ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದವರಾದ ಎಪಿಎಂಸಿ ಮಾಜಿ ಅಧ್ಯಕ್ಷ, ಸಹಕಾರಿ ಮುಖಂಡರಾದ ಮಲ್ಲಿಕಾರ್ಜುನ ಕುಟ್ರಿ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಮಲ್ಲಿಕಾರ್ಜುನ ಕುಟ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವು ಗಣ್ಯರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಕುಟ್ರಿ ಅವರು ಎಪಿಎಂಸಿ ಮಾಜಿ ಅಧ್ಯಕ್ಷರಾಗಿ, ಟಿಎಪಿಸಿಎಂ ಸೊಸೈಟಿ ಅಧ್ಯಕ್ಷರಾಗಿ, ತಾಲೂಕು ಪಂಚಾಯಿತಿ ಸದಸ್ಯರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ.
ಸಚಿವ ಶಿವರಾಮ ಹೆಬ್ಬಾರ್ ಸಂತಾಪ
ಮುಂಡಗೋಡದ ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಆತ್ಮೀಯರಾದ ಕೊಪ್ಪ ಗ್ರಾಮದ ಮಲ್ಲಿಕಾರ್ಜುನ ಕುಟ್ರಿ ನಮ್ಮನ್ನು ಅಗಲಿದ ಸುದ್ದಿ ಅತೀವ ದುಃಖ ತಂದಿದೆ. ಎಪಿಎಂಸಿ ಅಧ್ಯಕ್ಷರಾಗಿ ತಾಲೂಕಿನ ರೈತಾಪಿ ವರ್ಗದ ಕಲ್ಯಾಣಕ್ಕಾಗಿ ಕುಟ್ರಿ ಅವರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅನೇಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಸೇವೆಯಲ್ಲಿ ಮಾಡಿದ್ದಾರೆ. ಅವರ ಅಗಲಿಕೆಯು ತಾಲೂಕಿನ ರೈತಾಪಿ ವಲಯಕ್ಕೆ ಹಾಗೂ ಸಮಾಜಕ್ಕೆ ಭರಿಸಲಾಗದ ನಷ್ಟ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಅಗಲಿಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಶಿವರಾಮ ಹೆಬ್ಬಾರ್ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ | ನಿಸರ್ಗಪ್ರಿಯ ಕಾವ್ಯನಾಮದಿಂದ ಪ್ರಸಿದ್ಧರಾಗಿದ್ದ ಸಾಹಿತಿ ಸಿದ್ದಗಂಗಯ್ಯ ಕಂಬಾಳು ಇನ್ನಿಲ್ಲ