Site icon Vistara News

Karwar | ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಟ್ಟಣದ ಮಧ್ಯೆ ಪಲ್ಟಿ: ಸಂಚಾರ ಬಂದ್

Karwar

ಕಾರವಾರ : ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಟ್ಟಣದ ಮಧ್ಯೆ ಪಲ್ಟಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಗೇರುಸೊಪ್ಪ ವೃತ್ತದ (Karwar) ಬಳಿ ಬೆಳಗ್ಗೆ ಬುಧವಾರ (ಆ.10) ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯೆ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ.

ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಟ್ಯಾಂಕರ್‌ ತೆರಳುತ್ತಿತ್ತು ಎನ್ನಲಾಗಿದೆ. ಅನಿಲ ಸೋರಿಕೆಯಾಗದಂತೆ ಅಗ್ನಿಶಾಮಕ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗವನ್ನು ಪೊಲೀಸರು ಸೂಚಿಸಿದ್ದಾರೆ.

ಇದನ್ನೂ ಓದಿ | ಬೆಂಗಳೂರಿನ ವಾಹನ ಸವಾರರಿಗೆ ವಾಟರ್‌ ಟ್ಯಾಂಕರ್‌ ಕಂಟಕ!

ಭಟ್ಕಳ ಭಾಗದಿಂದ ಆಗಮಿಸುವ ಲಘುವಾಹನಗಳಿಗೆ ಪಟ್ಟಣದ ಒಳಭಾಗದಿಂದ ಸಂಚಾರ ಅವಕಾಶ ಕಲ್ಪಿಸಲಾಗಿದೆ. ಹಾಗೂ ಶಿರಸಿ, ಕುಮಟಾ ಮಾರ್ಗಕ್ಕೆ ತೆರಳುವ ವಾಹನಗಳಿಗೆ ಪಟ್ಟಣದ ಒಳಗಿನಿಂದ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.

ಬಸ್ ಸೇರಿದಂತೆ ಭಾರೀ ವಾಹನಗಳ ಸಂಚಾರಕ್ಕೆ ತಡೆ ಮಾಡಲಾಗಿದ್ದು, ಟ್ಯಾಂಕರ್ ಮೇಲೆತ್ತುವವರೆಗೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೀಗ ಪೊಲೀಸರು ಬ್ಯಾರಿಕೇಡ್‌ ಅಳವಡಿಸಿ ಸಂಚಾರ ಬಂದ್ ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಇದನ್ನೂ ಓದಿ | ಬೆಂಗಳೂರಿನ ಹೆಬ್ಬಾಳ ಬಳಿ ಸರಣಿ ಅಪಘಾತ, ಪ್ರಾಣಾಪಾಯದಿಂದ ಪಾರಾದ ಕಾರು ಚಾಲಕರು

Exit mobile version