Gokarna Beach‌ : ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರಿನ ಐವರು ಪ್ರವಾಸಿಗರ ರಕ್ಷಣೆ Vistara News
Connect with us

ಉತ್ತರ ಕನ್ನಡ

Gokarna Beach‌ : ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರಿನ ಐವರು ಪ್ರವಾಸಿಗರ ರಕ್ಷಣೆ

Gokarna Beach‌ : ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಐವರು ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದರು. ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿದ್ದವರನ್ನು ರಕ್ಷಣೆ ಮಾಡಲಾಗಿದೆ. ಅಸ್ವಸ್ಥಗೊಂಡವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

VISTARANEWS.COM


on

Gokarna Beach Five tourists rescued
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada District) ಪ್ರಸಿದ್ಧ ಪ್ರವಾಸಿ (Tourist place) ಮತ್ತು ಪುಣ್ಯ ಕ್ಷೇತ್ರವಾದ (Religious Place) ಗೋಕರ್ಣದ ಸಮುದ್ರದಲ್ಲಿ (Gokarna Beach‌) ಈಜಲು ಹೋಗಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಗೋಕರ್ಣದ ಮುಖ್ಯ ಕಡಲತೀರದಲ್ಲಿ ಈ ಘಟನೆ ನಡೆದಿದೆ.

ಋತುರಾಜ್ (26), ಶ್ರೀಖಾಂಚು ಗುಪ್ತಾ (28), ಪ್ರಶಾಂತ ಚಂದ್ರಶೇಖರ್ (28), ಆರುಷಿ ಬನ್ಸಾಲ್ (27), ರೀತು ಪರ್ಹಾದಾಸ್ ರಕ್ಷಣೆಗೊಳಗಾದ ಪ್ರವಾಸಿಗರು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ‌ ಉದ್ಯೋಗಿಗಳಾಗಿದ್ದು, ಗಣೇಶ ಚತುರ್ಥಿಗೆ (Ganesh Chaturthi) ರಜೆ ಇರುವ ಹಿನ್ನೆಲೆಯಲ್ಲಿ ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದಿದ್ದರು.

Gokarna Beach Five tourists rescued

ಇದನ್ನೂ ಓದಿ: Cauvery water dispute : ತಮಿಳುನಾಡಿಗೆ ಕೂಡಲೇ ನೀರು ನಿಲ್ಲಿಸಿ: ಬಸವರಾಜ ಬೊಮ್ಮಾಯಿ ಗುಡುಗು

ಇವರು ಮೊದಲು ಸಮುದ್ರದಲ್ಲಿ ಆಟವಾಡಲು ಇಳಿದಿದ್ದಾರೆ. ಕೊನೆಗೆ ಈಜಲು ಶುರು ಮಾಡಿದ್ದಾರೆ. ಆದರೆ, ಅಲೆಗಳ ಹೊಡೆತಕ್ಕೆ ಸಿಲುಕಿ ದಡಕ್ಕೆ ಬರಲಾಗದೆ ಎಲ್ಲರೂ ಮುಳುಗುವ ಸ್ಥಿತಿಯಲ್ಲಿದ್ದರು. ಈ ವೇಳೆ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಅಲ್ಲೇ ಸಮೀಪ ಇದ್ದ ಲೈಫ್‌ಗಾರ್ಡ್ ಸಿಬ್ಬಂದಿಯು ಕೂಡಲೇ ಸಮುದ್ರಕ್ಕೆ ಜಿಗಿದು ಎಲ್ಲ ಪ್ರವಾಸಿಗರನ್ನು ರಕ್ಷಣೆ ಮಾಡಿದ್ದಾರೆ.

Gokarna Beach Five tourists rescued

ಇವರಲ್ಲಿ ಇಬ್ಬರು ಪ್ರವಾಸಿಗರು ತೀವ್ರ ಅಸ್ವಸ್ಥಗೊಂಡಿದ್ದರು. ಅಸ್ವಸ್ಥಗೊಂಡಿದ್ದ ಪ್ರವಾಸಿಗರನ್ನು ಕೂಡಲೇ ಗೋಕರ್ಣ ಪ್ರಾಥಮಿಕ ಸಮುದಾಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಗೋಕರ್ಣ ಪೊಲೀಸರು (Gokarna police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮುರ್ಡೇಶ್ವರದಲ್ಲಿ ಕಳೆದ ತಿಂಗಳು ನೀರುಪಾಲಾಗಿದ್ದ ಪ್ರವಾಸಿಗ

ಮುರ್ಡೇಶ್ವರ ಕಡಲ ತೀರದಲ್ಲಿ (Murdeshwara beach) ಆಗಸ್ಟ್‌ 14ರಂದು ನೀರಿಗೆ ಇಳಿದಿದ್ದ ಪ್ರವಾಸಿಗರಲ್ಲಿ ಒಬ್ಬರು ನೀರುಪಾಲಾಗಿ (Tourist drowned), ಇನ್ನೊಬ್ಬರನ್ನು ರಕ್ಷಿಸಲಾಗಿತ್ತು. ಕೋಲಾರ ಮೂಲದ ಮಣಿತೇಜಾ (21) ನೀರುಪಾಲಾಗಿದ್ದರೆ (Youth drowned), ಕೋಲಾರದ ಯಶ್ (22) ಎಂಬುವವರನ್ನು ರಕ್ಷಿಸಲಾಗಿದೆ.

ಇದನ್ನೂ ಓದಿ: Cauvery water dispute : ಕಾವೇರಿ ಸಂಬಂಧ ಯಾವುದೇ ಕಾರಣಕ್ಕೂ ಮೋದಿಯನ್ನು ಭೇಟಿಯಾಗಲ್ಲವೆಂದ ಎಚ್.ಡಿ. ದೇವೇಗೌಡ

ಕೋಲಾರ ಮೂಲದ 22 ಮಂದಿ ಪ್ರವಾಸಿಗರು ಮುರ್ಡೇಶ್ವರಕ್ಕೆ ಬಂದಿದ್ದರು. ಎಲ್ಲರೂ ಸಮುದ್ರ ತೀರದಲ್ಲೇ ನೀರಾಟವಾಡುತ್ತಿದ್ದರೆ, ಇಬ್ಬರು ಸ್ವಲ್ಪ ದೂರ ನೀರಿನಲ್ಲಿ ಮುಂದೆ ಹೋಗಿದ್ದಾರೆ. ಸಮುದ್ರಕ್ಕಿಳಿಯದಂತೆ ನಿರ್ಬಂಧ ಇದ್ದರೂ ಪ್ರವಾಸಿಗರು ನೀರಿಗೆ ಇಳಿದಿದ್ದರು. ಈ ನಡುವೆ, ಅವರಲ್ಲಿ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಕೂಡಲೇ ಅಲ್ಲಿದ್ದ ರಕ್ಷಕರು ಅವರಿಬ್ಬರನ್ನು ರಕ್ಷಿಸಲು ಮುಂದಾದರೂ ಯಶ್‌ ಮಾತ್ರ ಅವರ ಕೈಗೆ ಸಿಕ್ಕಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಕಬ್ಬು ಬೆಳೆಗಾರರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಡಿಸಿ ಗಂಗೂಬಾಯಿ ಮಾನಕರ್

Uttara Kannada News: ಕಾರವಾರ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಜಿಲ್ಲೆಯ ಕಬ್ಬು ಬೆಳಗಾರರ ಸಭೆಯು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅಧ್ಯಕ್ಷತೆಯಲ್ಲಿ ಜರುಗಿತು.

VISTARANEWS.COM


on

Edited by

sugar factory representatives and sugarcane growers meeting at DC office Karwar
ಕಾರವಾರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಜಿಲ್ಲೆಯ ಕಬ್ಬು ಬೆಳಗಾರರ ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಮಾತನಾಡಿದರು.
Koo

ಕಾರವಾರ: ಪ್ರಸಕ್ತ ಸಾಲಿನ ಕಬ್ಬು (Sugarcane) ಅರೆಯುವ ಹಂಗಾಮು ನವೆಂಬರ್ 1 ರಿಂದ 15ರ ವರೆಗೆ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆ (Sugar Factory) ವತಿಯಿಂದ ಜಿಲ್ಲೆಯ ಕಬ್ಬು ಬೆಳೆಗಾರರರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ, ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಜಿಲ್ಲೆಯ ಕಬ್ಬು ಬೆಳಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 2022-23 ರಲ್ಲಿ 10,18,382 ಮೆ. ಟನ್ ಕಬ್ಬು ನುರಿಸಲಾಗಿದ್ದು, 1,19,478 ಮೆ.ಟನ್ ಸಕ್ಕರೆ ಉತ್ಪಾದಿಸುವುದರೊಂದಿಗೆ 11.97% ಶೇಕಡಾ ಇಳುವರಿ ದಾಖಲಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 6,633 ಹೆಕ್ಟೇರ್ ಹೊಸ ಕಬ್ಬು ಹಾಗೂ 8,005 ಹೆಕ್ಟೇರ್ ಕುಳೆ ಕಬ್ಬು ಸೇರಿದಂತೆ ಒಟ್ಟು 14,638 ಹೆಕ್ಟೇರ್‌ನಲ್ಲಿ ಕಬ್ಬು ಬೆಳೆಯಲಾಗಿದೆ.

ಪ್ರಸಕ್ತ ಸಾಲಿನ ಕಬ್ಬು ಬೆಳೆಗೆ ಹಳಿಯಾಳ ತಾಲೂಕಿನ ಇ.ಐ.ಡಿ.ಪ್ಯಾರಿ (ಇಂಡಿಯಾ) ಲಿ ಇವರು ಪ್ರತಿ ಟನ್ ಗೆ ರೂ.3678 ನ್ಯಾಯ ಮತ್ತು ಲಾಭದಾಯಕ ಬೆಲೆಯನ್ನು ನಿಗಧಿಪಡಿಸಿದ್ದಾರೆ. ಜಿಲ್ಲೆಯ ಕಬ್ಬು ಬೆಳಗಾರರಿಂದ ಕಬ್ಬು ಖರೀದಿಸುವ ಸಂದರ್ಭದಲ್ಲಿ ಬೆಳಗಾರರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪರಸ್ಪರ ಸಮನ್ವಯದಿಂದ ಕಬ್ಬು ಖರೀದಿಯ ಎಲ್ಲಾ ಪ್ರಕ್ರಿಯೆಯನ್ನು ನಡೆಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ: Vijayanagara News: ಕನ್ನಡ ಮಾಧ್ಯಮದಲ್ಲಿ ಓದಿದರೆ ವಿಜ್ಞಾನಿಗಳಾಗುವುದಕ್ಕೆ ಅಡ್ಡಿ ಇಲ್ಲ: ಇಸ್ರೋ ವಿಜ್ಞಾನಿ ಡಾ.ಬಿ.ಎಚ್‌.ಎಂ ದಾರುಕೇಶ್‌

ಜಿಲ್ಲೆಯ ಇ.ಐ.ಡಿ.ಪ್ಯಾರಿ (ಇಂಡಿಯಾ) ಲಿ ಅವರು ರೈತರು ಕಾರ್ಖಾನೆಗೆ ತರುವ ಕಬ್ಬನ್ನು ತೂಕ ಮಾಡುವಾಗ ಬೆಳಗಾರರು ಮತ್ತು ಕಾರ್ಖಾನೆಯ ನಡುವೆ ಗೊಂದಲಗಳು ಇದ್ದು, ಈ ಪ್ರಕ್ರಿಯೆಯಲ್ಲಿ ಪಾರದರ್ಶಕವಾಗಿ ತೂಕ ಮಾಡುವಂತೆ ಮತ್ತು ತೂಕದ ಪ್ರಮಾಣವನ್ನು ಬೆಳಗಾರರು ನೋಡಲು ಅನುಕೂಲವಾಗುವಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮಾಡುವಂತೆ ಹಾಗೂ ಮುಂದಿನ ಅವಧಿಯ ವೇಳೆಗೆ ಕಾರ್ಖಾನೆಯ ಪ್ರವೇಶ ದ್ವಾರದಲ್ಲಿಯೇ ತೂಕ ಪರೀಕ್ಷಿಸಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚದಲ್ಲಿ ಹೆಚ್ಚಿನ ದರ ಪಡೆಯುತ್ತಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ರೈತ ಮುಖಂಡರು, ಇತರೆ ಜಿಲ್ಲೆಯಲ್ಲಿ ಪ್ರತಿ ಟನ್ ಗೆ 772 ದರ ಇದ್ದು, ಜಿಲ್ಲೆಯಲ್ಲಿ 893 ರೂ. ದರ ಇದೆ ಎಂದು ಅಸಮದಾನ ವ್ಯಕ್ತಪಡಿಸಿ, ಹಿಂದಿನ ಆದೇಶದ ಪ್ರಕಾರ ದರ ಪಡೆಯುವಂತೆ ತಿಳಿಸಿದರು. ಈ ಕುರಿತಂತೆ ಕಾರ್ಖಾನೆಯ ಅಧಿಕಾರಿಗಳು ಪರಿಶೀಲಿಸಿ ದರ ಕಡಿಮೆಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕಾರ್ಖಾನೆಗೆ ತೆಗೆದುಕೊಂಡು ಬಂದ ಕಬ್ಬನ್ನು ಕೂಡಲೇ ತೂಕ ಮಾಡದೇ 2-3 ದಿನ ತಡವಾಗಿ ತೂಕ ಮಾಡುವುದರಿಂದ ಕಬ್ಬು ಒಣಗಿ ತೂಕ ಕಡಿಮೆಯಾಗುತ್ತಿದೆ. ಅಲ್ಲದೇ ಪ್ಲಾಂಟೇಷನ್ ಸ್ಲಿಪ್ ಮತ್ತು ಆದ್ಯತಾ ಪಟ್ಟಿ ನೀಡಬೇಕು. ಪ್ರತಿದಿನ ರಿಕವರಿಯನ್ನು ಪಾರದರ್ಶಕವಾಗಿ ತೋರಿಸುವಂತೆ ರೈತರು ಆಗ್ರಹಿಸಿದರು. ಜಿಲ್ಲೆಯ ಕಬ್ಬು ಬೆಳಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಗೊಂದಲ ಮತ್ತು ಸಮಸ್ಯೆಗಳಿಗೆ ಆಸ್ಪದ ನೀಡದಂತೆ ಸಕ್ಕರೆ ಕಾರ್ಖಾನೆಯು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ

ಉಳಿದಂತೆ ಹಿಂದಿನ ದಾಖಲೆಗಳನ್ನು ಪರಿಶೀಲಿಸಿ 2016-17 ರಲ್ಲಿನ ಎಫ್.ಆರ್.ಪಿ ಮೇಲಿನ ಹೆಚ್ಚುವರಿ ಬಾಕಿ ಮೊತ್ತ ರೂ.305 ರೂಪಾಯಿಗಳನ್ನು ಬೆಳಗಾರರಿಗೆ ಪಾವತಿಸುವಂತೆ ತಿಳಿಸಿದರು. ಈ ಹಿಂದೆ ರೈತರ ಮೇಲೆ ಕಾರ್ಖಾನೆ ದಾಖಲಿಸಿರುವ ಪ್ರಕರಣಗಳ ವಿವರ ಪಡೆದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಕಾರವಾರ ಉಪ ವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್, ಆಹಾರ ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ್, ಇ.ಐ.ಡಿ.ಪ್ಯಾರಿ (ಇಂಡಿಯಾ) ಪ್ರೈ.ಲಿ ವ್ಯವಸ್ಥಾಪಕ ವೆಂಕಟರಾವ್, ಕಬ್ಬು ಬೆಳಗಾರರ ಮುಖಂಡರು ಮತ್ತು ರೈತ ಮುಖಂಡರು ಮತ್ತಿತರರು ಭಾಗವಹಿಸಿದ್ದರು.

Continue Reading

ಉತ್ತರ ಕನ್ನಡ

Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ

Sirsi News: ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ಮನೆಯ ಹಿಂಬಾಗದಲ್ಲಿ ಅಕ್ರಮ‌ವಾಗಿ ದಾಸ್ತಾನು‌‌ ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Edited by

Sandalwood sticks seized for illegal stocked
ಅಕ್ರಮ‌ವಾಗಿ ದಾಸ್ತಾನು‌‌ ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಪಡಿಸಿಕೊಂಡಿರುವುದು.
Koo

ಶಿರಸಿ: ಮನೆಯ ಹಿಂಬಾಗದಲ್ಲಿ ಅಕ್ರಮ‌ವಾಗಿ (Illegal) ದಾಸ್ತಾನು‌‌ ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ (Sandalwood) ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿದೆ.

ನರೂರು ಗ್ರಾಮದ ಸದಾನಂದ ಬಸಪ್ಪ‌ ಗೌಡ ಅವರ ಮನೆಯ ಹಿಂಬಾಗದಲ್ಲಿ ಕಾನೂನು ಬಾಹಿರವಾಗಿ‌ ಶ್ರೀಗಂಧದ ತುಂಡುಗಳನ್ನು ದಾಸ್ತಾನು ಇಟ್ಟಿರುವ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸುಮಾರು 2 ಲಕ್ಷ 25 ಸಾವಿರ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತನಾದ ಸದಾನಂದ ಬಸಪ್ಪ ಗೌಡ ತಲೆಮರೆಸಿಕೊಂಡಿದ್ದು ಆರೋಪಿಗೆ ಹುಡುಕಾಟ ನಡೆದಿದೆ.

ಇದನ್ನೂ ಓದಿ: Oscars 2024: ಮುಂದಿನ ʻಆಸ್ಕರ್‌ʼ ರೇಸ್‌ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ?

ಅರಣ್ಯ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಅಹಮದ್ ಶೇಖ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಂ. ವಾಲಿ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅಜಯ್ ನಾಯ್ಕ್, ಉಪ ವಲಯ ಅರಣ್ಯಾಧಿಕಾರಿಗಳಾದ ಇಲಿಯಾಸ್ ಶೇಖ್,ರಾಜು ಪೂಜಾರ,ಚಿದಂಬರ‌ ಗೌಡ ಹಾಗೂ‌‌ ಚಾಲಕ ನಂದೀಶ್ ಗಾಡಿಗೇರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Continue Reading

ಉತ್ತರ ಕನ್ನಡ

ದೇವಾಲಯದ ಅವಶೇಷಕ್ಕೆ ಕಲ್ಲೆಸೆದ ಅನ್ಯಕೋಮಿನ ಯುವಕರು; ಹಿಂದು ಸಂಘಟನೆಗಳು ಕಿಡಿ

ಅನ್ಯಕೋಮಿನ ಯುವಕ ಗುಂಪೊಂದು ಶಿವನ ದೇವಾಲಯದ ಅವಶೇಷಕ್ಕೆ ಕಲ್ಲೆಸೆದು ಹಾನಿ ಮಾಡಿರುವ ಘಟನೆ ನಡೆದಿದೆ.

VISTARANEWS.COM


on

Edited by

police visit the place of shiva temple
Koo

ಕಾರವಾರ: ಇಲ್ಲಿನ ಜೋಯಿಡಾ ರಾಮನಗರದ ನಾಗೋಡಾ ಕ್ರಾಸ್ ಬಳಿ ಜಲಾಶಯ ವ್ಯಾಪ್ತಿಯಲ್ಲಿದ್ದ ಶಿವ ದೇವಾಲಯದ ಅವಶೇಷಕ್ಕೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.

ಅನ್ಯಕೋಮಿನ ಯುವಕರು ಈ ಕೃತ್ಯ ಎಸಗಿದ್ದು, ಹಿಂದು ಸಂಘಟನೆಗಳು ಕಿಡಿಕಾರಿದ್ದಾರೆ. ಸೂಪಾ ಜಲಾಶಯದಲ್ಲಿ ಶಿವನ ದೇವಾಲಯವು ಮುಳುಗಡೆಯಾಗಿತ್ತು. ಸದ್ಯ ಮಳೆ ಇಲ್ಲದೆ ನೀರು ಕಡಿಮೆಯಾಗುವ ವೇಳೆ ದೇವಾಲಯ ಕಾಣಿಸಿಕೊಳ್ಳುತ್ತದೆ. ಹೀಗೆ ಕಂಡ ದೇವಾಲಯದ ಕಲ್ಲುಗಳಿಗೆ ಹಾನಿ ಮಾಡಿದ್ದಾರೆ.

ಸೆ.18 ರಂದು ಅನ್ಯಕೋಮಿನ ಯುವಕರ ಗುಂಪು ಶಿವನ ದೇವಾಲಯದ ಅವಶೇಷಗಳನ್ನು ಕಲ್ಲಿನಿಂದ ಹೊಡೆದು ಹಾಕಿದ್ದಾರೆ. ದಾಂಡೇಲಿ ಮೂಲದ 6 ಮಂದಿ ಈ ದುಷ್ಕೃತ್ಯ ವೆಸಗಿದ್ದಾರೆ.

ಪೊಲೀಸರಿಗೆ ಮನವಿ ಮಾತ್ರ ನೀಡಿದ ಹಿಂದು ಸಂಘಟನೆಯ ಕಾರ್ಯಕರ್ತರು

ಅವಶೇಷಗಳಿಗೆ ಹಾನಿ ಮಾಡುವುದನ್ನು ಸೆಲ್ಫಿ ವಿಡಿಯೋ ಮಾಡಿ ಹಾಕಿಕೊಂಡು ಹುಸೈನ್ ಶೇಖ್ ಎಂಬಾತ ತನ್ನ ಫೇಸ್‌ಬುಕ್‌ನಲ್ಲಿ ಹಾಕಿಕೊಂಡಿದ್ದಾನೆ. ಹಿಂದೂ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುತ್ತಿರುವವರ ಬಂಧನಕ್ಕೆ ಒತ್ತಾಯಿಸಿದ್ದಾರೆ. ಹಿಂದು ಸಂಘಟನೆಯ ಕಾರ್ಯಕರ್ತರು ರಾಮನಗರ ಪೊಲೀಸರಿಗೆ ಮನವಿ ಪತ್ರವನ್ನು ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Weather Report : ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ ಗಸ್ತು!

Rain News : ರಾಜ್ಯದ 20 ಜಿಲ್ಲೆಗಳಲ್ಲಿ ಮಳೆರಾಯನಿಗೆ ಬಿಡುವೇ ಇರುವುದಿಲ್ಲ. ವಾರಾಂತ್ಯದವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

VISTARANEWS.COM


on

Edited by

Women men walking in Rain in road
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆರಾಯನ (Rain News) ಗಸ್ತು ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದರೆ, ಇತ್ತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭರ್ಜರಿ ಮಳೆಯಾಗುವ (Weather report) ಸಾಧ್ಯತೆ ಇದೆ.

ಬೆಂಗಳೂರು ಟು ಮೈಸೂರು ಭಾರಿ ಮಳೆ

ದಕ್ಷಿಣ ಒಳನಾಡಿನ ಮೈಸೂರು, ರಾಮನಗರ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯದಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಿಜಯಪುರದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ.

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ರಾತ್ರಿಗೆ ಮಳೆ ಕಾಟ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕೆಲವೆಡೆ ಬಿರುಗಾಳಿ ಸಾಧ್ಯತೆ

ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನುಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಇದನ್ನೂ ಓದಿ: Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್‌ಟಾಕ್‌ ಸ್ಟಾರ್‌ಗೆ 2 ವರ್ಷ ಜೈಲು ಶಿಕ್ಷೆ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 22ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.6160165735
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.440194
ಘಟಪ್ರಭಾ ಜಲಾಶಯ
(Ghataprabha Dam)
662.9142.402311181
ತುಂಗಾಭದ್ರಾ ಜಲಾಶಯ (Tungabhadra Dam)497.7162.92437810316
ಭದ್ರಾ ಜಲಾಶಯ (Bhadra Dam)657.7343.23290290
ಕಬಿನಿ ಜಲಾಶಯ (Kabini Dam)696.1314.8031664390
ಹಾರಂಗಿ
(Harangi Dam)
871.388.0613352791
ಲಿಂಗನಮಕ್ಕಿ (Linganamakki Dam) 554.4468.3054935393
ಹೇಮಾವತಿ
(Hemavathi Dam)
890.5817.6649861300

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
MLA Gopalakrishna Belur surprise visit to Ripponpet Primary Health Centre
ಶಿವಮೊಗ್ಗ1 min ago

Shivamogga News: ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಆಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ

Vehicle Scrapping
ಕರ್ನಾಟಕ3 mins ago

Cabinet Meeting: ವಾಹನಗಳ ಗುಜರಿ ನೀತಿ-2022 ಜಾರಿ ಮಾಡಲು ಸಚಿವ ಸಂಪುಟ ಒಪ್ಪಿಗೆ

Danish Ali and Rahul Gandhi
ದೇಶ6 mins ago

‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Vistara Top 10 News 22
ಕರ್ನಾಟಕ25 mins ago

VISTARA TOP 10 NEWS: ಬಿಜೆಪಿ-ಜೆಡಿಎಸ್ ಮೈತ್ರಿ ಸೆಟ್ಟಾಯ್ತು, ಸೆ. 26ರವರೆಗೆ ನೀರು ಬಿಡೋದೂ ಫಿಕ್ಸಾಯ್ತು!

Zameer Pinjara
ಕರ್ನಾಟಕ53 mins ago

Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!

3 Indian companies among America's happiest employees top 20 company list
ಪ್ರಮುಖ ಸುದ್ದಿ1 hour ago

Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್‍ 20 ಪಟ್ಟಿಯಲ್ಲಿ ಭಾರತದ 3 ಕಂಪನಿ!

Team india
ಕ್ರಿಕೆಟ್1 hour ago

Team India : ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ 3 ಮಾದರಿಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಮಾಡಿದ ಟೀಮ್ ಇಂಡಿಯಾ

Cauvery Dispute cabinet meeting
ಕರ್ನಾಟಕ1 hour ago

Cabinet Meeting: ಸೆ.26ರವರೆಗೆ ನೀರು ಬಿಡುಗಡೆ ಫಿಕ್ಸ್‌; ಬಳಿಕ ಬಿಡುವುದಿಲ್ಲ ಎಂದು ಅಧಿವೇಶನ ಕರೆದು ನಿರ್ಣಯ?

Ruturaj Gaikwad
ಕ್ರಿಕೆಟ್2 hours ago

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

Cat eyed snake
ಕರ್ನಾಟಕ2 hours ago

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ3 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ19 hours ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ6 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ6 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ7 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

Dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದರೆ ನಷ್ಟ ಗ್ಯಾರಂಟಿ!

ಟ್ರೆಂಡಿಂಗ್‌