Ramakrishna Hegde | ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಮಕೃಷ್ಣ ಹೆಗಡೆ ಅಧ್ಯಯನ ಪೀಠ: ಸಿಎಂ ಬೊಮ್ಮಾಯಿ ಘೋಷಣೆ - Vistara News

ಉತ್ತರ ಕನ್ನಡ

Ramakrishna Hegde | ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಮಕೃಷ್ಣ ಹೆಗಡೆ ಅಧ್ಯಯನ ಪೀಠ: ಸಿಎಂ ಬೊಮ್ಮಾಯಿ ಘೋಷಣೆ

ಶಿರಸಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕನ್ನಡದ ಅಭಿವೃದ್ಧಿ, ರಾಮಕೃಷ್ಣ ಹೆಗಡೆ ಪೀಠ ಸ್ಥಾಪನೆ ಜತೆಗೆ ಅನೇಕ ವಿಚಾರಗಳ ಕುರಿತು ಉತ್ತರ ನೀಡಿದ್ದಾರೆ.

VISTARANEWS.COM


on

ramakrishna-hegde-study-chair-to-be-set-up-in-karnataka-university-dharwad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ಧಾರವಾಡದ ಕರ್ನಾಟಕದ ವಿಶ್ವವಿದ್ಯಾಲಯದಲ್ಲಿ ರಾಮಕೃಷ್ಣ ಹೆಗಡೆ ಅಧ್ಯಯನ ಪೀಠವನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಿರಸಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಯಾವುದಾದರೂ ಒಂದು ವಿಶ್ವವಿದ್ಯಾಲಯದಲ್ಲಿ ರಾಮಕೃಷ್ಣ ಹೆಗಡೆಯವರ ಪೀಠ ಪ್ರಾರಂಭಿಸುವ ಪ್ರಸ್ತಾಪವಿತ್ತು ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದರು. ಈಗಾಗಲೇ ಗ್ರಾಮೀಣಾಭಿವೃದ್ಧಿ ವಿಶ್ವ ವಿದ್ಯಾಲಯದಲ್ಲಿ ಅಧಿಕಾರ ವಿಕೇಂದ್ರೀಕರಣದ ಅಧ್ಯಯನ ನಡೆಯುತ್ತಿದೆ. ರಾಮಕೃಷ್ಣ ಹೆಗಡೆಯವರದ್ದು ಬಹು ಆಯಾಮವುಳ್ಳ ವ್ಯಕ್ತಿತ್ವ. 60ರ ದಶಕದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿ ಅಧಿಕಾರ ವಿಕೇಂದ್ರೀಕರಣ ತರಲು ದೊಡ್ಡ ಪ್ರಭಾವ ಬೀರಿದವರು. ನೆಹರು ಅವರ ಸಂಪುಟದಲ್ಲಿ ಡಿ.ಪಿ. ಧರ್ ಅವರ ಪ್ರಭಾವದಿಂದ ಅಧಿಕಾರ ವಿಕೇಂದ್ರೀಕರಣ ಕಾಯ್ದೆಯನ್ನು ತಂದರು. ಈ ರಾಜ್ಯಕ್ಕೆ ಯೋಜನಾ ಮಂಡಳಿ, ಲೋಕಾಯುಕ್ತ ತಂದವರು ಅವರು. ಅಧ್ಯಯನ ನಡೆಸಲು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪೀಠ ಸ್ಥಾಪಿಸಲಾಗುವುದು ಎಂದರು.

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ ಬಸವರಾಜ ಬೊಮ್ಮಾಯಿ, ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ ವೈವಿಧ್ಯತೆ, ವನ್ಯಜೀವಿ ರಕ್ಷಣೆ, ಜನರ ಅಭಿವೃದ್ಧಿ, ಪರಿಸರ ಸಮತೋಲನ ಮಾಡುವ ಹಿನ್ನೆಲೆಯಲ್ಲಿ ಪರಿಸರ ವಿಶ್ವವಿದ್ಯಾಲಯವನ್ನು ಇಲ್ಲಿ ಸ್ಥಾಪಿಸುವುದು ಸೂಕ್ತ ಎಂದು ಭಾವಿಸಲಾಗಿದೆ ಎಂದರು

ಪರಿಸರ ವಿಶ್ವವಿದ್ಯಾಲಯದ ಜೊತೆಗೆ ಕಲಾ, ವಿಜ್ಞಾನ, ವಾಣಿಜ್ಯ ಮುಂತಾದ ಸಾಮಾನ್ಯ ಕಲಿಕೆಗೂ ಅವಕಾಶ ಕಲ್ಪಿಸಲಾಗುವುದು. ಸಂಯೋಜಿತ ವಿಶ್ವವಿದ್ಯಾಲಯದ ಇದಾಗಲಿದೆ. ವಿಶೇಷವಾಗಿ ಪರಿಸರದ ಬಗ್ಗೆ ಕೆಲಸ ಮಾಡಲಿದೆ. ಬರುವ ಬಜೆಟ್ ನಲ್ಲಿ ಅದಕ್ಕೆ ಅನುದಾನ ನೀಡಲಾಗುವುದು. ಈ ಭಾಗದ ಜನರಿಗೆ ಕೊಡುಗೆಯಾಗಿ ನೀಡಲಾಗುತ್ತಿದೆ ಎಂದರು.

ಒಕ್ಕಲೆಬ್ಬಿಸುವುದಿಲ್ಲ
ಅಭಿವೃದ್ಧಿ ಜತೆಗೆ ಅರಣ್ಯ ಪ್ರದೇಶ ಹೆಚ್ಚಿಸಿ ಪರಿಸರ ಸಮತೋಲನ ಕಾಯ್ದುಕೊಳ್ಳಬೇಕು. ವಿಶೇಷವಾಗಿ ಇಲ್ಲಿ ಪ್ರವಾಹ, ಅಭಿವೃದ್ಧಿ ಯೋಜನೆ ನೀಡುವಾಗ ಅರಣ್ಯ ವಾಸಿಗಳ ಸಮಸ್ಯೆ ಎದುರಾಗುತ್ತಿದೆ. ಕಾನೂನಿನಲ್ಲಿ ಹಲವಾರು ಸಮಸ್ಯೆಗಳಿವೆ. ಪ್ರವಾಹ ಉಂಟಾದಾಗ ಅರಣ್ಯ ವಾಸಿಗಳಿಗೆ ಪರಿಹಾರ ನೀಡಿದ್ದೇವೆ. ಮನೆಯನ್ನು ಸಹ ನೀಡಿದ್ದೇವೆ. ತಲ ತಲಾಂತರದಿಂದ ನೆಲೆಸಿ, ಸಾಗುವಳಿ ಮಾಡಿರುವ ಅರಣ್ಯವಾಸಿಗಳ ಸಮಸ್ಯೆ ಸುಪ್ರೀಂಕೋರ್ಟ್ ನಲ್ಲಿ ಇದ್ದರೂ ಕೂಡ ಎಲ್ಲಾ ರಾಜ್ಯ ಗಳಲ್ಲಿ ಈ ಸಮಸ್ಯೆ ಇದೆ.

ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೇವೆ. ಮೂರು ತಲೆಮಾರುಗಳನ್ನು ತೆಗೆದುಕೊಳ್ಳುವ ಬದಲು ಒಂದೇ ತಲೆಮಾರನ್ನು ತೆಗೆದುಕೊಂಡು ಅರಣ್ಯ ವಾಸಿಗಳೆಂದು ನಿರ್ಣಯ ಮಾಡಿ ಹಕ್ಕುಪತ್ರಗಳನ್ನು ನೀಡಲು ವ್ಯವಸ್ಥೆ ಮಾಡಲು ರಾಜ್ಯದ ಅಭಿಪ್ರಾಯವನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಅದರ ಕೆಲಸ ವಾಗುತ್ತದೆ. ಕನ್ನಡ ನಾಡಿನ ಅರಣ್ಯವಾಸಿಗಳಿಗೆ ಯಾವುದೇ ಕಾರಣಕ್ಕೂ ಒಕ್ಕಲು ಎಬ್ಬಿಸುವ ಕೆಲಸ ವನ್ನು ರಾಜ್ಯ ಸರ್ಕಾರ ಮಾಡುವುದಿಲ್ಲ. ಈ ಬಗ್ಗೆ ಸ್ಪಷ್ಟವಾಗಿ ಅಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಿದೆ. ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಲಾಗಿದೆ. ಯಾರೂ ಆತಂಕ ಪಡುವ ಪ್ರಶ್ನೆಯೇ ಇಲ್ಲ. ಎಲ್ಲಿಯೂ ಅವರಿಗೆ ತೊಂದರೆ ಮಾಡುವ ಪ್ರಶ್ನೆ ಇಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ
ಸಚಿವ ಸಂಫುಟ ವಿಸ್ತರಣೆ ಪ್ರಸ್ತಾವನೆ ಚರ್ಚೆಯಾಗಿದೆ. ವರಿಷ್ಠರು ಸೂಚನೆ ನೀಡಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಿಳಿಸಲಾಗುವುದು ಎಂದರು. ನಿಗಮ ಮಂಡಳಿಗಳ ನೇಮಕಾತಿ ಬಗ್ಗೆ ಉತ್ತರಿಸಿ, ಕೆಲವರ ಅವಧಿ ಮುಗಿದಿದೆ ಕೆಲವರದ್ದು ಮುಗಿದಿಲ್ಲ. ಪರಿಶೀಲನೆ ಮಾಡಿ ಅಧ್ಯಕ್ಷರು ಮತ್ತು ಸದಸ್ಯ ನೇಮಕ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಹೊಸ ಜಿಲ್ಲೆ
ಹೊಸ ಜಿಲ್ಲೆ ರಚನೆ ಬಗ್ಗೆ ಮನವಿ, ಮನವರಿಕೆ ಮಾಡಿಕೊಟ್ಟಿದ್ದಾರೆ. ಇಡೀ ರಾಜ್ಯದಲ್ಲಿ ಈ ರೀತಿಯ ಬೇಡಿಕೆಗಳಿವೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇದೆ. ಸಾಧಕ ಬಾಧಕಗಳನ್ನು ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

ಮಹದಾಯಿ: ಕಾನೂನುಬದ್ಧವಾಗಿ ಕಾಮಗಾರಿ
ಸುಪ್ರೀಂಕೋರ್ಟ್ ನಿರ್ದೇಶಿತ ನ್ಯಾಯಾಧಿಕರಣ ಮಂಡಳಿ ರಚನೆಯಾಗಿತ್ತು. ಸುಪ್ರೀಂಕೋರ್ಟ್ ಆದೇಶದ ಮೇಲೆ ನ್ಯಾಯಮಂಡಲಿ ತನ್ನ ಆದೇಶವನ್ನು ನೀಡಿದೆ. ವರದಿಗಳನ್ನು ನೀಡಿದ ನಂತರ ಅಧಿಸೂಚನೆಯಾಗಿದೆ. ಜಲ ನ್ಯಾಯಾಧಿಕರಣದ ಅಧಿಸೂಚನೆ ಸುಪ್ರೀಂಕೋರ್ಟ್ ಆದೇಶದಷ್ಟೇ ಮಹತ್ವವುಳ್ಳದ್ದು. ಅದರನ್ವಯ ಡಿಪಿಆರ್ ಗೆ ಅನುಮೋದನೆಯಾಗಿದೆ. ಎಲ್ಲವೂ ಕಾನೂನು ಬದ್ಧವಾಗಿದೆ. ಸುಪ್ರೀಂಕೋರ್ಟ್ ಹಲವಾರು ವರ್ಷ ಪರಿಶೀಲಿಸಿ ಆದೇಶ ನೀಡಿದೆ. ಆ ಕಾಮಗಾರಿಗಳನ್ನು ಕಾನೂನುಬದ್ಧವಾಗಿ, ಸುಪ್ರೀಂಕೋರ್ಟ್ ಆದೇಶಕ್ಕೆ ಬದ್ಧವಾಗಿ ಕೈಗೊಳ್ಳಲಾಗುವುದು ಎಂದರು.

ಕಳಚೆ ಕ್ಷೇತ್ರ ರಕ್ಷಣೆಗೆ ಅನುದಾನ
ಈ ಭಾಗ ಅರಣ್ಯ ಪ್ರದೇಶದಿಂದ ಕೂಡಿದೆ. ಶಿರಸಿ, ಎಲ್ಲಾಪುರ, ಮುಡಗೋಡ, ಹಲಿಯಾಳ ಘಟ್ಟದ ಮೇಲೆ ಹಾಗೂ ಕೆಳಗಿನ ಪ್ರದೇಶ ದಟ್ಟವಾದ ಅರಣ್ಯ ಪ್ರದೇಶ. ವೈವಿಧ್ಯಮಯ ಜೀವಸಂಕುಲವಿದೆ. ನಿಸರ್ಗದತ್ತವಾದ ಕ್ಷೇತ್ರವಾಗಿದ್ದು, ಇನ್ನಷ್ಟು ವ್ಯವಸ್ಥಿತವಾದ, ಯೋಜನಾಬದ್ಧ ಬೆಳವಣಿಗೆ ಅಗತ್ಯ ವಿದೆ. ಹಸಿರು ಪದರ, ಕಾಡು ಬೆಳೆಸುವುದು, ಪರಿಸರ ಸಮತೋಲನವನ್ನು ಮಾಡಬೇಕಿದೆ.

2022- 23 ರಲ್ಲಿ ಹಸಿರು ಬಜೆಟ್ ರೂಪಿಸಲಾಗಿದ್ದು, ಸಂಪೂರ್ಣವಾಗಿ ಯೋಜನೆಗಳು ಈ ಜಿಲ್ಲೆಯಲ್ಲಿ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಗುಣಮಟ್ಟದ ಕೆಲಸಗಳು ಆಗುತ್ತವೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು. ಕಳಚೆ ಕ್ಷೇತ್ರದ ರಕ್ಷಣೆ ಮಾಡಲು ಪರಿಸರ ಬಜೆಟ್ ನಲ್ಲಿ ಅನುದಾನ ನೀಡಲಾಗಿದೆ. ಅಲ್ಲಿ ನಷ್ಟವಾಗಿರುವ ಅರಣ್ಯವನ್ನು ಸರಿದೂಗಿಸಲು ಯೋಜನೆಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ. ಅಲ್ಲಿಯೂ ಪುನರ್ವಸತಿ ಬಗ್ಗೆ ಚರ್ಚೆಯಾಗಿದ್ದು, ಕೆಲವರು ಸ್ಥಳಾಂತರಗೊಳ್ಳಲು ಒಪ್ಪಿದ್ದು, ಕೆಲವರು ಒಪ್ಪಿಲ್ಲ. ಸಮಗ್ರವಾದ ಪುನರ್ವಸತಿಗೆ ಯೋಜನೆ ರೂಪಿಸಲು ಅನುದಾನ ಒಡಗಿಸಿದ್ದು, ಇನ್ನಷ್ಟು ಅನುದಾನ ಕೋರಿದ್ದು, ಅನುದಾನವನ್ನು ಒದಗಿಸಲು ಸಿದ್ಧನಿದ್ದೇನೆ ಎಂದರು.

ಇದನ್ನೂ ಓದಿ | ಸುಪ್ರೀಂ ಕೋರ್ಟ್‌ ತೀರ್ಪು ಬರುವವರೆಗೂ ಅರಣ್ಯವಾಸಿಗಳಿಗೆ ತೊಂದರೆಯಿಲ್ಲ: ಸಿಎಂ ಬೊಮ್ಮಾಯಿ ಅಭಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

2nd PUC Exam 3: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ (Free Bus) ಪರೀಕ್ಷಾ ಕೇಂದ್ರಕ್ಕೆ ತೆರಳಬಹುದಾಗಿದೆ. ಈ ಸಂಬಂಧ ನಿಗಮವು ಆದೇಶ ಹೊರಡಿಸಿದೆ.

VISTARANEWS.COM


on

By

2nd Puc Exam 3
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ಇದನ್ನೂ ಓದಿ: Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather :‌ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ರಣಮಳೆ ಫಿಕ್ಸ್!

Karnataka Weather Forecast : ಇಂದು ಕರಾವಳಿ, ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಜೂ.22ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಸಾಕಷ್ಟು ವ್ಯಾಪಕವಾದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಇನ್ನೂ ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಪ್ರತ್ಯೇಕವಾಗಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಹಗುರ ಮಳೆ

ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌

ಗುಡುಗು, ಮಿಂಚು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಐಎಂಡಿ ರೆಡ್ ಹಾಗೂ ಆರೆಂಜ್‌ ಅಲರ್ಟ್ ಘೋಷಿಸಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಕಾರಣಕ್ಕೆ ಜೂನ್‌ 24ರವರೆಗೆ ಮೀನುಗಾರಿಕೆಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Lokayukta Raid : ಹಲಸಿನ ಮರ ತೆರವಿಗೂ ಕೊಡಬೇಕು ಗರಿ ಗರಿ ನೋಟು; ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಕೋರರು

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಸೀಬೆಕಾಯಿಗೆ ಸಾಮಾನ್ಯವಾಗಿ ಎರಡು ಋತುಗಳಿವೆ. ಅಂದರೆ ವರ್ಷಕ್ಕೆರಡು ಬಾರಿ ಇದು ದೊರೆಯುತ್ತದೆ. ಮಕ್ಕಳಿಂದ ವೃದ್ಧರಾದಿಯಾಗಿ ಕರೆದು ಕೊಟ್ಟರೂ, ಸೀಬೆಯನ್ನು ಕದ್ದು ತಿನ್ನುವುದೇ ಪ್ರಿಯವಾದ್ದರಿಂದ ಹೀಗೆ ಒಂದಕ್ಕಿಂತ ಹೆಚ್ಚಿನ ಬೆಳೆಗಳನ್ನು ಸೃಷ್ಟಿಯೇ ನೀಡಿರಬಹುದು ಇದಕ್ಕೆ. ಎಳೆ ಮಿಡಿ, ಕಾಯಿ, ಹಣ್ಣು ಮುಂತಾದ ಯಾವುದೇ ಭೇದವಿಲ್ಲದೆ ಇದನ್ನು ಖಾಲಿ ಮಾಡುವವರಿದ್ದಾರೆ. ಬಾಯಿ ರುಚಿಗಷ್ಟೇ ಇದನ್ನು ತಿನ್ನುವುದಲ್ಲ, ಸೀಬೆ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ (Benefits Of Eating Guava) ಪ್ರಯೋಜನಗಳಿವೆ.

Crop woman with halves of guava

ಸತ್ವಗಳು

ಇದರಲ್ಲಿ ವಿಟಮಿನ್‌ ಎ, ಸಿ, ನಾರು ಮತ್ತು ಪೊಟಾಶಿಯಂನಂಥ ಖನಿಜಗಳು ಸಾಕಷ್ಟಿವೆ. ಜೊತೆಗೆ ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಇರುವುದರಿಂದ ದೇಹಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳನ್ನು ಒದಗಿಸಬಲ್ಲದು ಈ ಹಣ್ಣು. ಬಿಳಿ ಪೇರಲೆ, ಹಳದಿ ಬಣ್ಣದ್ದು, ಕೆಂಪು ಬಣ್ಣದ್ದು- ಹೀಗೆ ಯಾವುದೇ ಆದರೂ ಅವೆಲ್ಲವೂ ಆರೋಗ್ಯಕ್ಕೆ ಒಳ್ಳೆಯವೇ.

guava fruits

ವಿಟಮಿನ್‌ ಸಿ

ಒಂದು ದೊಡ್ಡ ಸೀಬೆ ಹಣ್ಣಿನಲ್ಲಿ ಎರಡು ಕಿತ್ತಳೆ ಹಣ್ಣುಗಳಲ್ಲಿ ಇರುವಷ್ಟು ಸಿ ಜೀವಸತ್ವ ಇದೆಯೆಂಬುದು ಗೊತ್ತೇ? ಇದರಿಂದ ರೋಗ ನಿರೋಧಕ ಶಕ್ತಿ ಬಲವಾಗುವುದಲ್ಲದೆ, ಕಬ್ಬಿಣದ ಅಂಶ ದೇಹದೊಳಗೆ ಚೆನ್ನಾಗಿ ಹೀರಲ್ಪಡುತ್ತದೆ. ಮಾತ್ರವಲ್ಲ, ಕೊಲಾಜಿನ್‌ ಉತ್ಪಾದನೆ ಹೆಚ್ಚಾಗಿ, ಕೂದಲು ಮತ್ತು ಚರ್ಮದ ಆರೋಗ್ಯವೂ ಸುಧಾರಿಸುತ್ತದೆ.

heart attack and Diabetes control

ಮಧುಮೇಹಿಗಳಿಗೆ ಸೂಕ್ತ

ಇದು ಹಣ್ಣಾದಾಗ ರುಚಿ ಸಿಹಿಯೇ ಇದ್ದರೂ, ಇದರ ಗ್ಲೈಸೆಮಿಕ್‌ ಸೂಚಿ ಕಡಿಮೆ. ಪೇರಲೆಯ ಎಲೆಯ ಕಷಾಯಗಳನ್ನು ಸಕ್ಕರೆ ಕಾಯಿಲೆಯ ನಿಯಂತ್ರಣಕ್ಕೆ ಬಳಸುವ ಪದ್ಧತಿ ಪರಂಪರಾಗತ ಔಷಧಕ್ರಮದಲ್ಲಿ ಇದೆ. ನಾರಿನಂಶ ಹೇರಳವಾಗಿ ಇರುವುದರಿಂದ, ದೀರ್ಘ ಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನೇ ನೀಡುತ್ತದೆ. ಜೊತೆಗೆ, ಗ್ಲೂಕೋಸ್‌ ಅಂಶ ದಿಢೀರನೆ ರಕ್ತ ಸೇರದಂತೆ ತಡೆಯುವ ಗುಣವಿದೆ ಇದಕ್ಕೆ.

fresh guava fruit

ಕ್ಯಾಲರಿ ಕಡಿಮೆ

ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುವ ಈ ಹಣ್ಣಿನಲ್ಲಿ ಕ್ಯಾಲರಿ ಕಡಿಮೆ, ಕೊಬ್ಬು ಬಹುತೇಕ ಇಲ್ಲವೇ ಇಲ್ಲ. ಇದರಲ್ಲಿ ಅಗತ್ಯ ಪ್ರಮಾಣದ ನಾರು ಇರುವುದರಿಂದ ಹೊಟ್ಟೆ ತುಂಬಿದ ಅನುಭವ ನೀಡಿ, ಕಳ್ಳ ಹಸಿವೆಯನ್ನು ನೀಗಿಸುತ್ತದೆ. ಹೆಚ್ಚು ಕಾಲದವರೆಗೆ ಹಸಿವಾಗದಂತೆ ತಡೆಯುತ್ತದೆ. ಬಾಯಾಡುವುದಕ್ಕೆ ಇನ್ನೇನಿದೆ ಎಂದು ತಡಕುವುದನ್ನು ತಡೆಯುತ್ತದೆ. ಜೊತೆಗೆ, ದೇಹಕ್ಕೆ ಅಗತ್ಯವಾದ ಖನಿಜಗಳು, ವಿಟಮಿನ್‌ ಸಿ ಮತ್ತಿತರ ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಹಾಗಾಗಿ ತೂಕ ಇಳಿಸುವ ಯೋಜನೆಯಿದ್ದರೆ ಪೇರಲೆ ಹಣ್ಣನ್ನು ಸಂತೋಷದಿಂದ ನಿಮ್ಮ ಆಹಾರಯೋಜನೆಯಲ್ಲಿ ಸೇರಿಸಿಕೊಳ್ಳಿ. ಆದರೆ ಇದನ್ನು ಆಹಾರದ ಭಾಗವಾಗಿ ಬಳಸಿಕೊಳ್ಳುವುದು ಹೇಗೆ? ಪೇರಲೆಯನ್ನು ಕಚ್ಚಿ ತಿನ್ನುವುದು ಮಾತ್ರವೇ ಎಲ್ಲರಿಗೂ ಪರಿಚಿತವಾದದ್ದು. ಹೀಗೆ ಎಷ್ಟು ತಿನ್ನಲು ಸಾಧ್ಯ? ದಿನವೂ ಅದನ್ನೇ ಮಾಡಿದರೆ ಬೋರಾಗುವುದಿಲ್ಲವೇ? ಇಲ್ಲಿದೆ ಪರಿಹಾರ.

Guava smoothie

ಸೀಬೆ ಸ್ಮೂದಿ

ತೂಕ ಇಳಿಸುವವರಿಗೆ ಸ್ಮೂದಿ ಉತ್ತಮ ಆಹಾರ. ಯಾವುದೇ ಹಣ್ಣುಗಳನ್ನು ಇಡಿಯಾಗಿ ಅಥವಾ ಉಳಿದೆಲ್ಲ ಹಣ್ಣುಗಳ ಜೊತೆಯಾಗಿ ಹಾಕಿ ಸ್ಮೂದಿ ಮಾಡಿಕೊಳ್ಳಬಹುದು. ಇದಕ್ಕೆ ಪೇರಲೆಯನ್ನೂ ಸೇರಿಸಿದರೆ ಉತ್ತಮ. ಇದು ಸ್ಮೂದಿಯ ರುಚಿ ಮತ್ತು ಘಮವನ್ನು ಇಮ್ಮಡಿಗೊಳಿಸುತ್ತದೆ. ಮಾತ್ರವಲ್ಲ, ಪೌಷ್ಟಿಕಾಂಶವನ್ನೂ ಹೆಚ್ಚಿಸುತ್ತದೆ. ಬಾಳೆಹಣ್ಣು, ಬೆರ್ರಿಗಳು ಮುಂತಾದ ನಿಮ್ಮ ಆಯ್ಕೆಯ ಹಣ್ಣುಗಳ ಜೊತೆಗೆ ಸೀಬೆಯನ್ನೂ ಸೇರಿಸಿ. ಜೊತೆಗೆ ಹಾಲು ಅಥವಾ ಮೊಸರು- ಯಾವುದು ಸರಿ ಹೊಂದುತ್ತದೆ ಎಂಬುದೂ ನಿಮ್ಮದೇ ಆಯ್ಕೆ. ಇದರ ಮೇಲೆ ಚಿಯಾ, ಅಗಸೆ ಮುಂತಾದ ಬೀಜಗಳನ್ನು ಉದುರಿಸಿದರೆ ಸತ್ವಯುತ ಸ್ಮೂದಿ ಸಿದ್ಧ.

ಸೀಬೆ ಸಲಾಡ್

ತೂಕ ಇಳಿಸುವವರಿಗೆ ಸಲಾಡ್‌ ಇಲ್ಲದೆ ಮುಂದೆ ಹೋಗುವುದೇ ಇಲ್ಲ. ಕಡಿಮೆ ಕೊಬ್ಬಿರುವ ಅಗತ್ಯ ಸತ್ವಗಳನ್ನು ಹೊಂದಿರುವ ಸಲಾಡ್‌ಗಳು ದೇಹಕ್ಕೆ ಚೈತನ್ಯ ನೀಡುವುದರ ಜೊತೆಗೆ ಕೊಬ್ಬು ಕರಗಿಸಲು ನೆರವಾಗುತ್ತವೆ. ಇಂಥ ಯಾವುದೇ ಸಲಾಡ್‌ಗೂ ಪೇರಲೆಯನ್ನು ಸೇರಿಸಬಹುದು. ತರಕಾರಿ ಸಲಾಡ್‌, ಹಣ್ಣುಗಳ ಸಲಾಡ್‌ ಎರಡಕ್ಕೂ ಪೇರಲೆಯ ರುಚಿ ಮತ್ತು ಪರಿಮಳ ಹೊಂದಿಕೊಳ್ಳುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಯೋಗವು ದೈನಂದಿನ ಜೀವನದ ಭಾಗವಾಗಲಿ: ಡಿಸಿ ಗಂಗೂಬಾಯಿ ಮಾನಕರ್‌

Uttara Kannada News: ಕಾರವಾರ ನಗರದ ಕಾಜುಭಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಉದ್ಘಾಟಿಸಿದರು.

VISTARANEWS.COM


on

10th International Yoga Day celebration Programme in karwar
Koo

ಕಾರವಾರ: ಪ್ರತಿನಿತ್ಯ ಯೋಗ (Yoga) ಮಾಡುವ ಮೂಲಕ, ಇಂದಿನ ಧಾವಂತದ ಬದುಕಿನಲ್ಲಿ ಕಾಡುವ ಹಲವು ರೀತಿಯ ಒತ್ತಡಗಳ ನಿವಾರಣೆಯ ಜತೆಗೆ ಉತ್ತಮ ಆರೋಗ್ಯ ಕೂಡ ಲಭಿಸುವುದರಿಂದ, ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸವನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ (Uttara Kannada News) ಹೇಳಿದರು.

ನಗರದ ಕಾಜುಭಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ & ಗೈಡ್, ಎನ್‌ಸಿಸಿ, ಎನ್.ಎಸ್.ಎಸ್, ರೆಡ್‌ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್, ರೋಟರಿ ಪಶ್ಚಿಮ, ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಾರವಾರ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

ಮನುಷ್ಯನಿಗೆ ಬಾಹ್ಯ ಸೌಂದರ್ಯದಷ್ಟೇ, ಆಂತರಿಕ ಸೌಂದರ್ಯವೂ ಮುಖ್ಯವಾಗಿರುತ್ತದೆ. ಇವೆರಡನ್ನೂ ಕಾಪಾಡಿಕೊಂಡು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಹಾಗೂ ಏಕಾಗ್ರತೆಯಿಂದ ಇರಲು ಮತ್ತು ಶರೀರದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಯೋಗವು ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಯೋಗ ಬಲ್ಲವನಿಗೆ ರೋಗವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ 5 ರಿಂದ 10 ನಿಮಿಷವಾದರೂ ಯೋಗ ಮಾಡಬೇಕು. ಇದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ್ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್. ಎನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದ ಹಾಗೂ ಇತರರು ಇದ್ದರು.

ಇದನ್ನೂ ಓದಿ: Yadgiri News: ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಸಲಹೆ

ಯೋಗ ಶಿಕ್ಷಕ ಗಣಪತಿ ಹೆಗಡೆ, ಭಾಗವಹಿಸಿದ್ದ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ಯೋಗಾಭ್ಯಾಸ ಮಾಡಿಸಿದರು. ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಕವಿತಾ ಪ್ರಾಣಾಯಾಮ ಮತ್ತು ಧ್ಯಾನದ ಕುರಿತು ತರಬೇತಿ ನೀಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ ಸ್ವಾಗತಿಸಿದರು.

Continue Reading

ಮಳೆ

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

Rain News : ರಾಜ್ಯಾದ್ಯಂತ ಇನ್ನೊಂದು ವಾರ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಹಲವೆಡೆ ರೆಡ್‌ ಅಲರ್ಟ್‌ ನೀಡಲಾಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು/ಕಾರವಾರ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಗಾಳಿ ಸಹಿತ ಹಗುರದಿಂದ (Rain News) ಕೂಡಿದ ಮಳೆಯಾಗಿದೆ. ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯನಗರ, ವಿಜಯ ನಗರ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿ ನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಹಲವೆಡೆ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು (Karnataka Weather Forecast) ಪರದಾಡಿದರು.

ಕೊಪ್ಪಳದಲ್ಲಿ ಹಳ್ಳ ದಾಟಲು ಹೋದವರ ಪರದಾಟ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಜಾಲಿಹಾಳ ಗ್ರಾಮದಲ್ಲಿ ಹಳ್ಳ ದಾಟಲು ಹೋಗಿ ಬೊಲೆರೋ ವಾಹನದಲ್ಲಿದ್ದ 15 ಕಾರ್ಮಿಕರು ಮಧ್ಯದಲ್ಲಿಯೇ ಸಿಲುಕಿಕೊಂಡಿದ್ದಾರೆ. ವಿಂಡ್ ಪವರ್ ನಲ್ಲಿ ಕೆಲಸ ಮಾಡುವ ಕಾರ್ಮಿಕರು, ವಾಪಸ್‌ ಜಾಲಿಹಾಳಗೆ ತೆರಳುತ್ತಿದ್ದರು. ಈ ವೇಳೆ ಹಳ್ಳದಲ್ಲಿ ಸಿಲುಕಿ ಪರದಾಟ ಅನುಭವಿಸಿದರು.

ಉತ್ತರ ಕನ್ನಡದಲ್ಲಿ ತಡರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಒಂದು ವಾರ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 23 ರಂದು ಸಮುದ್ರ ಭಾಗದಲ್ಲಿ 45 ರಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಮುನ್ಸೂಚನೆ ನೀಡಲಾಗಿದೆ.

ಕೊಡಗು ಜನತೆಗೆ ಜಿಲ್ಲಾಡಳಿತ ಸೂಚನೆ

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕೊಡಗಿಗೆ ‌ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.23, 24 ಹಾಗೂ 25ರಂದು ಎಚ್ಚರಿಕೆಯಿಂದ ಇರುವಂತೆ ಕೊಡಗಿನ ಜನತೆಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಸುಮಾರು 115 ರಿಂದ 204.4 ಮೀ.ಮಿ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Murder case : ಕಾಡಿಗೆ ಹೋದ ಮಹಿಳೆಯ ಕತ್ತು ಕೊಯ್ದು ಕೊಲೆ; ಹಂತಕರು ಪರಾರಿ

ಮಳೆಯಿಂದ ಹಾಳಾಗಿರುವ ಸರ್ಕಾರಿ ಶಾಲೆ

ಭಾರಿ ಮಳೆಯಿಂದಾಗಿ ಸರ್ಕಾರಿ ಶಾಲೆಯೊಂದು ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಗಿಲಕೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಇಂಥಹದೊಂದು ಅವಸ್ಥೆ ಇದೆ. ಮಳೆ ಬಂದಾಗ ಶಾಲೆಯ ಚಾವಣಿ, ಶಾಲೆಯ ಅಡುಗೆ ಕೋಣೆ ಸೋರುತ್ತಿದೆ. ಶಾಲೆ ಕೊಠಡಿ ಒಳಗೆ ಭಯದ ವಾತಾವರಣದಲ್ಲೇ ಮಕ್ಕಳು ಕೂರುವಂತಾಗಿದೆ. ಮಳೆ ನೀರು ಸೋರಿಕೆಯಿಂದಾಗಿ ಶಾಲಾ ಆವರಣದಲ್ಲಿ ಸಿಬ್ಬಂದಿ ಅಡುಗೆ ಮಾಡುತ್ತಿದ್ದಾರೆ. ಇದುವರೆಗೂ ಯಾವೊಬ್ಬ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿಲ್ಲ. ಇತ್ತ ಶಾಲೆಯ ಶಿಕ್ಷಕರು ಅಸಹಾಯಕರಾಗಿದ್ದಾರೆ.

ಶನಿವಾರ ಇಲ್ಲೆಲ್ಲ ಮಳೆ ಅಬ್ಬರ

ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಹಾಗೂ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಜತೆಗೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಕ್ರೀಡೆ46 seconds ago

T20 World Cup 2024: ವಿಂಡೀಸ್​ಗೆ ಆಘಾತ; ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಕಿಂಗ್

PGCET 2024
ಶಿಕ್ಷಣ1 min ago

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

The Lion King 30 years influence on fans and actors
ಬಾಲಿವುಡ್2 mins ago

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

Viral Video
ವೈರಲ್ ನ್ಯೂಸ್6 mins ago

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Floods In Assam
ದೇಶ9 mins ago

Floods In Assam: ಭೀಕರ ಪ್ರವಾಹಕ್ಕೆ ನಲುಗಿದ ಅಸ್ಸಾಂ; 37ಕ್ಕೆ ಏರಿದ ಸಾವಿನ ಸಂಖ್ಯೆ

Actor Darshan
ಕರ್ನಾಟಕ10 mins ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ26 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ33 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್50 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ57 mins ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌