ಯಲ್ಲಾಪುರ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ (Girls Hostel) ಶಾಸಕ ಶಿವರಾಮ ಹೆಬ್ಬಾರ್ (MLA Shivaram Hebbar) ದಿಢೀರ್ ಭೇಟಿ (Sudden Visit) ನೀಡಿ, ಅಲ್ಲಿನ ಅವ್ಯವಸ್ಥೆಯನ್ನು ಕಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಪಟ್ಟಣದ ಕಾಳಮ್ಮ ನಗರದಲ್ಲಿರುವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳಿಂದ ದೂರು ಬಂದ ಹಿನ್ನಲೆಯಲ್ಲಿ, ಸೋಮವಾರ ಬೆಳಿಗ್ಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿಸಿದರು.
ಪ್ರತಿ ಮಕ್ಕಳಿಗೆ ನೀಡಬೇಕಾದ ಆಹಾರದ ಪ್ರಮಾಣವನ್ನು ಪ್ರಶ್ನಿಸಿದಾಗ ಉತ್ತರಿಸಲಾಗದ ಅಡುಗೆ ಸಿಬ್ಬಂದಿಗಳನ್ನು ಹಾಗೂ ಹಾಸ್ಟೆಲ್ ಮೇಲ್ವಿಚಾರಕರನ್ನು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ: WordPad: ವರ್ಡ್‌ಪ್ಯಾಡ್ ಇನ್ನಿಲ್ಲ! 30 ವರ್ಷಗಳ ಉಚಿತ ಸೌಲಭ್ಯವನ್ನು ಕೊನೆಗೊಳಿಸಲಿರುವ ಮೈಕ್ರೋಸಾಫ್ಟ್
ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಿಂದ ಕುಂದುಕೊರತೆಗಳನ್ನು ಆಲಿಸಿದ ಶಾಸಕರು, ಮಕ್ಕಳಿಗೆ ಗುಣಮಟ್ಟದ ಆಹಾರ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ, ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಗಮನವಹಿಸಲು ಹಾಸ್ಟೆಲ್ ಮೇಲ್ವಿಚಾರಕರಿಗೆ ಹಾಗೂ ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.