Site icon Vistara News

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Lokayukta Raid Honnavara Pattana Panchayat Chief Executive Engineer caught by lokayukta while recieving money

ಕಾರವಾರ: ಹೊನ್ನಾವರದ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಖಾತಾ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಂದ 60 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ (Lokayukta Raid) ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

ಪ್ರವೀಣ ಕುಮಾರ್‌ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿ. ಪ್ರವೀಣ ಕುಮಾರ್‌ ಅವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ 2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60 ಸಾವಿರ ರೂ. ನಗದು ಕೊಡುತ್ತಿದ್ದ ವೇಳೆ, ಲೋಕಾಯುಕ್ತ ಎಸ್‌ಪಿ ಕುಮಾರ ಚಂದ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೊನ್ನಾವರ ಪಟ್ಟಣ ಪಂಚಾಯಿತಿಯಲ್ಲಿ ಈ ಸಂಬಂಧ ಅಧಿಕಾರಿಗಳು ದಾಖಲೆಗಳ‌ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

ಕಾರವಾರ ಲೋಕಾಯುಕ್ತ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

Exit mobile version