Site icon Vistara News

Murder case : ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

murder case In karwar

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version