ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಭಾಶಿ, ಮೊಗವಳ್ಳಿ ಗ್ರಾಮಗಳಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಮೊಗವಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಳೆಯಿಂದ ಹಾನಿಗೊಳಗಾದ ಶಾಲೆಯ ಕೊಠಡಿಯನ್ನು ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಸಚಿವರು ಶೀಘ್ರದಲ್ಲೇ ನೂತನ ತರಗತಿ ಕೊಠಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.