Site icon Vistara News

ಶಿರಸಿಯಲ್ಲಿ ಸೆ.19ರಂದು ಸಂಸ್ಕೃತ ಪ್ರತಿಭಾ ಪುರಸ್ಕಾರ

ಪ್ರತಿಭಾ ಪುರಸ್ಕಾರ

ಶಿರಸಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ/ತೃತೀಯ ಭಾಷೆ ಸಂಸ್ಕೃತದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ 19ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತಾಧ್ಯಾಪಕ ಸಂಘ ಹಾಗೂ ಶಿರಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ನಡೆಯಲಿದೆ. ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಸೆ.19ರ ಬೆಳಗ್ಗೆ 10 ಗಂಟೆ ಕಾರ್ಯಕ್ರಮ ನಡೆಯಲಿದೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸ್ವರ್ಣವಲ್ಲೀ ಸೋಂದಾ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಶಿರಸಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಎಂ.ಎಸ್‌. ಹೆಗಡೆ, ಸಂಸ್ಕೃತ ವಿಷಯ ಪರಿವೀಕ್ಷಕರು ವೆಂಕಟರಮಣ ದೇ ಭಟ್ಟ, ರಾಜ್ಯ ಪ್ರೌಢಶಾಲಾ ಸಂಸ್ಕೃತಾಧ್ಯಾಪಕ ಸಂಘದ ಅಧ್ಯಕ್ಷ ವಿದ್ವಾನ್‌ ನಾರಾಯಣ ಭಟ್ಟ, ಸಂಘದ ಕೋಶಾಧಿಕಾರಿ ವಿದ್ವಾನ್‌ ಕೃಷ್ಣ ವಿ.ಭಟ್ಟ ಅವರು ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ | Music Event | ಸೆಪ್ಟೆಂಬರ್‌ 16-17ರಂದು ಪಂಡಿತ್‌ ಭೀಮಸೇನ್ ಜೋಶಿ ಸಂಗೀತೋತ್ಸವ

Exit mobile version