Site icon Vistara News

National Sports Day 2022 | ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

spots day

ಯಲ್ಲಾಪುರ: ಇಲ್ಲಿನ ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆ ಯಲ್ಲಾಪುರದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ (National Sports Day 2022) ಕಾರ್ಯಕ್ರಮ ನಡೆಯಿತು.

ಮೇಜರ್ ಧ್ಯಾನ್ ಚಂದ್ ಅವರ ಕ್ರೀಡಾ ಸಾಧನೆ, ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಅವರ ಕೊಡುಗೆ ಕುರಿತು ಶಿರಸಿ ಶೈಕ್ಷಣಿಕ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ್ ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕೂ ಮುನ್ನ ಧ್ಯಾನ್‌ಚಂದ್‌ ಅವರು ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಹೆಸರು ತಂದುಕೊಟ್ಟ ಶ್ರೇಷ್ಠ ಆಟಗಾರ. ಮಕ್ಕಳು ಛಲದಿಂದ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ನಿಮ್ಮ ಪ್ರಯತ್ನ ಪ್ರಾಮಾಣಿಕವಾಗಿ ಇರಲಿ ಎಂದು ಕರೆ ನೀಡಿದರು.

ವಾಲಿಬಾಲ್‌ ಟೂರ್ನಮೆಂಟ್‌ನಲ್ಲಿ ವಿಜೇತರಾದ ವಿದ್ಯಾರ್ಥಿಗಳು

ಕೇಂದ್ರೀಯ ಶಾಲೆಯ ಪ್ರಾಂಶುಪಾಲರಾದ ಮಹಾದೇವಿ ಭಟ್ಟ ಮಾತನಾಡಿ, ಮೇಜರ್ ಧ್ಯಾನ್ ಚಂದ್‌ರವರು ಉತ್ತಮ ಆಟಗಾರರು. ಅವರು ದೇಶಾಭಿಮಾನದಿಂದಾಗಿ ಆಡುವ ಮೂಲಕ ಇತರ ಕ್ರೀಡಾಪಟುಗಳಿಗೆ ಮಾದರಿಯಾದರು. ಅಲ್ಲದೆ, ರಾಷ್ಟ್ರಕ್ಕೆ ಕೀರ್ತಿ ತಂದವರಾಗಿದ್ದು, ಮಕ್ಕಳು ಇಂತಹ ಶ್ರೇಷ್ಠ ವ್ಯಕ್ತಿಗಳ ಆದರ್ಶ ವ್ಯಕ್ತಿತ್ವವನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ವಿಶ್ವದರ್ಶನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ದತ್ತಾತ್ರೇಯ ಗಾಂವ್ಕರ್ ಉಪಸ್ಥಿತರಿದ್ದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ವಿಶ್ವದರ್ಶನ ಅಂಗ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ವಾಲಿಬಾಲ್ ಟೂರ್ನಮೆಂಟ್‌ನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಇದನ್ನೂ ಓದಿ | ವಿಶ್ವ ದರ್ಶನ ಸೆಂಟ್ರಲ್ ಸ್ಕೂಲ್‌ನಲ್ಲಿ ಕಾನೂನು ಅರಿವು ಕಾರ್ಯಾಗಾರ; ನ್ಯಾಯಾಂಗ ವ್ಯವಸ್ಥೆಯ ಕಿರು ಮಾಹಿತಿ

Exit mobile version