ಕಾರವಾರ: ಗ್ಯಾರಂಟಿ (Guarantee) ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಪ್ರಚಾರಕ್ಕೆ ಇಳಿದಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ (Lok Sabha Election 2024) ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುತ್ತದೆ ಎಂದು ಬಿಜೆಪಿಗರು ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರದ ಸಾಧನೆ ನೋಡಿ, ಗೆಲ್ಲುವುದು ಸುಲಭವಿಲ್ಲ ಎಂದು ತಿಳಿದು ತಾವೂ ಗ್ಯಾರಂಟಿ ಕೊಡುತ್ತೇವೆಂದು ಜನರ ಮುಂದೆ ಹೋಗುತ್ತಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ: UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ
ಸದ್ಯ ರಾಜ್ಯದಲ್ಲಿ ಬರಗಾಲ ಇದೆ. ಕೇಂದ್ರದಿಂದ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ವಿದ್ಯಾಭ್ಯಾಸ ಮಾಡಿದ ನಂತರ ಯುವಕರು ಕೆಲಸ ಸಿಗದೇ ಮನೆಯಲ್ಲಿ ಕೂರುವ ಪರಿಸ್ಥಿತಿ ಇದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಇಂತಹ ಸಮಸ್ಯೆಯನ್ನು ಮನಗಂಡ ಕಾಂಗ್ರೆಸ್ ರಾಜ್ಯದಲ್ಲಿ ಯುವನಿಧಿ ನೀಡುವ ಮೂಲಕ ಯುವಕರ ಏಳಿಗೆಗೆ ಸಹಕಾರಿಯಾಗುವ ಕಾರ್ಯಕ್ರಮ ಚಾಲನೆ ತಂದಿದೆ.
ರೈತರ, ಮಹಿಳೆಯರ, ಯುವಕರ, ಶ್ರಮಿಕರ ಪರ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಸುತ್ತೇವೆ. ರಾಜ್ಯದಲ್ಲಿ ಮಾತು ಕೊಟ್ಟಂತೆ ಗ್ಯಾರಂಟಿ ಜಾರಿಗೆ ತಂದಿದ್ದು ಹಾಗೇ ಕೇಂದ್ರದಲ್ಲೂ ತರಲಿದ್ದೇವೆ ಎಂದರು.
ಇದನ್ನೂ ಓದಿ: Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ
ಈ ಬಾರಿ ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಬಿಸಿಲನ್ನು ಲೆಕ್ಕಿಸದೇ ಜನರು ಬಂದಿರುವುದನ್ನು ನೋಡಿದರೆ ಕಾಂಗ್ರೆಸ್ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದರು.