Site icon Vistara News

ಬೆಂಗಳೂರಿನ ನಾಲ್ವರು ವಿದ್ಯಾರ್ಥಿಗಳು ಕುಮಟಾದಲ್ಲಿ ಸಮುದ್ರ ಪಾಲು

kumta sea drowning

ಬೆಂಗಳೂರು: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ನಾಲ್ವರು ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಈಜುವ ವೇಳೆ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ 87 ವಿದ್ಯಾರ್ಥಿಗಳು ಕುಮಟಾ ಪ್ರವಾಸಕ್ಕೆ ಬಂದಿದ್ದರು. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು. ಕಾಗಾಲ್‌ ಕಡಲತೀರದಲ್ಲಿ ಈಜುತ್ತಿದ್ದರು. ಈ ವೇಳೆ ಅಲೆಗೆ ಸಿಕ್ಕಿ ಅರ್ಜುನ್, ಚೈತ್ರಶ್ರೀ, ತೇಜಸ್, ಕಿರಣ್‌ಕುಮಾರ್ ಕಣ್ಮರೆಯಾಗಿದ್ದಾರೆ.

ಸದ್ಯ ಚೈತ್ರಶ್ರೀ, ಅರ್ಜುನ್ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ದೇಹಕ್ಕಾಗಿ ಅಗ್ನಿಶಾಮಕದಳ, ಪೊಲೀಸ್ ಹಾಗೂ ಸ್ಥಳೀಯರಿಂದ ಶೋಧಕಾರ್ಯ ನಡೆದಿದೆ.

ಕುಮಟಾ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಉಳಿದ ವಿದ್ಯಾರ್ಥಿಗಳ ಮಾಹಿತಿ ಪಡೆಯುತ್ತಿದ್ದಾರೆ. ಘಟನೆ ಕುರಿತು ಹಾಗೂ ವಿದ್ಯಾರ್ಥಿಗಳ ಬಗ್ಗೆ ಮತ್ತಷ್ಟು ಮಾಹಿತಿ ಲಭಿಸಬೇಕಿದೆ.

ಉಳಿದ ವಿದ್ಯಾರ್ಥಿಗಳ ಕುರಿತು ಪೊಲೀಸರು ಮಾಹಿತಿ ಕಲೆ ಹಾಕಿದರು.
Exit mobile version