುಟುಂಬಸ್ಥರು ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋಗಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗದಲ್ಲಿರುವ ದರ್ಶನ್ ಸಹೋದರಿ ದಿವ್ಯಾ ಅವರ ಪತಿ ಮಂಜುನಾಥ, ದರ್ಶನ್ ಒಳಿತಿಗಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕೈಗಾದ ಟೌನ್‌ಶಿಪ್‌ನಲ್ಲಿರುವ ರಾಮಲಿಂಗೇಶ್ವರ, ಶನೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಹಾಗೂ ವಿಶೇಷ ಹೂವಿನ ಅಲಂಕಾರ ಪೂಜೆ ನೆರವೇರಿಸಿದ್ದಾರೆ. ದರ್ಶನ್ ಆದಷ್ಟು ಬೇಗ ಆರೋಪ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.
ಇದನ್ನೂ ಓದಿ: Snake Bite : ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು
ಸಸ್ಯಾಹಾರಿ ಅಂದ್ರೂ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದ ಆರೋಪಿಗಳು!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ನಡುವೆ ಪ್ರಕರಣದಲ್ಲಿ (Actor Darshan) ಹೇಗೆಲ್ಲಾ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿತ್ತು ಎಂಬ ವಿಷಯಗಳು ಒಂದೊಂದಾಗೆ ಬೆಳಕಿಗೆ ಬರುತ್ತಿವೆ. ಕಿಡ್ನ್ಯಾಪ್ ಆಗಿದ್ದ ದಿನ ಊಟ ಕೊಡಿಸಿದ್ದ ಡಿ ಗ್ಯಾಂಗ್, ನಾನು ಶಾಖಾಹಾರಿ ಎಂದರೂ ಬಿಡದೇ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದರು ಎನ್ನಲಾಗಿದೆ.
ಚಿತ್ರದುರ್ಗದಿಂದ ಜೂನ್ 8ರಂದು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ನಂತರ ಆತನನ್ನು ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿಹಾಕಿ ಟಾರ್ಚರ್ ನೀಡಲಾಗಿದೆ. ಮಧ್ಯಾಹ್ನ ಊಟ ಕೊಡಿಸಿದಾಗ ನಾನು ಸಸ್ಯಹಾರಿ ಎಂದು ರೇಣುಕಾಸ್ವಾಮಿ ಹೇಳಿದ್ದಾನೆ. ಆದರೂ ಬಿಡದೆ ಆರೋಪಿಗಳು ಬಿರಿಯಾನಿ ತಿನ್ನಿಸಿದ್ದಾರೆ.
ಇದನ್ನೂ ಓದಿ | Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ದರ್ಶನ್ ಕೊಲೆ ಕೇಸ್
ಬಲವಂತ ಮಾಡಿದಾಗ ಬಿರಿಯಾನಿ ತಿನ್ನದೆ ಕೆಳಗೆ ಉಗಿದಿದ್ದರಿಂದ ರೇಣುಕಾ ಸ್ವಾಮಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದ ಗ್ಯಾಂಗ್, ಬಾಸ್ ಬರುತ್ತಾರೆ ಒದೆ ತಿನ್ನಲು ರೆಡಿಯಾಗು. ಬಿರಿಯಾನಿ ತಿಂದ್ರೆ ಶಕ್ತಿ ಬರುತ್ತೆ ಎಂದು ಬಿರಿಯಾನಿ ತಿನ್ನಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಪೊಲೀಸರ ಮುಂದೆ ಆರೋಪಿ ದೀಪಕ್ ಹೇಳಿಕೆ ಕೊಟ್ಟಿದ್ದಾನೆ.
ಕಿಡ್ನ್ಯಾಪ್ ಮಾಡಿಕೊಂಡು ಹೋಗುತ್ತಿದ್ದ ಸಿಸಿಟಿವಿ ಫುಟೇಜ್ ಲಭ್ಯ
ಡಿ ಗ್ಯಾಂಗ್‌ನಿಂದ ದುರ್ಗದ ಹುಡುಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ಸಂದರ್ಭದ ಸ್ಫೋಟಕ ವಿಡಿಯೊ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. KA-11-B-7939 ಕಾರಿನಲ್ಲಿ ಜೂನ್ 8 ಬೆಳಗ್ಗೆ 11:30ಕ್ಕೆ ಗುಯಿಲಾಳ್ ಟೋಲ್ ಅನ್ನು ಗ್ಯಾಂಗ್ ಕ್ರಾಸ್ ಮಾಡಿತ್ತು. ಕಾರಿನ ಮುಂಭಾಗ ಡ್ರೈವರ್ ರವಿ ಮತ್ತು ರಾಘವೇಂದ್ರ ಕೂತಿರುವ ದೃಶ್ಯ ಸೆರೆಯಾಗಿದೆ.
ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆ ಪ್ರಯಾಣ ಮಾಡಿದ್ದ ಟೀಂ, ಟೋಲ್‌ನಲ್ಲಿ ವಿಐಪಿ ಕಾರ್ಡ್ ಪ್ರದರ್ಶನ ಮಾಡಿ, ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂದು ರಾಘವೇಂದ್ರ ಬಿಲ್ಡಪ್ ಕೊಟ್ಟು ಹೋಗಿದ್ದರು. ಬೆಂಗಳೂರಿಗೆ ಬಿಟ್ಟು ವಾಪಸ್ ಹೋಗುವಾಗ ಡ್ರೈವರ್ ರವಿ ಮಾತ್ರ ವಾಹನದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್ 9 ಬೆಳಗಿನ ಜಾವ 4:30 ಕ್ಕೆ ಚಿತ್ರದುರ್ಗದತ್ತ ರವಿ ತೆರಳಿದ್ದ. ಈತ ಇನ್ನುಳಿದ ನಾಲ್ಕು ಮಂದಿ ಜೊತೆ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಬಿಟ್ಟು ಹೋಗಿದ್ದ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ