ಕರಾವಳಿಯಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ Vistara News

ಉತ್ತರ ಕನ್ನಡ

ಕರಾವಳಿಯಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ

ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸುವ ಉದ್ದೇಶದಿಂದ ಈ ಕಾರ್ಯಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಪೊಲೀಸ್‌ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

VISTARANEWS.COM


on

ಕರಾವಳಿಯಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆಯನ್ನು ಇಂದಿನಿಂದ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಇದು ಈ ವರ್ಷದ ಮೊದಲ ಕಾರ್ಯಾಚರಣೆ. ಸಮಾಜಘಾತುಕ ವ್ಯಕ್ತಿಗಳಿಂದ ಅಥವಾ ಭಯೋತ್ಪಾದಕರಿಂದ ದಾಳಿ ನಡೆದ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸುವ ಉದ್ದೇಶದಿಂದ ಈ ಕಾರ್ಯಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಪೊಲೀಸ್‌ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ ನೌಕಾಪಡೆ ಸಂಯುಕ್ತವಾಗಿ ಈ ಕಾರ್ಯಾಚರಣೆ ಹಮ್ಮಿಕೊಂಡಿವೆ. ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಾಚರಣೆಯಲ್ಲಿ ಇಲಾಖೆಗಳ ಸಿದ್ಧತೆಯ ಬಗ್ಗೆ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳಲಾಗುತ್ತಿದೆ.

ತುರ್ತು ಸಂದರ್ಭಗಳಲ್ಲಿ ತಕ್ಷಣಕ್ಕೆ ಸ್ಪಂದಿಸುವ ಸಾಮರ್ಥ್ಯ ಹೆಚ್ಚಿಸುವುದು, ನಾಗರಿಕರು ಹಾಗೂ ವಿವಿಧ ರಕ್ಷಣಾ ಇಲಾಖೆಗಳ ನಡುವೆ ಉತ್ತಮ ಸಂಬಂಧ ಮೂಡಿಸುವುದು, ಅಗತ್ಯ ಇರುವಲ್ಲಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ.

ಈ ಕಾರ್ಯಾಚರಣೆಯ ಕುರಿತು ಕಾರವಾರದ ಎಸ್‌ಪಿ ಸುಮನ್‌ ಪನ್ನೇಕರ್‌ ಹೆಚ್ಚಿನ ಮಾಹಿತಿ ನೀಡಿದ್ದಾರೆ. ಈ ಕಾರ್ಯಾಚರಣೆಯ ಭಾಗವಾಗಿ ಇಂದು(ಸೋಮವಾರ) ಪೊಲೀಸರು ಕಾಳಿ ನದಿ ಸೇತುವೆಯ ಬಳಿ, ಬೈತಖೋಲ್ ಬಂದರಿಗೆ ಹೋಗುವ ದಾರಿಯಲ್ಲಿ ಇರುವ ರೈಲು ನಿಲ್ದಾಣ, ಕಡಲತೀರಗಳು, ಚರ್ಚ್, ಮಸೀದಿ, ದೇವಸ್ಥಾನಗಳಲ್ಲಿ ಹಾಗೂ ನಗರದ ವಿವಿಧ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳನ್ನು ಪರಿಶೀಲಿಸಲಾಗಿದೆ.

ಅಲ್ಲದೆ, ಬೈತಖೋಲ್ ಬಂದರಿನ ಸುತ್ತಮುತ್ತ ಕೋಸ್ಟ್ ಗಾರ್ಡ್ ಸಿಬ್ಬಂದಿ ಮೀನುಗಾರಿಕೆ ದೋಣಿಗಳನ್ನು ಪರಿಶೀಲಿಸಲಾಗಿದೆ. ಅದರ ಪರವಾನಗಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ತಪಾಸಣೆ ಮಾಡಲಾಗಿದೆ. ಈ ಕಾರ್ಯಚರಣೆ ಆರಂಭಿಸುತ್ತಿದಂತೆಯೆ ಸುಅಮರು 18 ಜನ ಅಕ್ರಮವಾಗಿ ಕರಾವಳಿ ಪ್ರದೇಶಕ್ಕೆ ನುಗ್ಗಲು ಯತ್ನಿಸಿದ್ದು ಅವರನು ಸೆರೆ ಹಿಎಇಯಲಾಗಿದೆ ಹಾಗೂ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಹಾಗೂ ಈ ಕಾರ್ಯಾಚರಣೆ ನಾಳೆಯೂ(ಮಂಗಳವಾರ) ಮುಂದುವರೆಯಲಿದೆ ಎಂದು ಸುಮನ್‌ ಪನ್ನೇಕರ್‌ ತಿಳಿಸಿದರು.

ಇದನ್ನೂ ಓದಿ: ಶಿರಸಿಯಲ್ಲಿ KGF 2 ಓಪನಿಂಗ್‌ ಸೀನ್!‌ 15ನೇ ಶತಮಾನದ ವೀರಗಲ್ಲು ಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

Rain News: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Cloudy weather in Bengaluru for the entire day Rain Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಜತೆಗೆ ಗುಡುಗು ಮಿಂಚಿನ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನೆರಡು ದಿನಗಳು ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರಲ್ಲಿ ಮಳೆ ನಿರೀಕ್ಷೆ ಇದೆ.

ಇದನ್ನೂ ಓದಿ: Model Fashion Life: ಕಲಾತ್ಮಕ ರೆಟ್ರೊ ಫ್ಯಾಷನ್ ಪ್ರಿಯೆ ಮಾಡೆಲ್ ಲುಸಿ ಸರೆರಿಯಾ

ಭಾಗಶಃ ಮೋಡ ಕವಿದ ವಾತಾವರಣ!

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇಲ್ಲೆಲ್ಲ ಶುಷ್ಕ ವಾತಾವರಣ

ದಕ್ಷಿಣ ಒಳನಾಡಿ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಹಾಗೂ ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯೇ ಇರಲಿದೆ.

ಶನಿವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಮೂಲ್ಕಿ, ಪುತ್ತೂರು, ಮಂಗಳೂರು ವಿಮಾಣ ನಿಲ್ದಾಣದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಪಣಂಬೂರಲ್ಲಿ 2, ಮಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕನಿಷ್ಠ ಉಷ್ಣಾಂಶ 13.9 ಡಿ.ಸೆ ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Rain News : ದಕ್ಷಿಣ ಒಳನಾಡು ಹಾಗೂ ಮಲೆನಾಡು, ಕರಾವಳಿ ಭಾಗದಲ್ಲಿ ವರುಣ (Karnataka weather Forecast) ಸಕ್ರಿಯನಾಗಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.

VISTARANEWS.COM


on

By

Rain News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗಲಿದ್ದು, (Rain News) ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ. ಬಹುತೇಕ ಜಿಲ್ಲೆಗಳಲ್ಲಿ ಉರಿ ಉರಿ ವಾತಾವರಣ ಇರಲಿದೆ.

ಮೈಸೂರಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಸಾಧಾರಣದೊಂದಿಗೆ ಹಗುರ ಮಳೆ ಸಾಧ್ಯತೆ

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.

ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಮಧ್ಯಾಹ್ನ ಬಿಸಿಲು ಇರಲಿದೆ. ಸಂಜೆ ಅಥವಾ ರಾತ್ರಿಯಂದು ಆಯ್ದ ಕಡೆಗಳಲ್ಲಿ ಮಳೆ ಇರಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: KGF 3 Actor Yash | ಕೆಜಿಎಫ್​ನ ರಾಕಿ ಭಾಯ್​, ಪಾಂಡ್ಯ ಬ್ರದರ್ಸ್​ ಭೇಟಿ; ಕೆಜಿಎಫ್​ 3 ಟ್ರೆಂಡಿಂಗ್​

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 31 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ನಾಳೆ ಬೆಂಗಳೂರು ಸೇರಿ ಹಲವೆಡೆ ಮಳೆ ಸಾಧ್ಯತೆ!

Rain News : ಡಿ.10ರಂದು ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ (Karnataka weather Forecast) ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗುವ (Rain News) ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ.

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಹಗುರದಿಂದ ಮಳೆ ಇರಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.

ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cyber Crime: ಪಾರ್ಟ್‌ ಟೈಂ ಜಾಬ್‌ ಆಮಿಷ; ಲಿಂಕ್‌ ಕ್ಲಿಕ್ಕಿಸಿ ಕಾಸು ಲೂಟಿ, ಹೋಯಿತು ಕೋಟಿ ಕೋಟಿ!

ಕರಾವಳಿ- ಮಲೆನಾಡಲ್ಲಿ ಉತ್ತಮ ಮಳೆ

ರಾಜ್ಯದಲ್ಲಿ ಶುಕ್ರವಾರದಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಜಯಪುರ (ಚಿಕ್ಕಮಗಳೂರು ಜಿಲ್ಲೆ) 6, ಅಜ್ಜಂಪುರ (ಚಿಕ್ಕಮಗಳೂರು ಜಿಲ್ಲೆ), ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ) ತಲಾ 5 ಸೆಂ.ಮೀ ಮಳೆಯಾಗಿದೆ.

ಹೊಸದುರ್ಗ (ಚಿತ್ರದುರ್ಗ ಜಿಲ್ಲೆ), ಕಡೂರು (ಚಿಕ್ಕಮಗಳೂರು ಜಿಲ್ಲೆ) ತಲಾ 4 ಸೆಂ.ಮೀ ಹಾಗೂ ಕೊಟ್ಟಿಗೆಹಾರ, ಎನ್.ಆರ್.ಪುರ, ತರೀಕೆರೆ, ಯಗಟಿ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಬೇಲೂರು (ಹಾಸನ ಜಿಲ್ಲೆ), ಮೂರ್ನಾಡು (ಕೊಡಗು ಜಿಲ್ಲೆ) ತಲಾ 3 ಸೆಂ.ಮೀ ಮಳೆಯಾಗಿದೆ. ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) 2 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ವೈ.ಎನ್.ಹೊಸಕೋಟೆ, ಸಿರಾ (ಎರಡೂ ತುಮಕೂರು ಜಿಲ್ಲೆ), ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 1 ಸೆಂ. ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 14.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ವೀಕೆಂಡ್‌ಗೆ ಮಳೆ ಅಡ್ಡಿ! ಯಾವ್ಯಾವ ಜಿಲ್ಲೆಗೆ ಅಲರ್ಟ್‌

Rain News : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ಮಳೆ ಸೂಚನೆ (rain News) ಇದ್ದು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ (Karnataka weather Forecast) ಸುರಿಯಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದ ಅಲ್ಲಲ್ಲಿ ಚದುರಿದಂತೆ ಮಳೆಯಾಗಹುದು.

ಸಾಧಾರಣ ಮಳೆ!

ಉತ್ತರ ಒಳನಾಡಿನ ವಿಜಯನಗರ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ, ಗದಗ, ಹಾವೇರಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮೇಲುಗೈ ಸಾಧಿಸಲಿದೆ.

ಇದನ್ನೂ ಓದಿ: Funky Pant Suit Fashion: ಮೆನ್ಸ್ ಕ್ಲಾಸಿ ಪ್ಯಾಂಟ್‌ ಸೂಟ್‌ಗೂ ಸಿಕ್ತು ಫ್ಯಾನ್ಸಿ ಫಂಕಿ ಲುಕ್‌!

ಉತ್ತರ ಕನ್ನಡ, ಉಡುಪಿಗಿಲ್ಲ ಮಳೆ ಸೂಚನೆ

ಮಲೆನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಆಗಾಗ ಮರೆಯಾಗುವ ಸೂರ್ಯ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರ ಮಳೆಯಾಗಹುದು. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 17 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Bus-jeep accident
ಉಡುಪಿ6 mins ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ31 mins ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ32 mins ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ35 mins ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್36 mins ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Mysore people
ಕರ್ನಾಟಕ43 mins ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ59 mins ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್1 hour ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Moral policing
ಕರ್ನಾಟಕ2 hours ago

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

Akash anand is BSP Leader mayawati's political heir
ದೇಶ2 hours ago

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ3 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ6 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌