Site icon Vistara News

ವಿದ್ಯುತ್‌ ಶಾಕ್‌ನಿಂದ ಯುವಕ ಸಾವು, ನೇತ್ರದಾನ ಮಾಡಿ ಸಾರ್ಥಕತೆ

electrocution

ಶಿರಸಿ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಬುಧವಾರ ಗದ್ದೆಯಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕನೊಬ್ಬ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ.

ಜಿನೇಂದ್ರ ಪಾರ್ಶ್ವನಾಥ್ ಬಸ್ತವಾಡ್ (18) ಎಂಬ ಯುವಕನೇ ದಾರುಣ ಸಾವನ್ನಪ್ಪಿದ ಯುವಕ. ಬುಧವಾರ ತನ್ನ ಗದ್ದೆಯಲ್ಲಿ ಬೋರವೆಲ್ ಶುರು ಮಾಡಲು ಹೋಗಿದ್ದ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಹಿಡಿದು ವಿದ್ಯುತ್ ಪ್ರವಹಿಸಿದೆ. ಗಂಭೀರ ಗಾಯಗೊಂಡು ಬಿದ್ದಿದ್ದ ಯುವಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಯುವಕ‌ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸಾವಿನಲ್ಲೂ ಸಾರ್ಥಕತೆ

ಯುವಕ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ ನಂತರ ಆತನ ಕುಟುಂಬದವರು ನೇತ್ರದಾನ ಮಾಡಲು ಶಿರಸಿಯ ಲಯನ್ಸ್ ನಯನ ನೇತ್ರ ಭಂಡಾರಕ್ಕೆ ಸಂಪರ್ಕಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ನೇತ್ರ ತಂಡದವರು ಯುವಕನ ನೇತ್ರಗಳನ್ನು ಸುರಕ್ಷಿತವಾಗಿ ಪಡೆದುಕೊಂಡು ಹೋಗಿದ್ದಾರೆ. ಮೃತ ಯುವಕ ಕಂಗಳಿಂದ ಇಬ್ಬರು ದೃಷ್ಟಿಹೀನರಿಗೆ ಬೆಳಕು ಲಭಿಸುವಂತಾಗಿದ್ದು, ಯುವಕನ ಕುಟುಂಬದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ | Organ Donation | ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ರೂಪಾಯಿ ಪರಿಹಾರ

Exit mobile version