Banavasi News: ಭಗವಂತ ನಮ್ಮನ್ನು ಸೃಷ್ಟಿಸಿರುವುದೇ ಸಮಾಜಕ್ಕೆ ಒಳಿತನ್ನು ಮಾಡಲು: ಹರಿಪ್ರಕಾಶ್ ಕೋಣೆಮನೆ Vistara News

ಉತ್ತರ ಕನ್ನಡ

Banavasi News: ಭಗವಂತ ನಮ್ಮನ್ನು ಸೃಷ್ಟಿಸಿರುವುದೇ ಸಮಾಜಕ್ಕೆ ಒಳಿತನ್ನು ಮಾಡಲು: ಹರಿಪ್ರಕಾಶ್ ಕೋಣೆಮನೆ

Banavasi News: ಉತ್ತರ ಕನ್ನಡ ಜಿಲ್ಲೆ ಬನವಾಸಿಯಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಠ್ಠಲಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಸ್ತಾರ ನ್ಯೂಸ್ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ಮಾತನಾಡಿದ್ದಾರೆ.

VISTARANEWS.COM


on

Vistara News Editor in Chief and CEO Hariprakash Konemane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬನವಾಸಿ: ಜಾತಿ ವ್ಯವಸ್ಥೆಯನ್ನು ಹುಟ್ಟಿನಿಂದ ತಿಳಿಯದೇ ಗುಣದಿಂದ ತಿಳಿಸುವ ಕೆಲಸವಾಗಬೇಕಿದೆ. ದೇಶದಲ್ಲಿ ಅದೆಷ್ಟೋ ಜಾತಿ-ಸಮಾಜಗಳಿವೆ. ಆಯಾ ಸಮಾಜಕ್ಕೆ ಅದರದ್ದೇ ಆದ ಸ್ಥಾನ‌ಮಾನವಿದೆ. ಜಾತಿ ವ್ಯವಸ್ಥೆ ಇರಬೇಕು. ಆದರೆ, ಅದು ಏಕತೆಯಿಂದ ಕೂಡಿರಬೇಕೇ ವಿನಃ ಪ್ರತ್ಯೇಕವಾಗಬಾರದು. ಭಗವಂತ ನಮ್ಮನ್ನು ಸೃಷ್ಟಿಸಿರುವುದು ಸಮಾಜಕ್ಕೆ ಒಳ್ಳೆಯ ಕಾರ್ಯ ಮಾಡಲು ವಿನಃ ಜಾತಿ ಜಾತಿಯ ನಡುವೆ ಭಿನ್ನಾಭಿಪ್ರಾಯ ಮಾಡುವುದಕ್ಕೆ ಅಲ್ಲ. ನಾಡಿನಲ್ಲಿ ಸಣ್ಣ ಸಮಾಜದವರು ಸಂಘಟಕರಾಗಬೇಕಾಗಿದೆ ಎಂದು ವಿಸ್ತಾರ ನ್ಯೂಸ್ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆ ಬನವಾಸಿಯ (Banavasi News) ನಾಮದೇವ ಕಲ್ಯಾಣ ಮಂಟಪದಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿಯ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ನಾಮದೇವ ಶಿಂಪಿ ಮತ್ತು ಭಾವಸಾರ ಕ್ಷತ್ರೀಯ ಸಮಾಜದ ಸಾಧಕರಿಗೆ ರಾಜ್ಯ ಮಟ್ಟದ ವಿಠ್ಠಲಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಸಾವಿರಾರು ಜಾತಿಗಳಿವೆ, ಅದರಲ್ಲಿ ನಾಮದೇವ ಶಿಂಪಿ ಸಮಾಜಕ್ಕೆ ಅದರದ್ದೇ ಆದ ಮಹತ್ವವಿದೆ ಎಂದ ಅವರು, ನಾವೆಲ್ಲರೂ ಸಮಾಜದ ಒಳಿತಿಗಾಗಿ ಚಿಂತನೆ ನಡೆಸಬೇಕು. ನಮ್ಮ ದೇಶದ ಪ್ರತಿ ನೂರು ಕಿಲೋ ಮೀಟರ್ ಅಂತರದಲ್ಲಿ ಒಂದು ಭಾಷೆ, ಜಾತಿ, ಬಣ್ಣ ಹಾಗೂ ಸಂಸ್ಕೃತಿ ಸಂಸ್ಕಾರದ ವ್ಯತ್ಯಾಸವನ್ನು ನಾವು ಕಾಣುತ್ತಿದ್ದೇವೆ. ಅದರಲ್ಲಿ ವೈವಿದ್ಯತೆಯಲ್ಲಿ ಏಕತೆಯನ್ನು ಕಾಣುತ್ತಿದ್ದೇವೆ‌ ಎಂದು ಹೇಳಿದರು.

ಇದನ್ನೂ ಓದಿ | Uttara Kannada News: ಬನವಾಸಿಯಲ್ಲಿ ಶೌರ್ಯ ಜಾಗರಣ ರಥಯಾತ್ರೆ

ಮುಖ್ಯ ಅತಿಥಿಯಾದ ಸಮಾಜ ಸೇವಕಿ ಡಾ. ನಯನಾ ಭಸ್ಮೆ ಮಾತನಾಡಿ, ನಮ್ಮ ಸಮಾಜದ ಅದೆಷ್ಟೋ ಮಂದಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಅಂತವರನ್ನು ಸನ್ಮಾನಿಸಲು ಖುಷಿಯಾಗುತ್ತದೆ‌. ಇಂದಿನ ಈ ಸನ್ಮಾನ ಮುಂದಿನ ದಿನಗಳಿಗೆ ಪ್ರೇರಣೆ ನೀಡಲಿದೆ. ಸಾಧಕರ ಪಟ್ಟಿಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಪಾತ್ರ ಹೆಚ್ಚಿದೆ‌. ಪ್ರಸ್ತುತ ಮಕ್ಕಳ ಕಲಿಕೆ ಅವರ ಹುಟ್ಟಿನಿಂದಲೇ ಆಗುತ್ತಿದೆ‌. ಅಂತಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅಗತ್ಯತೆ ಇದೆ‌. ಮಕ್ಕಳಲ್ಲಿ ಒತ್ತಡ ಹಾಕದೇ ಸಾಧನೆ ಮಾಡಲು ಅವರಿಗೆ ಇನ್ನಷ್ಟು ಅವಕಾಶ ನೀಡಬೇಕು‌. ಜೀವನದಲ್ಲಿ ಆಸಕ್ತಿ, ಸಹಾಯ ಮನೋಭಾವ ಬೆಳೆಸಿಕೊಳ್ಳಬೇಕು. ಅದರಿಂದ ಇತರರು ಪ್ರೇರಣೆಯಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನೂರಕ್ಕೂ ಹೆಚ್ಚು ಸಾಧಕರಿಗೆ ವಿಠ್ಠಲ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಸ ಗೊಡ್ಯಾಗೋಳ, ಕಾರ್ಯದರ್ಶಿ ಮಂಜುನಾಥ ರೇಳೆಕರ, ಸಂಚಾಲಕ ಸುಧೀರ್ ನಾಯರ್ ಅವರನ್ನು ಬನವಾಸಿಯ ಶಿಂಪಿ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಸ್ ಗೊಡ್ಯಾಗೋಳ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ, ನಾಮದೇವ ಶಿಂಪಿ ಸಮಾಜದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಮೃತ್ಯುಂಜಯ ಚೌದರಿ, ಸಂಘಟಕ ಮಂಜುನಾಥ ರೇಳೆಕರ ಮಾತನಾಡಿದರು.

ಇದನ್ನೂ ಓದಿ | P. Sainath: ಸಂವಿಧಾನ ರಕ್ಷಿಸುವ ಹೊಣೆ ನಮ್ಮ ಮೇಲಿದೆ: ಪಿ. ಸಾಯಿನಾಥ್

ಜಿ.ಎಸ್. ಪಿಳ್ಳೈ ಗ್ರೂಪ್‌ನ ಸಂಸ್ಥಾಪಕಿ ಪೂರ್ಣಿಮಾ ಪಿಳ್ಳೈ, ಬನವಾಸಿ ಗ್ರಾಪಂ ಉಪಾಧ್ಯಕ್ಷ ಸಿದ್ದು ನೆರಗಲ್, ಬನವಾಸಿ ಶಿಂಪಿ ಸಮಾಜ ಅಧ್ಯಕ್ಷ ಮಧುಕರ ಮಾಳವದೆ ವೇದಿಕೆಯಲ್ಲಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉತ್ತರ ಕನ್ನಡ

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

Drown in Sea: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ.

VISTARANEWS.COM


on

drown in sea
Koo

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತವಾಗಿ ವರ್ತಿಸಿ ಹೋಟೆಲ್‌ ಮಾಲೀಕ ಬಂಧನ

ಬೆಂಗಳೂರು: ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತ ವರ್ತನೆ ತೋರಿದ ಹೊಟೇಲ್ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ತಡರಾತ್ರಿವರೆಗೂ ಹೋಟೆಲ್ ತೆಗೆದಿದ್ದ ಹಿನ್ನೆಲೆಯಲ್ಲಿ ಪ್ರಶ್ನಿಸಿದ ಕಾರಣ ಹೊಟೇಲ್ ಮಾಲೀಕ ಸಂಜೀವ್ ಗೌಡ ಎಂಬಾತ ಪಿಎಸ್‌ವೈ ಪ್ರತಿಮಾ ಜತೆ ಅನುಚಿತವಾಗಿ ವರ್ತಿಸಿದ್ದರು.

ಸುಳ್ಳು ಪ್ರಕರಣ ದಾಖಲಿಸಿ 50 ಸಾವಿರ ಲಂಚ ಕೇಳಿದ್ದಾರೆಂದು ಸುಳ್ಳು ಕೇಸ್‌ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಹೊಟೇಲ್ ಅಶ್ವ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. 24 ಗಂಟೆ ಹೊಟೇಲ್ ನಡೆಸಲು ಅನುಮತಿ ಇದೆ ಎಂದು ಮಾಲೀಕ ಹೇಳಿದ್ದ. ಅನುಮತಿ ಪತ್ರ ತೋರಿಸುವಂತೆ ಕೇಳಿದಾಗ, ಆರ್‌ಟಿಐ ಹಾಕಿಕೊಂಡು ನೋಡು ಎಂದು ಮಾಲೀಕ ದರ್ಪ ತೋರಿದ್ದಾರೆ. ಈ ಸಂಬಂಧ ಪಿಎಸ್‌ಐ ಪ್ರತಿಮಾ ದೂರು ದಾಖಲಿಸಿದ್ದರು. ದೂರಿನ ಅನ್ವಯ ಮಾಲೀಕ ಸಂಜೀವ್ ಗೌಡ ಸೇರಿ ಐವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉತ್ತರ ಕನ್ನಡ

Sirsi News: ದಲಿತ ಸಿಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Sirsi News: ದಲಿತ ಸಿಎಂ ಮಾಡುವ ಬಗ್ಗೆ ಪಕ್ಷಕ್ಕೆ ನಮ್ಮ ನಿರ್ಧಾರ ಹೇಳಬಹುದು ಅಷ್ಟೇ, ಆದರೆ ನಿರ್ಧಾರ ಹೈಕಮಾಂಡ್ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

VISTARANEWS.COM


on

Minister Satish Jarakiholi latest Statement at sirsi
ಶಿರಸಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
Koo

ಶಿರಸಿ: ರಾಜ್ಯದಲ್ಲಿ ದಲಿತ ಸಿಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ. ಕಾಲ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವ ಬಗ್ಗೆ ಪಕ್ಷಕ್ಕೆ ನಮ್ಮ ನಿರ್ಧಾರ ಹೇಳಬಹುದು ಅಷ್ಟೇ, ನಿರ್ಧಾರ ಹೈಕಮಾಂಡ್ ಮಾಡಬೇಕು ಎಂದು ತಿಳಿಸಿದರು.

ಇನ್ನು ಬಿ.ಕೆ. ಹರಿಪ್ರಸಾದ್ ಅವರನ್ನು ಪಕ್ಷ ಕಡಗಣನೆ ಕುರಿತು ಮಾತನಾಡಿದ ಅವರು, ಪಕ್ಷ ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ,ಅವರನ್ನು ಯಾರೂ ಕೆಳಗಿಳಿಸುವ ಪ್ರಶ್ನೆ ಇಲ್ಲ, ನಾವು ಅವರ ಜತೆ ಚರ್ಚೆ ಮಾಡಿದ್ದೇವೆ. ಬಹಳಷ್ಟು ಹಿರಿಯ ನಾಯಕರಿಗೆ ಸ್ಥಾನ ನೀಡಿಲ್ಲ, ಅವಕಾಶ ಬಂದಾಗ ಅವರಿಗೆ ಸ್ಥಾನಮಾನ ನೀಡುತ್ತಾರೆ. ಇನ್ನು ನಿಗಮ ಮಂಡಳಿಗೆ 25 ಜನ ಶಾಸಕರಿಗೆ ಸ್ಥಾನ ನೀಡುತ್ತಿದ್ದಾರೆ. ಚುನಾವಣೆ ಮುಗಿದ ನಂತರ ಇನ್ನಷ್ಟು ಜನರಿಗೆ ನೀಡುತ್ತಾರೆ, ಎಲ್ಲರಿಗೂ ಸಮಾಧಾನ ಮಾಡಲು ಅವಕಾಶ ಇದೆ, ಅಸಮಾಧಾನ ಆಗುವ ಪ್ರಶ್ನೆ ಇಲ್ಲ ಎಂದರು.

ಇದನ್ನೂ ಓದಿ: Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ಇನ್ನು ಗುತ್ತಿಗೆದಾರರಿಗೆ ಪ್ರಾಮುಖ್ಯತೆ ಮೇಲೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡುತ್ತೇವೆ. ಹಿಂದಿನ ಸರ್ಕಾರ ಅನುದಾನಕ್ಕಿಂತ ಹೆಚ್ಚಿಗೆ ಕಾಮಗಾರಿ ಮಂಜೂರು ಮಾಡಿದ್ದರಿಂದ ಸಮಸ್ಯೆಯಾಗಿದೆ ಎಂದರು.

Continue Reading
Advertisement
Kenda teaser kannada
South Cinema10 mins ago

Kannada New Movie: ಟೀಸರ್ ಮೂಲಕ ಕೌತುಕದ ಕಿಡಿ ಹೊತ್ತಿಸಿದ `ಕೆಂಡ’!

CP Yogeshwar brother in law Mahadevaiah
ಕರ್ನಾಟಕ22 mins ago

Murder Case: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಭಾವ ಮಹದೇವಯ್ಯ ಕೊಲೆ!

Foeticide case and pair of pink bunny figurines
ಕರ್ನಾಟಕ43 mins ago

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Narendra Modi With Women
EXPLAINER44 mins ago

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

Foeticide arrest
ಕರ್ನಾಟಕ1 hour ago

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Tukali imitate sangeetha sringeri
ಬಿಗ್ ಬಾಸ್1 hour ago

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

Revenue Minister Krishna Byre Gowda making coffee
ಕರ್ನಾಟಕ1 hour ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ2 hours ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ2 hours ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema2 hours ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ11 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌