Site icon Vistara News

Bhatkala News : ಸರ್ಕಾರದ ದುಡ್ಡಿನಲ್ಲಿ ತಮ್ಮ ಫಾರ್ಮ್‌ಗೆ ರಸ್ತೆ ಮಾಡಿಕೊಂಡ ಸುನೀಲ್‌ ನಾಯ್ಕ; ಲೋಕಾಯುಕ್ತಕ್ಕೆ ದೂರು

#image_title

ಭಟ್ಕಳ: ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಭಟ್ಕಳ ಶಾಸಕ (Bhatkala News) ಸುನೀಲ್ ನಾಯ್ಕ ಹಾಗೂ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಭಟ್ಕಳ ತಾಲೂಕು ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ ಅವರು ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಣವನ್ನು ಅಧಿಕಾರಿಗಳೊಂದಿಗೆ ಶಾಮೀಲಾಗಿ ದುರುಪಯೋಗಪಡಿಸಿಕೊಂಡ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2023ರ ಜ.3 ರಂದು 40 ಲಕ್ಷ ರೂ. ಹಣ ಬಿಡುಗಡೆಯಾಗಿತ್ತು. ಶಾಸಕ ಸುನೀಲ್ ನಾಯ್ಕ ಅವರು 516.90 ಮೀಟರ್ ಉದ್ದ ಹಾಗೂ 3.70 ಮೀಟರ್ ಅಗಲದ ಕಾಂಕ್ರೀಟ್‌ ರಸ್ತೆಯನ್ನು ಸಾರ್ವಜನಿಕ ಉಪಯೋಗಕ್ಕೆ ಎಂದು ದಾಖಲೆಗಳಲ್ಲಿ ತೋರಿಸಿದ್ದರು. ಆದರೆ ಅದನ್ನು ತಮ್ಮ ಮಾಲ್ಕಿ ಜಾಗದಲ್ಲಿ ಸ್ವಂತ ಉಪಯೋಗದ ರಸ್ತೆಗೆ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: Karnataka Election 2023 : ಬಿಜೆಪಿ ಪರವಾಗಿ ದರ್ಶನ್‌ ಪ್ರಚಾರ; ಪಕ್ಷ ಸೇರಿದರೇ ಡಿ ಬಾಸ್‌?
ಸರ್ಕಾರದ ಅನುದಾನದಲ್ಲಿ ಶಾಸಕ ಸುನೀಲ್ ನಾಯ್ಕ ರಸ್ತೆಯನ್ನು ತಮ್ಮ ಫಾರ್ಮ್ ಹೌಸಿನ ಖಾಸಗಿ ಉಪಯೋಗಕ್ಕೆ ಮಾಡಿಕೊಂಡಿದ್ದಾರೆ. ಅಲ್ಲದೇ ಆ‌ ರಸ್ತೆಯನ್ನು ಸಾರ್ವಜನಿಕರ ಬಳಕೆಗೂ ನಿರ್ಬಂಧಿಸಲಾಗಿದೆ. 516.90 ಮೀಟರ್ ಉದ್ದದ ರಸ್ತೆಯಲ್ಲಿ 160 ಮೀಟರ್ ಮಾತ್ರ ಕಾಮಗಾರಿ ನಡೆದಿದೆ. ಉಳಿದ 356 ಮೀಟರ್ ಉದ್ದದ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡದೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕಾರಿಗಳ ಮೇಲೆ ಒತ್ತಡ ತಂದು ಹಣವನ್ನು ಶಾಸಕರು ವೈಯಕ್ತಿಕವಾಗಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹಾಗು ಜಾಲಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಯ ವಿರುದ್ಧವೂ ದೂರು ದಾಖಲಾಗಿದೆ.

Exit mobile version