ಕಾರವಾರ: ಬಾವಿಯಲ್ಲಿ (Drowned in well) ಕಾಲು ಜಾರಿ ಬಿದ್ದು 3 ವರ್ಷದ ಬಾಲಕಿ (Child Death) ಮೃತಪಟ್ಟಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹರಿದೇವ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಸ್ತುತಿ (3) ಮೃತ ದುರ್ದೈವಿ.
ಮನೆಯ ಬಳಿ ಆಟವಾಡುತ್ತಿದ್ದ ಸ್ತುತಿ, ಗಣಪತಿ ಮೂರ್ತಿ ಎಂದು ಮಣ್ಣನ್ನು ಬಾವಿಯಲ್ಲಿ ಹಾಕಲು ಮುಂದಾಗಿದ್ದಾಳೆ. ಈ ವೇಳೆ ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾಳೆ.
ಇತ್ತ ಮನೆ ಮುಂದೆ ಆಟವಾಡುತ್ತಿದ್ದ ಮಗು ಕಾಣದೆ ಇದ್ದಾಗ ಗಾಬರಿಗೊಂಡ ಪೋಷಕರು ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ, ಎಲ್ಲಿ ಹುಡುಕಿದರೂ ಕಾಣಿಸಲಿಲ್ಲ. ಬಡಾವಣೆಯ ನಿವಾಸಿಗಳೆಲ್ಲ ಹುಡುಕಾಡುವಾಗ ಕೊನೆಗೆ ಬಾವಿಯೊಳಗೆ ಇಣುಕಿ ನೋಡಿದ್ದಾರೆ. ಆಗ ಬಾವಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.
ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲಿ ಮಗು ಉಸಿರುಗಟ್ಟಿ ಮೃತಪಟ್ಟಿದೆ. ಸ್ಥಳಕ್ಕೆ ಕಾರವಾರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಸರಣಿ ಅಪಘಾತ; ಬೈಕ್ ಸವಾರ ದಾರುಣ ಸಾವು
ನಶೆ ಏರಿಸಿಕೊಂಡು ಈಜಲು ಕೆರೆಗಿಳಿದ ಗೆಳೆಯರಿಬ್ಬರು ಸಾವು
ಬೆಂಗಳೂರು: ಬರ್ತ್ ಡೇ ಪಾರ್ಟಿ (Birthday Party) ಮುಗಿಸಿ ಕೆರೆಯಲ್ಲಿ ಈಜಲು ತೆರಳಿದ್ದ (Drowned in lake) ಸ್ನೇಹಿತರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಭಿಷೇಕ್ ಹಾಗೂ ಸೋಲೊಮನ್ ಮೃತ ದುರ್ದೈವಿಗಳು.
ಸೋಲೊಮನ್ ಹುಟ್ಟುಹಬ್ಬ ಹಿನ್ನೆಲೆ ಸ್ನೇಹಿತರಿಗೆ ಪಾರ್ಟಿ ಆಯೋಜಿಸಿದ್ದ. ಪಾರ್ಟಿಯಲ್ಲಿ ಕುಡಿದು ಮೋಜು ಮಸ್ತಿಯನ್ನು ಮಾಡಿದರು. ಸ್ನೇಹಿತರೆಲ್ಲ ಹೋದ ನಂತರ ಅಭಿಷೇಕ್, ಸೊಲೋಮನ್ ಚಿಕ್ಕಕಮ್ಮನಹಳ್ಳಿಯ ಕೆರೆಗೆ ಈಜಲು ತೆರಳಿದ್ದರು. ಮದ್ಯದ ನಶೆಯಲ್ಲಿ ಕೆರೆಗೆ ಇಳಿದಿದ್ದರಿಂದ ಈಜಲು ಆಗದೆ ಇಬ್ಬರು ಮೃತಪಟ್ಟಿದ್ದಾರೆ.
ಸೋಲೊಮನ್ ಮಾರತ್ ಹಳ್ಳಿಯ ಕಾರು ಮಾರಾಟ ಕಂಪನಿಯಲ್ಲಿ ಉದ್ಯೋಗಿ ಆಗಿದ್ದರೆ, ಅಭಿಷೇಕ್ ಜೆ.ಪಿ.ನಗರದ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಮದುವೆ ತಯಾರಿಯಲ್ಲಿದ್ದವನು ಮಸಣ ಸೇರಿದ
ಹುಟ್ಟುಹಬ್ಬದಂದೆ ಸಾವಿನ ಕದತಟ್ಟಿರುವ ಸೋಲೊಮನ್ ಮದುವೆ ಮಾಡಿಕೊಳ್ಳುವ ತಯಾರಿಯಲ್ಲಿದ್ದರು ಎನ್ನಲಾಗಿದೆ. ಇವರಿಬ್ಬರ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಬ್ಬರು ಶವವಾಗಿ ಪತ್ತೆ ಆಗಿದ್ದು, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ