ಶಿರಸಿ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ವಚ್ಛತೆ ಇಲ್ಲದಿರುವುದನ್ನು ನೋಡಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ಚಚ್ಛತೆ ಇಲ್ಲ ಎಂಬ ಸಾರ್ವಜನಿಕರ ದೂರಿನ ಅನ್ವಯ ಬುಧವಾರ (ಜು.13) ಬಸ್ ನಿಲ್ದಾಣಕ್ಕೆ ಸಚಿವರು ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಬಸ್ ನಿಲ್ದಾಣದಲ್ಲಿ ಸ್ವಚ್ಚತೆ ಇಲ್ಲದೆ ಇರುವುದನ್ನು ಕಂಡ ಸಚಿವರು ಸಿಡಿಮಿಡಿಗೊಂಡು ಅಲ್ಲೇ ಇದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಸ್ ನಿಲ್ದಾಣದಲ್ಲಿರುವ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ಇರುವುದಕ್ಕೆ ಕ್ಲೀನಿಂಗ್ ಏಜೆನ್ಸಿ ಹಾಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಸ್ವಚ್ಚತೆ ಕಾಪಾಡುವಂತೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಜತೆ ವಿಜಯ ಮಿರಾಶಿ, ಶಿರಿಷ್ ಪ್ರಭು, ರವಿ ಕೈಟಕರ್, ಡಿಪೋ ವ್ಯವಸ್ಥಾಪಕರು, ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.
ಇದನ್ನು ಓದಿ| 40 ಪರ್ಸೆಂಟ್ ಕಮಿಷನ್ ಬಗ್ಗೆ ತನಿಖೆ ನಡೆದು ಸತ್ಯಾಂಶ ಹೊರಬರಲಿ: ಶಿವರಾಮ್ ಹೆಬ್ಬಾರ್