ಶಿರಸಿ: ಯಲ್ಲಾಪುರದಲ್ಲಿ 18 ರಿಂದ 59 ವರ್ಷದೊಳಗಿನವರಿಗೆ ಉಚಿತವಾಗಿ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ (COVID-19 vaccine) ನೀಡುವ ಅಭಿಯಾಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಶನಿವಾರ (ಜುಲೈ 16) ಚಾಲನೆ ನೀಡಿದರು.
75ರ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಅಭಿಯಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 75 ದಿನಗಳ ಕೋವಿಡ್ ಲಸಿಕೆ (COVID-19 vaccine) ಅಭಿಯಾನವನ್ನು. ಶುಕ್ರವಾರದಿಂದ (ಜುಲೈ15) ಈ ವಿಶೇಷ ಅಭಿಯಾನ ಶುರುವಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತಿದೆ. ಈ ಅಭಿಯಾನದ ಅಂಗವಾಗಿ ಯಲ್ಲಾಪುರದಲ್ಲಿಯೂ ಉಚಿತ ಕೋವಿಡ್ ಲಸಿಕೆ ನೀಡಲಾಗುತ್ತಿದೆ.
ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್, ಈ ಅಭಿಯಾನದ ಉಪಯೋಗವನ್ನು ಪಡೆದು 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ ಲಸಿಕೆಯನ್ನು ಪಡೆಯುವಂತೆ ಮನವಿ ಮಾಡಿದರು.
ತಾಲೂಕು ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ, ಪಟ್ಟಣ ಪಂಚಾಯತಿ ಸದಸ್ಯರಾದ ಅಮಿತ್ ಅಂಗಡಿ, ವೈದ್ಯಕೀಯ ಸಿಬ್ಬಂದಿ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ: COVID-19 vaccine | ರಾಜ್ಯಾದ್ಯಂತ 75 ದಿನಗಳ ಕೋವಿಡ್ ಲಸಿಕೆ ಅಮೃತ ಮಹೋತ್ಸವ ಆರಂಭ