ಕಾರವಾರ: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಶಿರಸಿಗೆ ನರೇಂದ್ರ ಮೋದಿ (PM Narendra Modi) ಅವರು ಏಪ್ರಿಲ್ 28 ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾ (Lok Sabha Election 2024) ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಮೊದಲ ಬಾರಿಗೆ ಶಿರಸಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ನಡೆಸಲಿದ್ದಾರೆ.
ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ
ಇನ್ನು ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಮದುವಣಗಿತ್ತಿಯಂತೆ ಸ್ಟೇಡಿಯಂ ಸಿದ್ಧಗೊಳ್ಳುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಯನ್ನು ವೀಕ್ಷಿಸಿದರು.
ಈ ವೇಳೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಜರ್ಮನ್ ಟೆಂಟ್ ನಿರ್ಮಿಸುತ್ತಿದ್ದೇವೆ. ಶಿರಸಿಯಲ್ಲಿ ಮೊದಲ ಬಾರಿ ಈ ತಂತ್ರಜ್ಞಾನ ಬಳಸಿ ಸಾರ್ವಜನಿಕ ಕಾರ್ಯಕ್ರಮ ಮಾಡುತ್ತಿದ್ದು, ತಿಪ್ಪಾದೇವಿ ಟೆಂಟ್ ಹೌಸ್‌ನ ಕೃಷ್ಣೇಗೌಡ್ರು ಸ್ಥಳದಲ್ಲಿಯೇ ಇದ್ದು ನಿರ್ಮಾಣದ ಜವಾಬ್ದಾರಿ ವಹಿಸಿದ್ದಾರೆ.
ಇದನ್ನೂ ಓದಿ: IPL 2024 : ಆರ್ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್ಆರ್ಎಚ್ ವಿರುದ್ಧ 35 ರನ್ ಗೆಲುವು
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾರ್ಯಕರ್ತರ 25 ತಂಡಗಳನ್ನು ರಚಿಸಿ ಬೇರೆ ಬೇರೆ ಜವಾಬ್ದಾರಿಗಳನ್ನು ಅವರಿಗೆ ವಹಿಸಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.