ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು ಸೋಮವಾರ (ಜು.18) ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಕಾರವಾರದ ಬಿಣಗಾ ಬಳಿ ಕಂಟೇನರ್ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ಎಸ್ಪಿ ಕಚೇರಿಯ ಜಿಲ್ಲಾ ವಿಶೇಷ ವಿಭಾಗ ತಂಡದಿಂದ ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಪಿಂಪ್ಲೇವಾಡಿ ಮೂಲದ ಸುಧಾಕರ ಗೋಲಾಂಡೆ ಬಂಧಿತ ಆರೋಪಿ. ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ ಮಾರ್ಗವಾಗಿ ಹೈದರಾಬಾದ್‌ಗೆ ಗೋವಾ ಮದ್ಯ ಸಾಗಿಸಲಾಗುತ್ತಿತ್ತು.
ಇದನ್ನೂ ಓದಿ | Plastic Ban | ದಿಢೀರ್ ದಾಳಿ ನಡೆಸಿ ಏಕಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದ ಅಧಿಕಾರಿಗಳು: ₹5 ಲಕ್ಷಕ್ಕೂ ಹೆಚ್ಚು ದಂಡ
ಇದೀಗ ಪೊಲೀಸರು ಕಂಟೇನರ್‌ನಲ್ಲಿದ್ದ 26,29,536 ರೂ.ಮೌಲ್ಯದ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. 814 ಬಾಕ್ಸ್‌ಗಳಲ್ಲಿ 30,212 ಬಾಟಲ್ ಗೋವಾ ಮದ್ಯವನ್ನ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಬಿಣಗಾದ ಪೋಸ್ಟ್ ಆಫೀಸ್ ಬಳಿ ವಾಹನ ತಪಾಸಣೆ ನಡೆಸುತ್ತಿರುವಾಗ ಅಕ್ರಮ ಮದ್ಯ ಸಾಗಾಟ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ವಿಶೇಷ ಸ್ಕ್ವ್ಯಾಡ್‌ನ ಪಿಎಸ್ಐ ಪ್ರೇಮನಗೌಡ ಪಾಟೀಲ್ ತಂಡದಿಂದ ದಾಳಿ ನಡೆದಿದೆ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Kashmir Encounter: ಆವಂತಿಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆ, ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ವಶ