ಶಿರಸಿ ಪ್ರತ್ಯೇಕ ಜಿಲ್ಲೆ | ಪಕ್ಷಾತೀತವಾಗಿ ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ ನಿಯೋಗ: ಸಕಾರಾತ್ಮಕ ಸ್ಪಂದನೆ Vistara News

ಉತ್ತರ ಕನ್ನಡ

ಶಿರಸಿ ಪ್ರತ್ಯೇಕ ಜಿಲ್ಲೆ | ಪಕ್ಷಾತೀತವಾಗಿ ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ ನಿಯೋಗ: ಸಕಾರಾತ್ಮಕ ಸ್ಪಂದನೆ

ಶಿರಸಿ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.

VISTARANEWS.COM


on

Delegation meets CM Basavaraj Bommai regarding sirsi seperate district
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಏಳು ತಾಲೂಕುಗಳನ್ನು ಸೇರಿಸಿಕೊಂಡು ಶಿರಸಿಯನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂಬ ಕುರಿತು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಶಿವರಾಂ ಹೆಬ್ಬಾರ್‌, ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಶಿರಸಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಮತ್ತಿತರರು ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

<strong>ಶ್ರೀನಿವಾಸ ಹೆಬ್ಬಾರ್<strong>

ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಅವರು, ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕೆಂದು 38 ವರ್ಷದಿಂದ ಹೋರಾಟ ನಡೆಯುತ್ತಿದೆ. ಜಿಲ್ಲೆಯ ಬೇಡಿಕೆ ಸದ್ಯದಲ್ಲೇ ಈಡೇರುವ ಮುನ್ಸೂಚನೆ ಲಭಿಸಿದೆ. ಜಿಲ್ಲಾ ಕೇಂದ್ರದಲ್ಲಿ ಪ್ರತಿ ಕೆಲಸಕ್ಕೂ 100 ಕಿಲೋ ಮೀಟರ್‌ ಸಾಗಬೇಕು ಎಂಬ ಪರಿಸ್ಥಿತಿ ಈಗ ಇದೆ. ಕಾರವಾರವು ಗೋವಾ ಗಡಿ ಹತ್ತಿರ ಇರುವುದರಿಂದ ಬೇರೆ ತಾಲೂಕಿನವರು ಅಲ್ಲಿಗೆ ತೆರಳುವುದು ಕಷ್ಟವಾಗುತ್ತದೆ. ಅಭಿವೃದ್ಧಿ ಆಗಬೇಕೆಂದರೆ ಶಿರಸಿ ಜಿಲ್ಲೆ ಆಗಬೇಕು. ಸಿಎಂ ಸಹ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

<strong>ಉಪೇಂದ್ರ ಪೈ <strong>

ಶಿರಸಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ ಮಾತನಾಡಿ, ಇದು ಅನೇಕ ವರ್ಷಗಳಿಂದ ನಡೆಯುತ್ತಿರುವ ಹೋರಾಟ. 12 ತಾಲೂಕುಗಳನ್ನು ಹೊಂದಿರುವ ಬಹುದೊಡ್ಡ ಜಿಲ್ಲೆ ಆಗಿರುವುದರಿಂದ, ಹೆಚ್ಚು ಗುಡ್ಡಗಾಡು ಪ್ರದೇಶ ಇರುವುದರಿಂಧ ರಸ್ತೆ ಸಂಪರ್ಕದ ಸಮಸ್ಯೆಯೂ ಇದೆ. ಕಾರವಾರಕ್ಕೆ ಹೋಗಬೇಕಾದರೆ, ವರ್ಷದ ನಾಲ್ಕೈದು ತಿಂಗಳು ಸಂಚಾರ ಸಮಸ್ಯೆ ಇರುತ್ತದೆ. ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿದ್ದೇವೆ, ಅವರಿಗೆ ಇದರ ವಿಚಾರ ತಿಳಿದಿದೆ. ಎಲ್ಲ ರಾಜಕೀಯ ಪಕ್ಷಗಳ ಕೇಂದ್ರ ಸ್ಥಾನ ಶಿರಸಿಯೇ ಆಗಿದೆ, ಶೈಕ್ಷಣಿಕ ಜಿಲ್ಲೆಯೂ ಆಗಿರುವುದರಿಂದ ಘಟ್ಟದ ಮೇಲಿನ ಏಳು ತಾಲೂಕು ಸೇರಿಸಿ ಜಿಲ್ಲೆ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ಹೊಸ ಜಿಲ್ಲೆಗಳನ್ನು ರೂಪಿಸುವಾಗ ಇದನ್ನೂ ಪರಿಗಣಿಸುವುದಾಗಿ ಹೇಳಿದ್ದಾರೆ. ಸದ್ಯದಲ್ಲೇ ಆಗುವ ನಿರೀಕ್ಷೆ ಇದೆ ಎಂದು ಹೇಳಿದರು.

<strong>ಗಣಪತಿ ನಾಯ್ಕ<strong>

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿ, ಸತತ 38 ವರ್ಷದ ಹೋರಾಟ ಕೊನೆಯ ಹಂತಕ್ಕೆ ಬಂದು ತಲುಪಿದೆ. ಕಾರವಾರಕ್ಕೆ ಹೋಗಲು ನಮಗೆ ಮೂರು ಗಂಟೆ ಬೇಕಾಗುತ್ತದೆ. ನಮಗಿಂತಲೂ ಹೆಚ್ಚಾಗಿ ಮುಂಡಗೋಡು, ಸಿದ್ದಾಪುರದವರಿಗೆ ಇನ್ನೂ ದೂರವಾಗುತ್ತದೆ. ಈ ಹೋರಾಟಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಶಿವರಾಮ ಹೆಬ್ಬಾರ್‌ ಅವರುಗಳು ಸಿಎಂ ಅವರಿಗೆ ಮನವರಿಕೆ ಮಾಡಿದ್ದಾರೆ. ಹೊಸ ಜಿಲ್ಲೆಗಳನ್ನು ಮಾಡುವಾಗ ಶಿರಸಿಗೆ ಪ್ರಾಶಸ್ತ್ಯ ನೀಡುತ್ತೇವೆ ಎಂಬ ಭರವಸೆಯನ್ನು ಸಿಎಂ ಬೊಮ್ಮಾಯಿ ನೀಡಿದ್ದಾರೆ ಎಂದು ತಿಳಿಸಿದರು.

ಈದನ್ನೂ ಓದಿ | Siddapura News | ಶಿರಸಿ ಜಿಲ್ಲೆ ರಚನೆಗೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಜತೆ ಚರ್ಚೆ: ಮಾರುತಿ ನಾಯ್ಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Sirsi News: ಉತ್ತರಕನ್ನಡ ಜಿಲ್ಲೆಗೆ ಮೆಡಿಕಲ್ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಧರಣಿ

Sirsi News ಉತ್ತರಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಆಗ್ರಹಿಸಿ, ಸ್ಥಳೀಯ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ 2ನೇ ಹಂತದ ಹೋರಾಟದ ಭಾಗವಾದ ಧರಣಿ ಸತ್ಯಾಗ್ರಹ ನಡೆಯಿತು.

VISTARANEWS.COM


on

Protest demanding construction of medical college and super specialty hospital in Uttara Kannada district
ಉತ್ತರಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಆಗ್ರಹಿಸಿ, ಸ್ಥಳೀಯ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.
Koo

ಶಿರಸಿ: ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು (Medical College) ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Specialty Hospital) ನಿರ್ಮಾಣ ಮಾಡುವಂತೆ ಆಗ್ರಹಿಸಿ, ಸ್ಥಳೀಯ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ 2ನೇ ಹಂತದ ಹೋರಾಟದ ಭಾಗವಾದ ಧರಣಿ ಸತ್ಯಾಗ್ರಹಕ್ಕೆ ಶಿರಸಿಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ನಗರದ ಮಾರಿಕಾಂಬಾ ದೇವಾಲಯದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಅಂಚೆವೃತ್ತ, ಸಿಪಿ ಬಜಾರ್, ದೇವಿಕೇರೆ ಮೂಲಕ ತಹಸೀಲ್ದಾರ್‌ ಕಚೇರಿಗೆ ತೆರಳಿ ಧರಣಿ ನಡೆಸಿದರು.

ಈ ವೇಳೆ ಮುಖಂಡ ಅನಂತಮೂರ್ತಿ ಹೆಗಡೆ ಮಾತನಾಡಿ, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಗೆ ತಕ್ಷಣ ಚಿಕಿತ್ಸೆ ಕೊಡಿಸಲು ಮೂರು ಗಂಟೆ ಪ್ರಯಾಣ ಮಾಡಬೇಕಾಗಿದೆ. ಏಷ್ಟೋ ಬಾರಿ ಮಾರ್ಗ ಮಧ್ಯೆ ಸಾವು ಸಂಭವಿಸುತ್ತಿವೆ, ಜಿಲ್ಲೆಯು ಸಮಸ್ಯೆಗಳ ತಾಣವಾಗಿದ್ದು, ಉತ್ತರವೇ ಕಾಣದ ಉತ್ತರ ಕನ್ನಡ ಜಿಲ್ಲೆ ಎಂಬುವಂತಾಗಿದೆ, ಇದಕ್ಕೆ ಜನಪ್ರತಿನಿಧಿಗಳ ನಿರ್ಲಕ್ಷ್ಯ, ಅಸಡ್ಡೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Pneumonia Outbreak: ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ಅಲರ್ಟ್‌

ಕುಮಟಾ ಭಾಗದಲ್ಲಿ ಮತ್ತು ಶಿರಸಿ ಭಾಗದಲ್ಲಿ ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಶಿರಸಿಯಿಂದ ಪಾದಯಾತ್ರೆ ಮೂಲಕ ಕಾರವಾರ ತಲುಪಿ ಮನವಿ ನೀಡಿದ್ದೆವು. ಸರ್ಕಾರ ಮಾತ್ರ ಪ್ರತಿಕ್ರಿಯೆ ನೀಡಿಲ್ಲ. ಈ ಕಾರಣಕ್ಕೆ ಎರಡನೇ ಹಂತದ ಹೋರಾಟಕ್ಕೆ ಇಳಿದಿದ್ದೇವೆ. ಇಂದಿನಿಂದ ಪ್ರತಿನಿತ್ಯ ನಗರದ ಮಿನಿವಿಧಾನಸೌಧ ಎದುರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ನಿರಂತರ ಹೋರಾಟ ಮಾಡಲಾಗುವುದು. ನಂತರ ಡಿ.4 ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ಸತ್ಯಾಗ್ರಹ ನಡೆಸಿ, ಮುಖ್ಯಮಂತ್ರಿಗೆ ಮನವಿ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರದ ಪಿಎಂ ಗರೀಬ್ ಕಲ್ಯಾಣ್ ಅನ್ನ ಸ್ಕೀಂ 5 ವರ್ಷದವರೆಗೆ ವಿಸ್ತರಣೆ!

ಈ ಸಂದರ್ಭದಲ್ಲಿ ಪ್ರಮುಖರಾದ ಉಮೇಶ ಹರಿಕಂತ್ರ, ಪರಮಾನಂದ ಹೆಗಡೆ, ಚಿದಾನಂದ ಹರಿಜನ, ಕೆಮು ಮರಾಠಿಕೊಪ್ಪ, ಸಂತೋಷ ನಾಯ್ಕ ಬ್ಯಾಗದ್ದೆ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.

Continue Reading

ಉತ್ತರ ಕನ್ನಡ

Murder Case : ಟಿಪ್ಪರ್‌ ಹಾಯಿಸಿ ಸ್ನೇಹಿತನ ಕೊಲೆ ಯತ್ನ; ಆದರೆ ಸತ್ತಿದ್ದು ಇನ್ಯಾರೋ!

Murder Case : ಇಲ್ಲಿ ನಡೆದ ಘಟನೆಯೊಂದರಲ್ಲಿ ಅಮಾಯಕ ಬಲಿಯಾಗಿದ್ದಾನೆ. ಆಟೋ ರಿಕ್ಷಾದ ಮೇಲೆ ಟಿಪ್ಪರ್‌ ನುಗ್ಗಿಸುವ ಕ್ರೌರ್ಯಕ್ಕೆ ಚಾಲಕ ಸಾವನ್ನಪ್ಪಿದ್ದಾನೆ.

VISTARANEWS.COM


on

Accused Vinayak Bhat
ಆಟೋ ರಿಕ್ಷಾ ಚಾಲಕನ ಕೊಂದ ವಿನಾಯಕ ಭಟ್‌
Koo

ಕಾರವಾರ: ಇಬ್ಬರು ಯುವಕರ ನಡುವಿನ ಜಗಳ ದ್ವೇಷಕ್ಕೆ (Rivarly between Friends) ತಿರುಗಿ ಕೊಲೆ ಮಾಡುವ (Murder Case) ಹಂತವನ್ನು ತಲುಪಿದೆ. ಆದರೆ, ಸಾವು ಕಂಡದ್ದು ಮಾತ್ರ ಇನ್ಯಾರೋ? ಇಂಥಹುದೊಂದು ಘಟನೆ ನಡೆದಿದ್ದು ಉತ್ತರ ಕನ್ನಡ ಜಿಲ್ಲೆಯ (Uttara Kannada News) ಹೊನ್ನಾವರದ ಅರೆಯಂಗಡಿ ಬಳಿ. ಇಲ್ಲಿನ ಯುವಕನೊಬ್ಬ ತನ್ನ ಸ್ನೇಹಿತನನ್ನು ಕೊಲ್ಲಲೆಂದು ಆತ ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಟಿಪ್ಪರ್‌ (Tipper Rams into Auto Rickshaw) ಹಾಯಿಸಿದ್ದಾನೆ. ಆದರೆ, ಸತ್ತಿದ್ದು ಮಾತ್ರ ಅಮಾಯಕನಾದ ಅಟೋ ಚಾಲಕ.

ವಿನಾಯಕ ಭಟ್‌ ಎಂಬಾತನಿಗೂ ಕೇಶವ ನಾಯ್ಕ ಮತ್ತು ವಸಂತ ನಾಯ್ಕ ಎಂಬವರಿಗೂ ಹಣಕಾಸಿನ ವಿಚಾರಕ್ಕೆ ಜಗಳ ಉಂಟಾಗಿತ್ತು. ಹೀಗಾಗಿ ಇಬ್ಬರ ಮಧ್ಯೆ ದ್ವೇಷ ಬೆಳೆದಿತ್ತು. ಮಂಗಳವಾರ ರಾತ್ರಿ ಕೇಶವ ಮತ್ತು ವಸಂತ ಅವರು ಆಟೋ ಒಂದರ ಬಳಿ ನಿಂತಿದ್ದರು. ಆಗ ಅವರನ್ನು ಕಂಡವನೇ ವಿನಾಯಕ ತಾನು ಚಲಾಯಿಸುತ್ತಿದ್ದ ಟಿಪ್ಪರನ್ನು ಅವರ ಮೇಲೆ ಹಾಯಿಸಿದ್ದ. ಆದರೆ, ಅಲ್ಲಿ ಕೇಶವ ಮತ್ತು ವಸಂತನ ಜತೆಗೆ ಆಟೋ ಚಾಲಕ ಓಲ್ವಿನ್‌ ಕೂಡಾ ನಿಂತಿದ್ದರು.

ವಿನಾಯಕ ಭಟ್‌ ಹಾಯಿಸಿದ ಟಿಪ್ಪರ್‌ ಆಲ್ವಿನ್‌, ಕೇಶವ ನಾಯ್ಕ್‌ ಮತ್ತು ವಸಂತ ನಾಯ್ಕ್‌ ಗೆ ಅಪ್ಪಳಿಸಿದೆ. ಈ ವೇಳೆ ಓಲ್ವಿನ್‌ ಅವರಿಗೆ ಅದು ಸರಿಯಾಗಿ ಗುದ್ದಿದ್ದು ತಲೆಗೆ ಗಂಭೀರವಾಗಿ ಗಾಯವಾಗಿದೆ. ಮೂವರೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರಲ್ಲಿ ಓಲ್ವಿನ್‌ ಮಾತ್ರ ಬದುಕುಳಿಯಲಿಲ್ಲ.

ಸಿಟ್ಟಿನ ಭರದಲ್ಲಿ ಅಮಾಯಕನನ್ನು ಬಲಿ ಪಡೆದ ಆರೋಪಿ ವಿನಾಯಕ ಭಟ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Murder Case : ಮೊಮ್ಮಗನಿಂದಲೇ ತಾತನ ಬರ್ಬರ ಹತ್ಯೆ!

ಪ್ರಿನ್ಸಿಪಾಲ್‌ ಕಿರುಕುಳ ಆರೋಪ: ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ (First PU Student) ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ (Self Immolation) ಮಾಡಿಕೊಂಡ (Student death) ಭೀಕರ ಘಟನೆ ಹಾವೇರಿ ಜಿಲ್ಲೆಯ (Haveri News) ಹಾನಗಲ್ ತಾಲೂಕಿನ ಡೊಳ್ಳೆಶ್ವರ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಕಾಲೇಜಿನ ಪ್ರಿನ್ಸಿಪಾಲ್‌ ಅವರ ಕಿರುಕುಳವೇ ಕಾರಣ ಎಂದು ಮನೆಯವರು ಆರೋಪಿಸಿದ್ದಾರೆ.

ಹಾನಗಲ್ ಪಟ್ಟಣದ ಎನ್ ಸಿಜೆಸಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಆದಿತ್ಯ ರಘುವೀರ ಚವ್ಹಾಣ (16) ಆತ್ಮಹತ್ಯೆ ಮಾಡಿಕೊಂಡವನು. ಆತ ಮಂಗಳವಾರ ಸಂಜೆ ತನ್ನ ಮನೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆಯಾದರೂ ಆತ ಬದುಕುಳಿಯಲಿಲ್ಲ.

Adithya Self immolation

ಆದಿತ್ಯ ಎನ್ ಸಿಜೆಸಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದ. ಆತ ಪ್ರಾಂಶುಪಾಲರ ಕಿರುಕುಳ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ. ಪ್ರಾಂಶುಪಾಲೆ ಅನಿತಾ ಹೊಸಮನಿ ಅವರು ಕಿರುಕುಳ ನೀಡಿದ್ದಾರೆ ಎನ್ನುವುದು ಮನೆಯವರ ಆರೋಪ.

ಅದಿತ್ಯನಿಗೆ ಪ್ರಿನ್ಸಿಪಾಲ್‌ ಬೈದಿದ್ದು, ಅದರಿಂದ ನೋವನುಭವಿಸಿ ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಿನ್ಸಿಪಾಲರು ಆದಿತ್ಯನಿಗೆ ಮಾತ್ರವಲ್ಲ, ಹಲವರಿಗೆ ಇದೇ ರೀತಿ ಅಪಮಾನ ಮಾಡಿದ್ದಾರೆ ಎಂದು ಮನೆಯವರು ಹೇಳುತ್ತಾರೆ.

ಈ ನಡುವೆ ಆದಿತ್ಯ ಕಾಲೇಜಿಗೆ ಸರಿಯಾಗಿ ಹೋಗುತ್ತಿರಲಿಲ್ಲ, ಇದಕ್ಕಾಗಿ ಪ್ರಿನ್ಸಿಪಾಲರು ಕರೆದು ಬುದ್ಧಿ ಹೇಳಿದ್ದಾರೆ. ಇದನ್ನೇ ಇಟ್ಟುಕೊಂಡು ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಕೂಡಾ ಹೇಳಲಾಗುತ್ತಿದೆ.

ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸುಟ್ಟು ಹೋದ ಆದಿತ್ಯನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟು ಹೊತ್ತಿಗಾಗಲೇ ದೇಹ ಸಂಪೂರ್ಣ ಸುಟ್ಟು ಹೋಗಿದ್ದರಿಂದ ಆತ ಬದುಕುಳಿಯಲಿಲ್ಲ ಎನ್ನಲಾಗಿದೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿರುವಾಗಲೇ ತನ್ನ ಸಾವಿಗೆ ಸಂಬಂಧಿಸಿ ಆದಿತ್ಯ ಮಾತನಾಡಿರುವ ವಿಡಿಯೋಗ ಈ ಜಾಲತಾಣದಲ್ಲಿ ಹರಿದಾಡುತ್ತಿದೆ.

Continue Reading

ಉತ್ತರ ಕನ್ನಡ

Student death : ಪ್ರಿನ್ಸಿಪಾಲ್‌ ಕಿರುಕುಳಕ್ಕೆ ನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

Student death : ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜಿನಲ್ಲಿ ಪ್ರಿನ್ಸಿಪಾಲ್‌ ಬೈದರು ಎಂಬ ಕಾರಣ ನೀಡಿ ಬೆಂಕಿ ಹಚ್ಚಿಕೊಂಡು ಪ್ರಾಣ ಕಳೆದುಕೊಂಡಿದ್ದಾನೆ.

VISTARANEWS.COM


on

Adithya Self immolation
Koo

ಹಾವೇರಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ (First PU Student) ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ (Self Immolation) ಮಾಡಿಕೊಂಡ (Student death) ಭೀಕರ ಘಟನೆ ಹಾವೇರಿ ಜಿಲ್ಲೆಯ (Haveri News) ಹಾನಗಲ್ ತಾಲೂಕಿನ ಡೊಳ್ಳೆಶ್ವರ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಕಾಲೇಜಿನ ಪ್ರಿನ್ಸಿಪಾಲ್‌ ಅವರ ಕಿರುಕುಳವೇ ಕಾರಣ ಎಂದು ಮನೆಯವರು ಆರೋಪಿಸಿದ್ದಾರೆ.

ಹಾನಗಲ್ ಪಟ್ಟಣದ ಎನ್ ಸಿಜೆಸಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಆದಿತ್ಯ ರಘುವೀರ ಚವ್ಹಾಣ (16) ಆತ್ಮಹತ್ಯೆ ಮಾಡಿಕೊಂಡವನು. ಆತ ಮಂಗಳವಾರ ಸಂಜೆ ತನ್ನ ಮನೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆಯಾದರೂ ಆತ ಬದುಕುಳಿಯಲಿಲ್ಲ.

ಆದಿತ್ಯ ಎನ್ ಸಿಜೆಸಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದ. ಆತ ಪ್ರಾಂಶುಪಾಲರ ಕಿರುಕುಳ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ. ಪ್ರಾಂಶುಪಾಲೆ ಅನಿತಾ ಹೊಸಮನಿ ಅವರು ಕಿರುಕುಳ ನೀಡಿದ್ದಾರೆ ಎನ್ನುವುದು ಮನೆಯವರ ಆರೋಪ.

ಅದಿತ್ಯನಿಗೆ ಪ್ರಿನ್ಸಿಪಾಲ್‌ ಬೈದಿದ್ದು, ಅದರಿಂದ ನೋವನುಭವಿಸಿ ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಿನ್ಸಿಪಾಲರು ಆದಿತ್ಯನಿಗೆ ಮಾತ್ರವಲ್ಲ, ಹಲವರಿಗೆ ಇದೇ ರೀತಿ ಅಪಮಾನ ಮಾಡಿದ್ದಾರೆ ಎಂದು ಮನೆಯವರು ಹೇಳುತ್ತಾರೆ.

ಈ ನಡುವೆ ಆದಿತ್ಯ ಕಾಲೇಜಿಗೆ ಸರಿಯಾಗಿ ಹೋಗುತ್ತಿರಲಿಲ್ಲ, ಇದಕ್ಕಾಗಿ ಪ್ರಿನ್ಸಿಪಾಲರು ಕರೆದು ಬುದ್ಧಿ ಹೇಳಿದ್ದಾರೆ. ಇದನ್ನೇ ಇಟ್ಟುಕೊಂಡು ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಕೂಡಾ ಹೇಳಲಾಗುತ್ತಿದೆ.

ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸುಟ್ಟು ಹೋದ ಆದಿತ್ಯನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟು ಹೊತ್ತಿಗಾಗಲೇ ದೇಹ ಸಂಪೂರ್ಣ ಸುಟ್ಟು ಹೋಗಿದ್ದರಿಂದ ಆತ ಬದುಕುಳಿಯಲಿಲ್ಲ ಎನ್ನಲಾಗಿದೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿರುವಾಗಲೇ ತನ್ನ ಸಾವಿಗೆ ಸಂಬಂಧಿಸಿ ಆದಿತ್ಯ ಮಾತನಾಡಿರುವ ವಿಡಿಯೋಗ ಈ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: Viral Video: ಈಕೆ ‘ಪೊರಕೆ’ ಓಬವ್ವ! ಗುಂಡು ಹಾರಿಸುತ್ತಿದ್ದವರನ್ನು ಹೆದರಿಸಿ, ಓಡಿಸಿದ ಹರ್ಯಾಣದ ಮಹಿಳೆ

ಟಿಪ್ಪರ್‌ ಹಾಯಿಸಿ ಸ್ನೇಹಿತನ ಕೊಲೆ ಯತ್ನ; ಆದರೆ ಸತ್ತಿದ್ದು ಇನ್ಯಾರೋ!

ಕಾರವಾರ: ಇಬ್ಬರು ಯುವಕರ ನಡುವಿನ ಜಗಳ ದ್ವೇಷಕ್ಕೆ ತಿರುಗಿ ಕೊಲೆ ಮಾಡುವ ಹಂತವನ್ನು ತಲುಪಿದೆ. ಆದರೆ, ಸಾವು ಕಂಡದ್ದು ಮಾತ್ರ ಇನ್ಯಾರೋ?

ಇಂಥಹುದೊಂದು ಘಟನೆ ನಡೆದಿದ್ದು ಹೊನ್ನಾವರದ ಹಿರೇಅಂಗಡಿ ಬಳಿ. ಇಲ್ಲಿನ ಯುವಕನೊಬ್ಬ ತನ್ನ ಸ್ನೇಹಿತನನ್ನು ಕೊಲ್ಲಲೆಂದು ಆತ ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಟಿಪ್ಪರ್‌ ಹಾಯಿಸಿದ್ದಾನೆ. ಆದರೆ, ಸತ್ತಿದ್ದು ಮಾತ್ರ ಅಮಾಯಕನಾದ ಅಟೋ ಚಾಲಕ.

ವಿನಾಯಕ ಭಟ್‌ ಎಂಬಾತನಿಗೂ ಕೇಶವ ನಾಯ್ಕ ಮತ್ತು ವಸಂತ ನಾಯ್ಕ ಎಂಬವರಿಗೂ ಹಣಕಾಸಿನ ವಿಚಾರಕ್ಕೆ ಜಗಳ ಉಂಟಾಗಿತ್ತು. ಹೀಗಾಗಿ ಇಬ್ಬರ ಮಧ್ಯೆ ದ್ವೇಷ ಬೆಳೆದಿತ್ತು. ಮಂಗಳವಾರ ರಾತ್ರಿ ಕೇಶವ ಮತ್ತು ವಸಂತ ಅವರು ಆಟೋ ಒಂದರ ಬಳಿ ನಿಂತಿದ್ದರು. ಆಗ ಅವರನ್ನು ಕಂಡವನೇ ವಿನಾಯಕ ತಾನು ಚಲಾಯಿಸುತ್ತಿದ್ದ ಟಿಪ್ಪರನ್ನು ಅವರ ಮೇಲೆ ಹಾಯಿಸಿದ್ದ. ಆದರೆ, ಅಲ್ಲಿ ಕೇಶವ ಮತ್ತು ವಸಂತನ ಜತೆಗೆ ಆಟೋ ಚಾಲಕ ಓಲ್ವಿನ್‌ ಕೂಡಾ ನಿಂತಿದ್ದರು.

Accused Vinayak Bhat
ಆರೋಪಿ ವಿನಾಯಕ ಭಟ್‌

ವಿನಾಯಕ ಭಟ್‌ ಹಾಯಿಸಿದ ಟಿಪ್ಪರ್‌ ಆಲ್ವಿನ್‌, ಕೇಶವ ನಾಯ್ಕ್‌ ಮತ್ತು ವಸಂತ ನಾಯ್ಕ್‌ ಗೆ ಅಪ್ಪಳಿಸಿದೆ. ಈ ವೇಳೆ ಓಲ್ವಿನ್‌ ಅವರಿಗೆ ಅದು ಸರಿಯಾಗಿ ಗುದ್ದಿದ್ದು ತಲೆಗೆ ಗಂಭೀರವಾಗಿ ಗಾಯವಾಗಿದೆ. ಮೂವರೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರಲ್ಲಿ ಓಲ್ವಿನ್‌ ಮಾತ್ರ ಬದುಕುಳಿಯಲಿಲ್ಲ.

ಸಿಟ್ಟಿನ ಭರದಲ್ಲಿ ಅಮಾಯಕನನ್ನು ಬಲಿ ಪಡೆದ ಆರೋಪಿ ವಿನಾಯಕ ಭಟ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಉತ್ತರ ಕನ್ನಡ

Escape Drama : ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಾಟಕ ಆಡಿದ ಮಹಿಳೆ!

Escape Drama : ಆಕೆಗೆ ಯಾರನ್ನೋ ಹೆದರಿಸಬೇಕಾಗಿತ್ತು, ಎಚ್ಚರಿಕೆ ಕೊಡಬೇಕಾಗಿತ್ತು. ಆದರೆ, ಆಕೆ ಆಯ್ಕೆ ಮಾಡಿಕೊಂಡಿದ್ದು ದುಬಾರಿ ದಾರಿ. ಆತ್ಮಹತ್ಯೆಯ ನಾಟಕವಾಡಿದ್ದ ಆಕೆಯನ್ನು ಈಗ ಬಂಧಿಸಲಾಗಿದೆ.

VISTARANEWS.COM


on

Suicide attempt in Kumata
Koo

ಕಾರವಾರ: ಮಹಿಳೆಯೊಬ್ಬರು ಮಕ್ಕಳನ್ನು ಬಸ್‌ ನಿಲ್ದಾಣದಲ್ಲಿ ಬಿಟ್ಟು ತಾನು ಸಮುದ್ರಕ್ಕೆ ಹಾರಿದಂತೆ (Jumping into sea) ನಾಟಕವಾಡಿ ಸಿಕ್ಕಿಬಿದ್ದಿದ್ದಾರೆ (Escape Drama). ಆದರೆ, ಅವರ ಈ ನಾಟಕ ಒಮ್ಮೆಗೆ ಎಲ್ಲರನ್ನೂ ಆತಂಕದ ಮಡುವಿಗೆ ತಳ್ಳಿತ್ತು.

ಈ ಘಟನೆ ನಡೆದಿರುವುದು ಉತ್ತರ ಕನ್ನಡ ಜಿಲ್ಲೆಯ (Uttara kannada News) ಕುಮಟಾದ ವನ್ನಳ್ಳಿ ಹೆಡ್‌ಬಂದರ್ ಬಳಿ. ನಿವೇದಿತಾ ಭಂಡಾರಿ ಎಂಬ ಮಹಿಳೆ ಈ ರೀತಿ ನಾಟಕ ಮಾಡಲು ಹೋಗಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ನಿವೇದಿತಾ ಅವರು ಹೊನ್ನಾವರದ ತೋರಗೋಡ ಗ್ರಾಮದ ನಿವಾಸಿ. ಅವರು ತಮ್ಮ ಇಬ್ಬರು ಮಕ್ಕಳನ್ನು ಕರೆದುಕೊಂಡು ಸ್ಕೂಟಿಯಲ್ಲಿ ಮನೆ ಬಿಟ್ಟಿದ್ದರು. ಇವರು ನವೆಂಬರ್ 25ರಂದು ಒಮ್ಮಿಂದೊಮ್ಮೆಗೆ ನಾಪತ್ತೆಯಾಗಿದ್ದರು.

ಅವರು ತಮ್ಮ ಇಬ್ಬರು ಮಕ್ಕಳನ್ನು ಕುಮಟಾದ ಪಿಕ್‌ಅಪ್ ಬಸ್‌ ನಿಲ್ದಾಣದಲ್ಲಿ ಬಿಟ್ಟು ತೆರಳಿದ್ದರು. ಅವರ ಸ್ಕೂಟಿ ಸಮುದ್ರದ ಬಳಿ ಪತ್ತೆಯಾಗಿತ್ತು. ಮಾಂಗಲ್ಯ, ಮೊಬೈಲ್ ಕೂಡಾ ಸಮುದ್ರದ ಪಕ್ಕದಲ್ಲೇ ಇತ್ತು. ಅವರ ವೇಲ್‌ ಸಮುದ್ರದ ಕಲ್ಲುಗಳ ಬಳಿ ಪತ್ತೆಯಾಗಿತ್ತು.

ಇದನ್ನೆಲ್ಲ ಗಮನಿಸಿದಾಗ ನಿವೇದಿತಾ ಭಂಡಾರಿ ಅವರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಸಹಜವಾದ ಸಂಶಯವಾಗಿತ್ತು. ಈ ನಡುವೆ, ಕಳೆದ ನಾಲ್ಕು ದಿನಗಳಿಂದ ಅವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಪೊಲೀಸರು ಮತ್ತು ಸ್ಥಳೀಯ ಜೀವರಕ್ಷಕರು ಹುಡುಕಾಡಿದ್ದರು. ಹೆಣ ಮೇಲೆ ಬರಬಹುದು ಎಂಬ ಕಾರಣದಿಂದ ಸಮುದ್ರ ತೀರದ ಉದ್ದಕ್ಕೂ ಹುಡುಕಾಟ ನಡೆದಿತ್ತು. ಆದರೆ, ಎಲ್ಲೂ ಶವ ಕೂಡಾ ಸಿಗದೆ ಇದ್ದಾಗ ಪೊಲೀಸರಿಗೆ ಸಂಶಯ ಬಂದಿದೆ.

Suicide attempt in Kumata
ಕುಮಟಾ ಸಮೀಪದ ಕಡಲ ತೀರದಲ್ಲಿ ಹುಡುಕಾಟ

ಅವರು ಮನೆಯವರನ್ನು ವಿಚಾರಿಸಿದರು. ಮನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ, ವೈಮನಸ್ಸು ಇದ್ದಿದ್ದು ಗೊತ್ತಾಗಿದೆ. ಹೀಗಾಗಿ ಗಂಡ ಮತ್ತು ಮನೆಯವರನ್ನು ಹೆದರಿಸುವ ಉದ್ದೇಶದಿಂದ ಅವರು ಆತ್ಮಹತ್ಯೆ ನಾಟಕವಾಡಿರಬಹುದು ಎಂಬ ಸಂಶಯ ಬಂದಿದೆ.

ಸಮುದ್ರಕ್ಕೆ ಹಾರಿಲ್ಲ ಎಂದರೆ ಎಲ್ಲಿ ಹೋಗಿರಬಹುದು ಎಂಬ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿದಾಗ ಹಲವು ಕಡೆ ಹುಡುಕಲಾಯಿತು. ಕೊನೆಗೂ ಆಕೆ ಎಲ್ಲಾದರೂ ಇರಬಹುದು ಎನ್ನುವ ಪೊಲೀಸ್‌ ಸಂಶಯ ನಿಜವಾಯಿತು. ಆಕೆ ಹೊನ್ನಾವರದ ಬಾಡಿಗೆ ಮನೆಯೊಂದರಲ್ಲಿ ಅವಿತು ಕುಳಿತಿದ್ದರು.

ಮನೆಯವರಿಗೆ ಪಾಠ ಕಲಿಸುವ ಉದ್ದೇಶದಿಂದ ನಿವೇದಿತಾ ಈ ರೀತಿ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ, ಪುಟ್ಟ ಮಕ್ಕಳನ್ನು ರಸ್ತೆಯಲ್ಲಿ ಬಿಟ್ಟು ಹೋದ ಉದ್ದೇಶವೇನು ಎನ್ನುವುದು ಸ್ಪಷ್ಟವಿಲ್ಲ. ಕುಮಟಾ ಸಿಪಿಐ ತಿಮ್ಮಪ್ಪ ನೇತೃತ್ವದ ಪೊಲೀಸ್ ತಂಡದಿಂದ ಮಹಿಳೆಯನ್ನು ಬಂಧಿಸಲಾಗಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming: ಒಂದೇ ಕುಟುಂಬದ ಐವರ ಆತ್ಮಹತ್ಯೆಗೆ ಬಿಗ್‌ ಟ್ವಿಸ್ಟ್;‌ ಬಡ್ಡಿ ದಂಧೆ ಕರಾಳತೆ ಬಯಲು

ಇದೇ ವೇಳೆ ಆಕೆ ತನಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಗಮನ ಸೆಳೆಯಲು ಕೂಡಾ ಈ ರೀತಿ ಮಾಡಿರಬಹುದು ಎಂಬ ಸಂಶಯವಿದೆ. ಸಾಮಾನ್ಯವಾಗಿ ತಮ್ಮ ಸಮಸ್ಯೆಗೆ, ತಾವು ಎದುರಿಸುತ್ತಿರುವ ಸಂಕಟಕ್ಕೆ ಯಾವ ಪರಿಹಾರವೂ ಇಲ್ಲದೆ ಹೋದಾಗ ಕೆಲವು ಹೆಣ್ಣುಮಕ್ಕಳು ಈ ರೀತಿಯ ನಾಟಕವಾಡುತ್ತಾರೆ.

Continue Reading
Advertisement
Fashion Show
ದೇಶ14 mins ago

Fashion Show : ಏಕತೆಗೆ ಧಕ್ಕೆ; ಫ್ಯಾಶನ್​ ಶೋದಲ್ಲಿ ಬುರ್ಖಾ ಹಾಕಿದ್ದಕ್ಕೆ ಮುಸ್ಲಿಂ ನಾಯಕನ ಆಕ್ಷೇಪ!

kalpamrutha cold pressed oil production unit inaugurated
ಕರ್ನಾಟಕ14 mins ago

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

Gadaga accident two bike riders dead
ಕರ್ನಾಟಕ14 mins ago

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Anju who went to Pakistan for to marry her lover, returns to India
ದೇಶ17 mins ago

Anju Love Story: ಪಾಕ್‌ಗೆ ಹೋಗಿ ಪ್ರಿಯಕರನ ಮದ್ವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್!

vijaypura accident
ಕರ್ನಾಟಕ30 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ41 mins ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ46 mins ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್57 mins ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ1 hour ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ1 hour ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌