Site icon Vistara News

ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಕಂಡುಬಂದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ವಾಸು ಪೆಡ್ನೇಕರ್ ಎಂಬುವವರ ಮನೆಯ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಅತಂಕಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸುಮಾರು 12 ಅಡಿಗೂ ಅಧಿಕ ಉದ್ದದ ಕಾಳಿಂಗ ಸರ್ಪವನ್ನು ವಶಕ್ಕೆ ತೆಗೆದುಕೊಂಡರು. ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ ಬಳಿಕ ಸ್ಥಳೀಯರು ನಿಟ್ಟುಸಿರುಬಿಟ್ಟರು. ಸೆರೆ ಹಿಡಿದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇದನ್ನೂ ಓದಿ| ಗೋಡೆಯಲ್ಲಿ ಸಿಲುಕಿ ನರಳಾಡುತ್ತಿದ್ದ ಹಾವಿನ ರಕ್ಷಣೆ

Exit mobile version