Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ - Vistara News

ಉತ್ತರ ಕನ್ನಡ

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

Lok Sabha Election 2024: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BJP district president N S Hegde pressmeet in Yallapur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಲೋಕಸಭಾ ಚುನಾವಣೆಗೆ (Lok Sabha Election 2024) ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಧ್ಯಾಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿ ಬೂತ್‌ನಿಂದ ಮತಗಳಿಕೆಯ ಕುರಿತು ಮಾಹಿತಿ ಪಡೆಯಲಾಗಿದ್ದು, ಪ್ರತಿ ಬೂತ್‌ನಲ್ಲಿ ಬಿಜೆಪಿಗೆ ಮುನ್ನಡೆ ದೊರೆತಿರುವ ಕುರಿತು ಬೂತ್‌ ಅಧ್ಯಕ್ಷರುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿನ ಶಾಸಕರು, ಮಾಜಿ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಉತ್ತಮ ಅಂತರದ ಮುನ್ನಡೆ ದೊರಕುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 28ರಂದು ಕಳೆದ ಒಂದು ವರ್ಷದಲ್ಲಿ ಜಿಲ್ಲೆಗೆ ಎರಡನೇ ಬಾರಿ ಪ್ರಧಾನಮಂತ್ರಿ ಮೋದಿಜಿಯವರು ಆಗಮಿಸಿದ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಸಂಘಟಸಿದ್ದು, ಅದಕ್ಕೂ ಸಹ ಕೇಂದ್ರದಿಂದ ಪ್ರಶಂಸನೆ ದೊರೆತಿದೆ ಎಂದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಕ್ಷೇತ್ರದಲ್ಲಿ ಚುನಾವಣೆಯ ದೃಷ್ಟಿಯಿಂದ ಕಾರ್ಯನಿರ್ವಹಿಸಿದ ಸಮಿತಿಗಳಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರುಗಳಿಗೆ ಮೇ 27ರೊಳಗೆ ಪ್ರತಿ ಮಂಡಲದಲ್ಲಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಖುದ್ದು ಪ್ರವಾಸ ಮಾಡಿ, ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಬರದಿಂದ ಕಂಗಾಲಾದ ರೈತರಿಗೆ ಕೇಂದ್ರ ಸರ್ಕಾರದಿಂದ ಸಮಯಕ್ಕೆ ಸರಿಯಾಗಿ ಬೆಳೆ ಪರಿಹಾರ ಧನ ಬಿಡುಗಡೆಯಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಮಾರು 41 ಕೋಟಿ ಪರಿಹಾರ ದೊರೆತಿದ್ದು, ಈ ಪೈಕಿ ಮುಖ್ಯ ಆಹಾರ ಬೆಳೆ ಬೆಳೆಯುವ ಯಲ್ಲಾಪುರ, ಮುಂಡಗೋಡ ಭಾಗದ ರೈತರಿಗೆ ಸಿಂಹಪಾಲು ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ. ಕೇಂದ್ರ ಸರ್ಕಾರದ ಯೋಜನೆಯಡಿ, ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಬ್ಯಾಂಕ್‌ ಮೂಲಕ ನೇರವಾಗಿ ರೈತರಿಗೆ ಈ ಪರಿಹಾರ ಧನ ದೊರಕುವಂತೆ ಮಾಡಿರುವ ಪ್ರಧಾನಮಂತ್ರಿ ಹಾಗೂ ಕೇಂದ್ರ ಕೃಷಿ ಮಂತ್ರಿಗಳಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸ ಬಯಸುತ್ತೇವೆ ಎಂದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಜಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್‌ ಪ್ರಮುಖರಾದ ಉಮೇಶ ಭಾಗ್ವತ್‌ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಶಿರೂರು ಗುಡ್ಡಕುಸಿತ ಸಂತ್ರಸ್ತರಿಗೆ ರಾಮಚಂದ್ರಾಪುರ ಮಠದ ಸಹಾಯಹಸ್ತ

Uttara Kannada News: ಶಿರೂರು ಗುಡ್ಡಕುಸಿತದ ಸಂದರ್ಭದಲ್ಲಿ ಗಂಗಾವಳಿ ನದಿ ನೀರು ಅಪ್ಪಳಿಸಿ ಏಳು ಮನೆಗಳು ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂತ್ರಸ್ತ ಕುಟುಂಬಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ ಚಾಚಿದೆ. ಶ್ರೀಮಠದ ನಿಯೋಗವು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ನಗದು, ಆಹಾರಧಾನ್ಯದ ಕಿಟ್‌ಗಳನ್ನು ಸಂತ್ರಸ್ತರ ಕುಟುಂಬಗಳಿಗೆ ವಿತರಿಸಿತು.

VISTARANEWS.COM


on

assistance from Ramchandrapur Matha for Shiruru landslide victims
Koo

ಗೋಕರ್ಣ: ಶಿರೂರು ಗುಡ್ಡ ಕುಸಿತದ ಸಂದರ್ಭದಲ್ಲಿ ಗಂಗಾವಳಿ ನದಿ ನೀರು ಅಪ್ಪಳಿಸಿ ಏಳು ಮನೆಗಳು ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂತ್ರಸ್ತ ಕುಟುಂಬಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ (Uttara Kannada News) ಚಾಚಿದೆ.

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀರಾಘವೇಶ್ವರ ಭಾರತೀಸ್ವಾಮೀಜಿಯವರು ಶ್ರೀಮಠದ ನಿಯೋಗವನ್ನು ಘಟನಾ ಸ್ಥಳಕ್ಕೆ ಅಗತ್ಯ ನೆರವಿನ ವಸ್ತುಗಳೊಂದಿಗೆ ಶ್ರೀಮಠದ ನಿಯೋಗವನ್ನು ಕಳುಹಿಸಿಕೊಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ತಂಡ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ನಗದು, ಆಹಾರಧಾನ್ಯದ ಕಿಟ್‌ಗಳನ್ನು ಸಂತ್ರಸ್ತರ ಕುಟುಂಬಗಳಿಗೆ ವಿತರಿಸಿತು.

ಇದನ್ನೂ ಓದಿ: Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಮತ್ತು ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಮಾರ್ಗದರ್ಶನದಲ್ಲಿ ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್, ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಮಿತ್ತೂರು, ಪ್ರಾಂತ ಉಪಾಧ್ಯಕ್ಷ ಜಿ.ಎಸ್.ಹೆಗಡೆ, ಕುಮಟಾ ಮಂಡಲ ಅಧ್ಯಕ್ಷ ಸುಬ್ರಾಯ ಭಟ್ ನೇತೃತ್ವದಲ್ಲಿ ತಂಡ ಎಲ್ಲ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಜತೆಗೆ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿ ಆಸರೆ ಪಡೆದಿರುವ 83 ಮಂದಿಯ ಊಟೋಪಚಾರಕ್ಕೆ ದಿನಸಿ ವಿತರಿಸಿದರು.

ಘಟನೆ ಬಗ್ಗೆ ರಾಘವೇಶ್ವರಭಾರತೀ ಸ್ವಾಮೀಜಿಯವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಶ್ರೀಗಳು ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವುರಿಂದ ಎಲ್ಲೂ ಹೊರಹೋಗುವಂತಿಲ್ಲ. ಆದರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಿ ನಿಯೋಗವನ್ನು ಕಳುಹಿಸಿಕೊಟ್ಟಿದ್ದಾರೆ. ಸಂತ್ರಸ್ತರು ಸ್ಥೈರ್ಯ ಕಳೆದುಕೊಳ್ಳುವ ಅಗತ್ಯವಿಲ್ಲ. ಶ್ರೀಮಠ ಸದಾ ನಿಮ್ಮ ಬೆಂಬಲಕ್ಕಿದೆ ಎಂಬ ಸ್ವಾಮೀಜಿಯವರ ಅಭಯವನ್ನು ಸಂತ್ರಸ್ತರಿಗೆ ತಿಳಿಸಲಾಯಿತು.

ಪ್ರತಿ ಕುಟುಂಬಗಳಿಗೆ ತಕ್ಷಣಕ್ಕೆ 5 ಸಾವಿರ ರೂಪಾಯಿ ನಗದು, ಅಕ್ಕಿ, ತರಕಾರಿ, ಸಕ್ಕರೆ, ತೊಗರಿಬೇಳೆ, ತೆಂಗಿನಕಾಯಿ, ಶ್ರೀಗಳ ಮಂತ್ರಾಕ್ಷತೆ, ರಾಮದೇವರ ಪ್ರಸಾದ ಇದ್ದ ಕಿಟ್‌ಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಸಂತ್ರಸ್ತರನ್ನು ಗುರುತಿಸುವಲ್ಲಿ ಮತ್ತು ನೆರವನ್ನು ಅರ್ಹರಿಗೆ ತಲುಪಿಸುವಲ್ಲಿ ತಾಲೂಕು ಪಂಚಾಯ್ತಿ ಸದಸ್ಯ ಮಹೇಶ್ ಶೆಟ್ಟಿ ನೇತೃತ್ವದ ತಂಡ ಸಹಕರಿಸಿತು. ಸಗಡಗೇರಿ ಪಂಚಾಯಿತಿ ಸದಸ್ಯ ಕೃಷ್ಣಗೌಡ, ಜಗದೀಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಾಗೇಶ್ ಗೌಡ, ಗೋಕರ್ಣ ಗ್ರಾಮಪಂಚಾಯಿತಿ ಅಧ್ಯಕ್ಷೆ ಸುಮನಾ ಗೌಡ, ಹನೇಹಳ್ಳಿ ಪಂಚಾಯಿತಿ ಅಧ್ಯಕ್ಷ ಸಣ್ಣುಗೌಡ, ಹಾಲಕ್ಕಿ ಸಮಾಜದ ಮುಖಂಡರಾದ ಶಂಕರಗೌಡ ಹೆಗ್ರೆ, ನಾಗೇಶ್‌ಗೌಡ ಕುಡ್ಲೆ, ಶ್ರೀಮಠದ ಪ್ರತಿನಿಧಿಗಳಾದ ಎಸ್.ವಿ.ಹೆಗಡೆ, ಗೋಪಾಲಕೃಷ್ಣ ಹೆಗಡೆ ಮತ್ತಿತರರು ನಿಯೋಗದಲ್ಲಿದ್ದರು.

Continue Reading

ಮಳೆ

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast: ರಾಜ್ಯಾದ್ಯಂತ ಮಳೆ (rain News) ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಕೊಡಗು: ಭಾರಿ ಗಾಳಿ-ಮಳೆ (Karnataka Weather Forecast) ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶನಿವಾರ ಮಾತ್ರ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ಯಾವುದೇ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕೊಡಗಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ‌ನದಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಹರಿಹರ-ಬಲ್ಯಮುಂಡೂರು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿ ನೀರು ರಸ್ತೆ ಮೇಲೆ ಹರಿದಿದೆ. ಪೊನ್ನಂಪೇಟೆ ತಾಲೂಕಿನ ಗ್ರಾಮಗಳ ಗದ್ದೆಪ್ರದೇಶಗಳು ಮುಳುಗಡೆಯಾಗಿದೆ.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ರಜೆ ಮುಂದುವರಿದಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಎಲ್ಲ ಕಡೆ ಶಾಲಾ‌-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ರಿಂದ ರಜೆ‌ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲೂ ಮಳೆ ಜತೆಗೆ ಶೀತಗಾಳಿ ಮುಂದುವರಿದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಇದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

Ankola landslide : ಅಂಕೋಲಾ-ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದರೆ, ಇತ್ತ ಶನಿವಾರದಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ನಡುವೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬ ಒತ್ತಾಯವು ಕೇಳಿ‌ ಬರುತ್ತಿದೆ.

VISTARANEWS.COM


on

By

Ankola landslide
Koo

ಕಾರವಾರ: ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಅಂಕೋಲಾ- ಶಿರೂರು ಗುಡ್ಡ ಕುಸಿತದ (Ankola landslide) ಮಣ್ಣು ತೆರವು ಕಾರ್ಯಾಚರಣೆಯು ಶುಕ್ರವಾರ ಹನ್ನೊಂದನೆಯ ದಿನಕ್ಕೆ ಕಾಲಿಟ್ಟಿದೆ. ಈ ದುರಂತದಲ್ಲಿ ಒಟ್ಟು 10 ಮಂದಿ ನಾಪತ್ತೆಯಾಗಿದ್ದು, ಇದುವರೆಗೆ 7 ಮಂದಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಹುಡುಕಾಟ ಮುಂದುವರಿದಿದೆ.

ಅಂಕೋಲಾ- ಶಿರೂರು ಗುಡ್ಡಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಮಾಹಿತಿ ನೀಡಿದರು. ಗುಡ್ಡ ಕುಸಿದ ಸ್ಥಳದಲ್ಲಿ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಅಧ್ಯಯನ ನಡೆಸಿತ್ತು. ಗುಡ್ಡಕುಸಿದ ಪ್ರದೇಶದಲ್ಲಿ ಕೆಲವೊಂದು ಅಗತ್ಯಕ್ರಮ ಕೈಗೊಳ್ಳಲು ವರದಿಯಲ್ಲಿ ಸೂಚಿಸಿತ್ತು. ಅದರಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಕ್ರಮಕ್ಕೆ ಸೂಚನೆ ನೀಡಲಾಗಿತ್ತು.

ಮತ್ತೆ ಅವಘಡಗಳಾಗದಂತೆ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳ ಪಾಲನೆಗೆ ಸೂಚಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡ ಬಳಿಕ ಹಾಗೂ ಹೆದ್ದಾರಿ ಪ್ರಾಧಿಕಾರದಿಂದ ವಾಹನಗಳ ಸಂಚಾರಕ್ಕೆ ಸುರಕ್ಷಿತವಾಗಿದೆ ಎಂದು ವರದಿ ಬಂದ ಮೇಲೆ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದರು.

ಡ್ರೋನ್‌ ಸ್ಕ್ಯಾನಿಂಗ್‌ ಮುಕ್ತಾಯ

ನದಿಯಲ್ಲಿ ಅತ್ಯಾಧುನಿಕ ಡ್ರೋನ್ ಸ್ಕ್ಯಾನಿಂಗ್ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ನಿನ್ನೆ ಗುರುವಾರ ರಾತ್ರಿ ಮಳೆಯಿಂದಾಗಿ ಸ್ಕ್ಯಾನಿಂಗ್ ಕಾರ್ಯಕ್ಕೆ ಅಡ್ಡಿಯಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆಗೆ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಂಡಿದ್ದು, ನದಿಯಲ್ಲಿ ಹುಡುಕಬೇಕಾದ ಜಾಗಗಳನ್ನು ಡೈವಿಂಗ್ ಮಾಡಿಯೇ ಗುರುತಿಸುವ ಕೆಲಸವಾಗಿದೆ.

ನೌಕಾನೆಲೆಯ ತಂಡ 2-3 ಗಂಟೆಗೊಮ್ಮೆ ನದಿಯ ಹರಿವಿನ ವೇಗವನ್ನು ಪರಿಶೀಲಿಸುತ್ತಿದ್ದಾರೆ. ಮಧ್ಯಾಹ್ನದವರೆಗೂ 6 ನಾಟ್ಸ್‌ಗಿಂತ ಅಧಿಕ ವೇಗದಲ್ಲಿ ನದಿ ಹರಿಯುತ್ತಿದೆ. ಹೀಗಾಗಿ ಶಾಸಕರು ಸೂಚಿಸಿದಂತೆ ಪ್ಲೋಟಿಂಗ್ ಪ್ಲಾಟ್‌ಫಾರಂ ತಂದು ಪ್ರಯತ್ನಿಸಲಾಗುವುದು. ಶನಿವಾರ ಪ್ಲೋಟಿಂಗ್ ಪ್ಲಾಟ್‌ಫಾರಂ ಬರುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ತಿಳಿಸಿದರು.

ಇದನ್ನೂ ಓದಿ: Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಅರ್ಜುನಗಾಗಿ ಇಡೀ ಕೇರಳ ಪ್ರಾರ್ಥತಿಸುತ್ತಿದೆ- ಶಾಸಕ ಕೆ.ಎಂ.ಆಶ್ರಫ್

ಒಂದು ವಾರ ಕಳೆದರು ಅಲ್ಲಿದ್ದ ಹೋಟೆಲ್ ಆಗಲಿ ಅಥವಾ ಲಾರಿ ಡ್ರೈವರ್ ಅರ್ಜುನ್‌ನ ಸುಳಿವು ಸಿಕ್ಕಿರಲಿಲ್ಲ, ನಿನ್ನೆ (ಗುರುವಾರ) ದೆಹಲಿ ತಂಡ ನಡೆಸಿದ ಡ್ರೋನ್ ಕಾರ್ಯಚರಣೆಯಲ್ಲಿ ನದಿಯಲ್ಲಿ ಲಾರಿ ಹಾಗೂ ಕ್ಯಾಬಿನ್ ಇರುವ ಬಗ್ಗೆ ಸುಳಿವು ಸಿಕ್ಕಿತ್ತು. ಆದರೆ ನದಿಯ ಹರಿವು ಹೆಚ್ಚಾಗಿದ್ದ ಕಾರಣ ಶೋಧ ಕಾರ್ಯವನ್ನು ಮುಂದುವರೆಸಲು ಆಗಲಿಲ್ಲ. ಹೀಗಾಗಿ ಶುಕ್ರವಾರ ಎರಡು ಬೃಹತ್ ಹಿಟಾಚಿಗಳ ಮೂಲಕ ದಡದಲ್ಲಿನ ಮಣ್ಣು ತೆರವು ಕೆಲಸ ಮುಂದುವರಿಸಲಾಯಿತು. ಜತೆಗೆ ಇನ್ನುಳಿದ ಮೂವರಿಗಾಗಿ ಹೋಟೆಲ್ ಇದ್ದ ಜಾಗದಲ್ಲೇ ಪುನಃ ಹುಡುಕಾಟ ನಡೆದಿದೆ. ಸ್ಥಳೀಯ ಶಾಸಕ ಸತೀಶ್ ಸೈಲ್ ತಡರಾತ್ರಿಯವರೆಗೂ ಸ್ಥಳದಲ್ಲೇ ಹಾಜರಿದ್ದರು.

ಇನ್ನು ಮಂಜೇಶ್ವರದ ಶಾಸಕ ಕೆ.ಎಂ. ಆಶ್ರಫ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾಧ್ಯಮದೊಂದಿಗೆ ಮಾತಾನಾಡಿದ ಅವರು, ಚಾಲಕ ಅರ್ಜುನಗಾಗಿ ಇಡೀ ಕೇರಳ ಜನತೆ ಪ್ರಾರ್ಥನೆ ಮಾಡುತ್ತಿದೆ. ಪ್ರತಿಕ್ಷಣವೂ ಅರ್ಜುನ ಜೀವಂತವಾಗಿ ಸಿಕ್ಕೇ ಸಿಗುತ್ತಾನೆ ಎನ್ನುವ ಭರವಸೆಯಲ್ಲಿದ್ದಾರೆ. ದೇಶವು ಇದಕ್ಕೂ ದೊಡ್ಡ ಸಮಸ್ಯೆಗಳನ್ನು ಎದುರಿಸಿದೆ, ನಾವು ಹಿಂಜರಿಯದೆ ಆದಷ್ಟು ಬೇಗ ಅರ್ಜುನ ಬಳಿಗೆ ತಲುಪಿ ಅವನನ್ನು ಮೇಲೇತ್ತುವ ಕೆಲಸ ಆಗಬೇಕು. ಇವತ್ತಿನ ಕಾರ್ಯಾಚರಣೆಯಲ್ಲಿ ಲಾರಿ ಸಿಗುವ ಭರವಸೆ ಇದೆ, ಇಲ್ಲವಾದರೆ ನಮ್ಮ ಹನ್ನೊಂದು ದಿನದ ಶ್ರಮ ವ್ಯರ್ಥವಾಗುತ್ತದೆ. ಹಾಗಾಗಿ ಶುಕ್ರವಾರ ಫಲಿತಾಂಶ ಬಂದೆ ಬರುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.

ಇದರ ಮಧ್ಯೆ ಕೇರಳ ಲೋಕಪಯೋಗಿ ಹಾಗೂ ಪ್ರವಾಸೋದ್ಯಮ ಸಚಿವ ರಿಯಾಜ್ ಅಹ್ಮದ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ದೆಹಲಿ ತಜ್ಞರ ತಂಡದಿಂದ ಲಾರಿ ಇರುಬಹುದಾಗಿದೆ ಎನ್ನುವ ಜಾಗದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲಾಡಳಿತ ಜತೆಗೆ ಸಭೆ ನಡೆಸಿ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದುಕೊಂಡರು. ಸಚಿವರ ಜತೆಗೆ ಕೇರಳದ ಶಾಸಕರಾದ ಸಚ್ಚಿನ್ ದೇವ್, ಅಶ್ರಫ್ ಉಪಸ್ಥಿತರಿದ್ದು, ಶಾಸಕ ಸತೀಶ್ ಸೈಲ್ ಸಮ್ಮುಖದಲ್ಲೆ ಸಭೆ ನಡೆಯಿತು. ಇದೇ ವೇಳೆ ಜಿಲ್ಲಾಡಳಿತ ಮೃತ ಗ್ಯಾಸ್ ಟ್ಯಾಂಕರ್ ಚಾಲಕ ಶರವಣ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್‌ ಅನ್ನು ಕೇರಳ ಸಚಿವರ ಕೈಯಲ್ಲೇ ವಿತ್ತರಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aadhaar Update
ವಾಣಿಜ್ಯ3 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ18 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌