Leopard Catch : ಆಹಾರ ಅರಸಿಬಂದ ಚಿರತೆ ಬಾವಿಗೆ, ಪ್ರಾಣಿಗಳಿಗೆ ಕಂಟಕವಾಗಿದ್ದ ಚೀತಾ ಬೋನಿಗೆ! - Vistara News

ಉತ್ತರ ಕನ್ನಡ

Leopard Catch : ಆಹಾರ ಅರಸಿಬಂದ ಚಿರತೆ ಬಾವಿಗೆ, ಪ್ರಾಣಿಗಳಿಗೆ ಕಂಟಕವಾಗಿದ್ದ ಚೀತಾ ಬೋನಿಗೆ!

Leopard Catch : ರಾಜ್ಯದಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದ್ದಂತೆಯೇ ಅವುಗಳು ನಾನಾ ಕಾರಣಗಳಿಂದ ಸಾಯುವುದು ಮತ್ತು ಬೋನಿಗೆ ಬೀಳುವುದು ಕೂಡಾ ಹೆಚ್ಚಿದೆ.

VISTARANEWS.COM


on

Leopard death and caught
ಶಿರಸಿಯಲ್ಲಿ ಬಾವಿಗೆ ಬಿದ್ದ ಚಿರತೆ, ಕೆ.ಆರ್ ನಗರದಲ್ಲಿ ಬೋನಿಗೆ ಬಿದ್ದ ಚಿರತೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ರಾಜ್ಯದಲ್ಲಿ ಈಗ ಎಲ್ಲಿ ನೋಡಿದರೂ ಚಿರತೆಗಳದೇ (Leopard Menace) ಸದ್ದು. ಕಾಡಿನ ಅಂಚಿನಲ್ಲಿರುವ ಪ್ರದೇಶಗಳಿಗೆ ಎಗ್ಗಿಲ್ಲದೆ ನುಗ್ಗುವ ಈ ಚಿರತೆಗಳಿಂದ ಜನರು ನಷ್ಟ ಮಾತ್ರವಲ್ಲ, ಪ್ರಾಣಾಪಾಯವನ್ನೇ ಎದುರಿಸುತ್ತಿದ್ದಾರೆ. ಹೀಗೆ ಎಲ್ಲೆಂದರಲ್ಲಿ ಓಡಾಡುವ ಚಿರತೆಗಳ ಪೈಕಿ ಒಂದು ಬಾವಿಗೆ ಬಿದ್ದು ಪ್ರಾಣವನ್ನೇ ಕಳೆದುಕೊಂಡಿದ್ದರೆ (Leopard dead) ಇನ್ನೊಂದು ಬೋನಿಗೆ ಬಿದ್ದಿದೆ (Leopard Catch).

ಶಿರಸಿಯಲ್ಲಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡ ಚಿರತೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಿಕ್ನಳ್ಳಿ ಗ್ರಾಮದ ಬಾವಿಯಲ್ಲಿ ಚಿರತೆಯೊಂದು ಬಿದ್ದು ಪ್ರಾಣ ಕಳೆದುಕೊಂಡಿದೆ. ಶಿರಸಿ ವಲಯದ ಉಂಚಳ್ಳಿ ಬಿಕ್ನಳ್ಳಿ ಗ್ರಾಮದ ಸಾರ್ವಜನಿಕ ಕುಡಿಯುವ ನೀರಿನ ಬಾವಿಗೆ ಇದು ಆಹುತಿಯಾಗಿದೆ. ಇದು ಆಹಾರ ಅರಿಸಿ ಜನವಸತಿ ಪ್ರದೇಶಕ್ಕೆ ಬಂದು ಆಯತಪ್ಪಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇದು ಒಂದುವರೆ ವರ್ಷದ ಹೆಣ್ಣು ಚಿರತೆಯಾಗಿದೆ

ಮುಂಜಾನೆ ನಸುಕಿನ ವೇಳೆ ಬಾವಿಗೆ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಡಿಎಫ್ಓ ಅಜ್ಜಯ್ಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರಣ್ಯ‌ ಇಲಾಖಾ‌ ಸಿಬ್ಬಂದಿ ಬಾವಿಯಿಂದ ಚಿರತೆ ಶವ ಮೇಲೆತ್ತಿದ್ದಾರೆ.

ಕೃಷಿ ಜಮೀನಿನಲ್ಲಿ ಇಟ್ಟ ಬೋನಿಗೆ ಬಿದ್ದ ಚಿರತೆ

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ಗುಳುವಿನ ಅತ್ತಿಗುಪ್ಪೆ ಗ್ರಾಮದಲ್ಲಿ ರೈತ ಮಂಜೇಗೌಡ ಅವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ.

Leopard caught in KR Nagara

ಕಳೆದ ಒಂದು ತಿಂಗಳಿಂದ ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿತ್ತು. ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಗೆಯ ಬಾಯಿಗೆ ಈಗಾಗಲೇ ಕರು ನಾಯಿ ಮೇಕೆಗಳು ಆಹಾರವಾಗಿವೆ. ಬಟಿಗನಹಳ್ಳಿ ಮುಂಜನಹಳ್ಳಿ ಸೋಮನಹಳ್ಳಿ ಸಂಬ್ರವಳ್ಳಿ ಹೊಸ ಅಗ್ರಹಾರ ಸೇರಿ ಹಲವು ಕಡೆ ದಾಳಿ ಮಾಡಿತ್ತು. ಇದರ ಚಲನವಲನ ಅಧ್ಯಯನ ಮಾಡಿದ ಅರಣ್ಯಾಧಿಕಾರಿಗಳು, ಮೂರು ದಿನದ ಹಿಂದೆ ಚಿರತೆ ಕಾಣಿಸಿಕೊಂಡಿದ್ದ ರೈತ ಮಂಜೇಗೌಡರ ಜಮೀನಿನಲ್ಲಿ ಬೋನು ಅಳವಡಿಸಿದ್ದರು. ಇದೀಗ ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

ಚಾಮರಾಜನಗರ: ಚಿರತೆ ದಾಳಿಗೆ ಹಸು ಬಲಿ

ಚಾಮರಾಜನಗರ ತಾಲೂಕಿನ ಹಿರಿಬೇಗೂರು ಗ್ರಾಮದಲ್ಲಿ ತಡ ರಾತ್ರಿ ಮಹದೇವಸ್ವಾಮಿ ಎಂಬವರಿಗೆ ಸೇರಿದ ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿದೆ. ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದಾಗ ಏಕಾಏಕಿ ದಾಳಿ ನಡೆಸಿರುವ ಚಿರತೆ ಹಸುವನ್ನು ಕೊಂದು ಹಾಕಿದೆ.

ಜಿಲ್ಲೆಯ ಜನರಲ್ಲಿ ದಿನದಿಂದ ದಿನಕ್ಕೆ ಚಿರತೆ ಆತಂಕ ಹೆಚ್ಚುತ್ತಿದೆ. ರಾತ್ರಿಯಾದರೆ ಸಾಕು ಚಿರತೆ ಪ್ರತ್ಯಕ್ಷ ಎಂಬ ಪರಿಸ್ಥಿತ ನಿರ್ಮಾಣವಾಗಿದೆ. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ರೈತರು ಆಗ್ರಹಿಸಿದ್ದಾರೆ.

ಹುಣಸೂರಿನ ಕಾಡಂಚಿನ ಭಾಗದಲ್ಲಿ ಆನೆ ಹಾವಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದೆ. ಅದರಲ್ಲೂ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ.

Elephant attack near Hunsur

ನಾಗರಹೊಳೆ ಉದ್ಯಾನದ ಕಾಡಂಚಿದಲ್ಲಿರುವ ಬಿಲ್ಲೇನಹೊಸಹಳ್ಳಿ ಗ್ರಾಮದ ರೈತ ಚಿನ್ನದೊರೆ ಮತ್ತು ವೆಂಕಟೇಶ್ ಅವರಿಗೆ ಸೇರಿದ ಜಮೀನಿಗೆ ಆನೆ ನುಗ್ಗಿ ರಾಗಿ, ಮುಸುಕಿನ ಜೋಳ, ಮರಗೆಣಸು ಬೆಳೆ ನಾಶ ಮಾಡಿದೆ.

ಇದನ್ನೂ ಓದಿ : Leopard Catch : ಆಟವಾಡುತ್ತಿದ್ದ ಬಾಲಕಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ Arrest!

ಬೆಳೆ ತಿಂದು ತುಳಿದು‌ ನಾಶ ಮಾಡಿದ ಕಾಡಾನೆಗಳು ವಾಸದ ಮನೆ ಮೇಲೂ ದಾಳಿ ಮಾಡಿವೆ. ಕಾಡಾನೆಗಳು ಮನೆ ಅಂಗಳದಲ್ಲಿ ಡ್ರಮ್ ನಲ್ಲಿ ತುಂಬಿಸಿಟ್ಟಿದ್ದ ನೀರು ಕುಡಿದು ಹೋಗಿವೆ. ಕೂಟದ ಕಡ, ತಟ್ಟೆ ಹಳ್ಳ ಪಾರೆ ಭಾಗದಿಂದ ಈ ಆನೆಗಳು ಬಂದಿವೆ ಎನ್ನಲಾಗಿದೆ. ರೈಲ್ವೆ ಬ್ಯಾರಿಕೇಡ್ ಬೇಲಿ ದಾಟಿ ಬಂದಿರುವ ಗಜಪಡೆ ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಂಗಳೂರಿನ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಗಾಳಿ,ಗುಡುಗು ಸಹಿತ ಮಳೆಯಾಗುತ್ತಿದೆ. ಸುಮಾರು ಅರ್ಧಗಂಟೆಗಳ ಕಾಲ ಮಳೆಯು ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಸುಬ್ರಹ್ಮಣ್ಯದಲ್ಲಿ ಹಠಾತ್‌ ಮಳೆಯು ಕ್ಷೇತ್ರಕ್ಕೆ ಆಗಮಿಸಿದ ಭಕ್ತರಲ್ಲಿ ಸಂತಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Karnataka Weather Forecast : ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಿರುಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾದರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂಜಾನೆ ಮೋಡ ಕವಿದ ವಾತಾವರಣದೊಂದಿಗೆ ತಂಪು ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 32 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Karnataka Weather Forecast : ವಾರಾಂತ್ಯದಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಬೆಂಗಳೂರು ಸೇರಿ ಮುಕ್ಕಾಲು ಕರ್ನಾಟಕದಲ್ಲಿ ಮಳೆ ಬೀಳಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಬೆಳಗಾವಿ: ಕಳೆದ ಮೂರು ದಿನಗಳಿಂದ ಹಲವೆಡೆ ಮಳೆಯು (Rain News) ಅಬ್ಬರಿಸುತ್ತಿದ್ದು, ಮೇ 15ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಶುಕ್ರವಾರದಂದು ಹಲವೆಡೆ ಸುರಿದ ಮಳೆಗೆ ಸಾವು-ನೋವು ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾಗೂ ಅವರ ಶ್ವಾನಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು

ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ಶ್ವಾನವೊಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಪ್ನ (48) ಮೃತ ದುರ್ದೈವಿ. ಸ್ವಪ್ನ ಅವರ ಮಗ ಜ್ಞಾನೇಶ್ವರಗೆ (20) ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಮ್ಮ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾಕು ನಾಯಿಯು ಸಿಡಿಲಿಗೆ ಬಲಿಯಾಗಿದೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕೋಡಿ ತಾಲೂಕಿನ‌ ವಿವಿಧೆಡೆ ತುಂತುರು ಮಳೆಯಾಗಿದೆ. ಬಿಸಿಲಿನ ಬೇಗೆಗೆ ತತ್ತರಿಸಿದ್ದ ಜನತೆಗೆ ಮಳೆಯಿಂದ ವಾತಾವರಣ ತಂಪಾಗಿತ್ತು. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಿಸಿಲು ನಾಡು ಯಾದಗಿರಿಯಲ್ಲಿ ವರುಣನ ಸಿಂಚನವಾಗಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಶಹಾಪುರ ಪಟ್ಟಣ ಮಲೆನಾಡಿನಂತಾಗಿತ್ತು. ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರು ಸಂತಸಗೊಂಡರು. ಶಹಾಪುರ ತಾಲೂಕಿನಾದ್ಯಂತ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದೆ.

ಕೊಪ್ಪಳದಲ್ಲಿ ಭಾರಿ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ

ಕೊಪ್ಪಳ ತಾಲೂಕಿನ ಡೊಂಬರಳ್ಳಿ ಗ್ರಾಮದಲ್ಲಿ ಭಾರಿ ಬಿರುಗಾಳಿ ಮಳೆಗೆ ಬಾಳೆ ಬೆಳೆಯು ಹಾಳಾಗಿದೆ. ಡೊಂಬರಹಳ್ಳಿ ಗ್ರಾಮದ ಬಸವರಡ್ಡಿ ಕರಡ್ಡಿ ಎಂಬುವವರಿಗೆ ಸೇರಿದ ಸುಮಾರು ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆಯು ನೆಲಕ್ಕುರುಳಿದೆ. ಬಾಳೆ ಗೊನೆ ಬಿಟ್ಟು ಫಸಲು ನೀಡುವ ವೇಳೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ತೋಟಗಾರಿಕೆ ಇಲಾಖೆಯವರು ಸಮಿಕ್ಷೆ ಮಾಡಿ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮೇ 15ರವರೆಗೆ ಮಳೆ ಎಚ್ಚರಿಕೆ

ಮಲೆನಾರಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯು ಅಬ್ಬರಿಸಲಿದೆ. ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕಾರವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ (40-50 kmph) ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಜತೆಗೆ (40-50 kmph) ವ್ಯಾಪಕ ಮಳೆಯಾಗಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 21°C ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mamitha Baiju
ಚಿನ್ನದ ದರ24 mins ago

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Pakistan Occupied Kashmir
ವಿದೇಶ25 mins ago

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

SSLC Student Death Exam fail
ಚಿತ್ರದುರ್ಗ26 mins ago

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

Richa Chadha drank alcohol to perform Sanjay Leela Bhansali’s Heeramandi
ಸಿನಿಮಾ28 mins ago

Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

Elon Musk
ತಂತ್ರಜ್ಞಾನ35 mins ago

Elon Musk: ದೇಶದಲ್ಲಿ 1.8 ಲಕ್ಷ ಎಕ್ಸ್‌ ಖಾತೆಗಳು ಬಂದ್‌; ಕಾರಣವೇನು?

Tumkur Accident
ಕರ್ನಾಟಕ1 hour ago

Tumkur: ತುಮಕೂರಿನಲ್ಲಿ ಕಾರು ಪಲ್ಟಿ; ಮದುವೆಗೆ ಹೋಗಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

Engineering Student
ಬೆಂಗಳೂರು ಗ್ರಾಮಾಂತರ1 hour ago

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Abdu Rozik Bigg Boss 16 gets engaged
ಸಿನಿಮಾ1 hour ago

Abdu Rozik: ಎಂಗೇಜ್‌ ಆದ ಬಿಗ್‌ ಬಾಸ್‌ ಖ್ಯಾತಿಯ ಅಬ್ದು ರೋಜಿಕ್!

Viral News
ವೈರಲ್ ನ್ಯೂಸ್2 hours ago

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Yogi Adityanath
ದೇಶ2 hours ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು20 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌