Road Accident : ತ್ರಿಬಲ್‌ ರೈಡಿಂಗ್‌ ಬಂದು ಇನ್ನೋವಾಗೆ ಗುದ್ದಿದ ಬೈಕ್;‌ ಇಬ್ಬರು ಸ್ಪಾಟ್‌ ಡೆತ್‌ - Vistara News

ಉತ್ತರ ಕನ್ನಡ

Road Accident : ತ್ರಿಬಲ್‌ ರೈಡಿಂಗ್‌ ಬಂದು ಇನ್ನೋವಾಗೆ ಗುದ್ದಿದ ಬೈಕ್;‌ ಇಬ್ಬರು ಸ್ಪಾಟ್‌ ಡೆತ್‌

Road Accident : ಬೈಕ್‌ನಲ್ಲಿ ಟ್ರಿಪಲ್‌ ರೈಡಿಂಗ್‌ ಮಾಡುತ್ತಿದ್ದ ಸವಾರರು, ಹೋಟೆಲ್‌ ಮುಂಭಾಗದಲ್ಲಿ ರಸ್ತೆಯಲ್ಲಿ ತಿರುಗುತ್ತಿದ್ದ ಕಾರನ್ನು ತಪ್ಪಿಸಲು ಹೋಗಿದ್ದಾರೆ. ಆಗ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ಇನ್ನೋವಾ ಕಾರಿನ ಹಿಂಭಾಗಕ್ಕೆ ಗುದ್ದಿದ್ದಾರೆ. ಅಪಘಾತದ ತೀವ್ರತೆಯಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

]cashless medical treatment for accident victims by central Government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಪಟ್ಟಣದ ಕೆಬಿ ರಸ್ತೆಯ ಶಾನಭಾಗ ಹೋಟೆಲ್‌ ಬಳಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಓರ್ವನ ಸ್ಥಿತಿ ಗಂಭೀರವಾಗಿದೆ.

ಮೃತ ಯುವಕರನ್ನು ತಾಲೂಕಿನ ಹುಣಶೆಟ್ಟಿಕೊಪ್ಪದ ರಾಜು (16) ಹಾಗೂ ರಾಮನಕೊಪ್ಪದ ದರ್ಶನ ಭಂಡಾರಿ (16) ಎಂದು ಗುರುತಿಸಲಾಗಿದೆ. ಸವಾರ ಜಾಬೀರ್‌ (17) ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೈಕ್‌ನಲ್ಲಿ ಟ್ರಿಪಲ್‌ ರೈಡಿಂಗ್‌ ಮಾಡುತ್ತಿದ್ದ ಸವಾರರು, ಹೋಟೆಲ್‌ ಮುಂಭಾಗದಲ್ಲಿ ರಸ್ತೆಯಲ್ಲಿ ತಿರುಗುತ್ತಿದ್ದ ಕಾರನ್ನು ತಪ್ಪಿಸಲು ಹೋಗಿದ್ದಾರೆ. ಆಗ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ಇನ್ನೋವಾ ಕಾರಿನ ಹಿಂಭಾಗಕ್ಕೆ ಗುದ್ದಿದ್ದಾರೆ. ಅಪಘಾತದ ತೀವ್ರತೆಯಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಇನ್ನೊಬ್ಬನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mysore dasara : ನಾಡಹಬ್ಬ ದಸರಾ ಕವಿಗೋಷ್ಠಿಯಿಂದ ಪ್ರೊ. ಕೆ.ಎಸ್‌. ಭಗವಾನ್‌ಗೆ ಕೊಕ್!

ಹೊಸಕಂಬಿಯ ಹಳ್ಳದಲ್ಲಿ ನಾಪತ್ತೆ

ಅಂಕೋಲಾ: ಪ್ರವಾಸಕ್ಕೆಂದು ತೆರಳಿದ್ದ ವೇಳೆ ನೀರಿಗೆ ಬಿದ್ದು ನಾಪತ್ತೆಯಾದ ಘಟನೆ ತಾಲೂಕಿನ ಹೊಸಕಂಬಿ ಹಳ್ಳದಲ್ಲಿ ಭಾನುವಾರ ಸಂಜೆ ನಡೆದಿದೆ. ಬೊಬ್ರವಾಡದ ಸುಹಾಸ ಕೃಷ್ಣ (ಪಾಂಡುರಂಗ) ನಾಯ್ಕ (28) ನೀರಿನ ಹರಿವಿಗೆ ಸಿಲುಕಿ ನಾಪತ್ತೆಯಾದ ಯುವಕ.

ನಡೆದಿದ್ದೇನು?

ಅಂಕೋಲಾದ 15 ಜನರ ಗೆಳೆಯರ ತಂಡ ಹೊಸಕಂಬಿಯ ಹಳ್ಳದ ವಿಹಂಗಮ ಪ್ರದೇಶದಲ್ಲಿ ಪಾರ್ಟಿ ಮಾಡಲೆಂದು ತೆರಳಿದ್ದರು. ಈ ವೇಳೆ ಚಿಪ್ಪೆಕಲ್ಲನ್ನು ಆರಿಸಲು ಸುಹಾಸ ನಾಯ್ಕ ಗೆಳಯನೊಂದಿಗೆ ಇನ್ನೊಂದು ಬದಿಗೆ ನೀರಿಗೆ ಇಳಿದಿದ್ದ. ಈ ವೇಳೆ ಇಬ್ಬರು ನೀರಿನ ಹರಿವಿಗೆ ಸಿಲುಕಿದ್ದಾರೆ. ಆದರೆ, ಸ್ನೇಹಿತ ಹರಸಾಹಸ ಪಟ್ಟು ದಡ ಸೇರಿದ್ದಾನೆ. ಸುಹಾಸನಿಗೆ ಮಾತ್ರ ಈಜಲಾಗದೇ ನೀರಿನ ಹರಿವಿಗೆ ಸಿಲುಕಿ ನಾಪತ್ತೆಯಾಗಿದ್ದಾನೆ.

ಸುಹಾಸನ ಪತ್ತೆಗೆ ಆತನ ಗೆಳೆಯರು ಮತ್ತು ಅಗ್ಬಿಶಾಮಕ ದಳದ ಸಿಬ್ಬಂದಿ ಶ್ರಮಿಸಿದ್ದಾರೆ. ಸಿಪಿಐ ಸಂತೋಷ ಶೆಟ್ಟಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪಾರ್ಟಿಗೆ ತೆರಳಿದ್ದ ಗೆಳಯರನ್ನು ವಿಚಾರಣೆ ನಡೆಸಿದ್ದಾರೆ.

ಕೆರೆಯಲ್ಲಿ ಈಜಲು ಹೋಗಿ ಕೇರಳ ವಿದ್ಯಾರ್ಥಿ ನೀರು ಪಾಲು

ತುಮಕೂರು: ಮೋಜು ಮಸ್ತಿಗೆ ಬಂದು ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ನಗರದ (Tumkur News) ಮೈದಾಳ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

ಬೆಂಗಳೂರಿನ ಎಐಎಂಸ್ ಇನ್‌ಸ್ಟಿಟ್ಯೂಟ್‌ ಕಾಲೇಜು ವಿದ್ಯಾರ್ಥಿ ನಂದು (20) ಮೃತ ವಿದ್ಯಾರ್ಥಿ. ಕೇರಳದ ತಿರುವನಂತಪುರಂ ಮೂಲದ ಈತ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಸ್ನೇಹಿತರಾದ ಆಶಿಶ್ ಮತ್ತು ತುಷಾರ್ ಜತೆ, ಬೆಂಗಳೂರಿನಿಂದ ತುಮಕೂರಿನ ಬಸದಿ ಬೆಟ್ಟ ನೋಡಲು ಶನಿವಾರ ಬಂದಿದ್ದ. ಬಳಿಕ ಅಲ್ಲೇ ಪಕ್ಕದಲ್ಲಿರುವ ಮೈದಾಳ ಕೆರೆಯಲ್ಲಿ ಈಜಲು ಹೋಗಿದ್ದಾಗ0 ನೀರಿನಲ್ಲಿ ಮುಳುಗಿ ನಂದು ಮೃತಪಟ್ಟಿದ್ದಾನೆ.

ಇದನ್ನೂ ಓದಿ: VISTARA TOP 10 NEWS : ಮೈಸೂರು ದಸರಾಗೆ ಚಾಲನೆ, 3 ಹಮಾಸ್ ಕಮಾಂಡರ್​ಗಳ ಹತ್ಯೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಭಾನುವಾರ ಮೈದಾಳ ಕೆರೆಯಿಂದ ಮೃತದೇಹವನ್ನು ಹೊರತೆಗೆಯಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಾರ್ಚ್‌ ಮೊದಲ ವಾರದಿಂದ ಜನರಿಗೆ ಶಾಕ್‌ ಕೊಡಲಿದೆ ಬಿಸಿಲಿನ ಶಾಖ!

Dry Weather : ಬಿಸಿಲ ತಾಪಕ್ಕೆ ಕರಾವಳಿ ಹಾಗೂ ಉತ್ತರ ಒಳನಾಡಿನ ಜನರು ತತ್ತರಿಸಿ ಹೋಗಿದ್ದಾರೆ. ಮಾರ್ಚ್‌ ಮೊದಲ ವಾರದಿಂದ ಬಿಸಿಲ ಧಗೆಯು ಜನರನ್ನು (Karnataka Weather Forecast) ಮತ್ತಷ್ಟು ಹೈರಾಣಾಗಿಸಲಿದೆ.

VISTARANEWS.COM


on

By

Heat wave rises in March
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಿನದಿಂದ ದಿನಕ್ಕೆ ಬಿಸಿಲಿನ ಝಳಕ್ಕೆ ಜನರು ಪರಿತಪಿಸುತ್ತಿದ್ದಾರೆ. ಮಾರ್ಚ್‌ ಮೊದಲ ವಾರದಿಂದ ಬಿಸಿಲ ಧಗೆ ಮತ್ತಷ್ಟು ಹೆಚ್ಚಲಿದೆ. ಇದರಿಂದಾಗಿ ಅಯ್ಯಯ್ಯೋ ಬಿಸಿಲು ತಡೆಯಲು ಆಗುತ್ತಿಲ್ಲ ಎಂದು ಜನರು ಗೊಣಗುವಂತಾಗಿದೆ. ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಾರ್ಚ್‌ ತಿಂಗಳು ಬರುತ್ತಿದ್ದಂತೆ ಎಲ್ಲಿ ನೋಡಿದರೂ ಬಿಸಿಲಿನದ್ದೇ ಮಾತು. ಪ್ರತಿಯೊಬ್ಬರು ಏನ್‌ ಸೆಖೆ ಇದು ಹೇಳುವವರ ಸಂಖ್ಯೆಯೇ ಜಾಸ್ತಿ. ಮಾರ್ಚ್‌ ಮೊದಲ ವಾರದಲ್ಲೇ ಬಿಸಿಲ ಬೇಗೆಗೆ ಜನರು ಬೆಂದು ಬಸವಳಿದಿದ್ದಾರೆ. ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿ ಇರಲಿದೆ. ಇದರಿಂದ ಬಿಸಿಲಿನ ಧಗೆ ಮತ್ತಷ್ಟು ಕಾಡಲಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿ.ಸೆ ಕಡಿಮೆ ಆಗಲಿದೆ.

ಇದನ್ನೂ ಓದಿ: Assault Case : ಮಗು ಅಳುತ್ತಿದ್ದಕ್ಕೆ ಸಿಟ್ಟಾಗಿ ಗೋಡೆಗೆ ಎಸೆದು ಬಿಸಾಡಿದ ಪಾಪಿ ತಂದೆ!

ಬೆಂಗಳೂರಲ್ಲಿ ಮಂಜು ಮುಸುಕುವ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಆದರೆ ಬೆಂಗಳೂರು ವಿಮಾನ ನಿಲ್ದಾಣ ಸೇರಿ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಬೆಳಗ್ಗೆ ಹಾಗೂ ಸಂಜೆ ಹೊತ್ತಿಗೆ ಗಾಳಿ ಜೋರಾಗಿ ಬೀಸಲಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

Continue Reading

ಉತ್ತರ ಕನ್ನಡ

Uttara Kannada News: ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ

Uttara Kannada News: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ, ಬಿಜೆಪಿ ಯಲ್ಲಾಪುರ ಮಂಡಳ ವತಿಯಿಂದ ಪಟ್ಟಣದ ತಾಲೂಕಾ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

BJP protest demanding action against those who shouted pro Pak slogan
Koo

ಯಲ್ಲಾಪುರ: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ, ಬಿಜೆಪಿ ಯಲ್ಲಾಪುರ ಮಂಡಳ ವತಿಯಿಂದ ಪಟ್ಟಣದ ತಾಲೂಕಾ ಆಡಳಿತ ಸೌಧದ ಎದುರು (Uttara Kannada News) ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಕಾಂಗ್ರೆಸ್ ಬಹುಮತ ಪಡೆದು ಸರ್ಕಾರ ರಚನೆ ಆದಾಗಿನಿಂದ ರಾಜ್ಯದ ವಿವಿಧೆಡೆ ಪಾಕಿಸ್ತಾನದ ಧ್ವಜ ಹಾರಾಡುವುದನ್ನು ನಾವು ಕಂಡಿದ್ದೇವೆ. ಅಂದಿನಿಂದ ಆರಂಭವಾಗಿ ಇಂದು ನಮ್ಮ ರಾಜ್ಯದ ಶಕ್ತಿ ಕೇಂದ್ರದಲ್ಲಿಯೇ ಪಾಕಿಸ್ತಾನ ಪರ ಘೋಷಣೆ ಕೂಗುವಂತಹ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ತಂದೊಡ್ಡಿದೆ. ದೇಶದ ಪ್ರತ್ಯೇಕತಾವಾದಿ ಶಕ್ತಿಗಳನ್ನು ಪೋಷಿಸುವ ಕಾರ್ಯ ಇಂದಿನ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ನಾಸಿರ್ ಹುಸೇನ್‌ ಅವರ ವಿಜಯವನ್ನು ಅವರ ಬೆಂಬಲಿಗರು ಭಾರತ – ಪಾಕಿಸ್ತಾನದ ನಡುವಿನ ಯುದ್ಧದಲ್ಲಿ ಪಾಕಿಸ್ತಾನ ಗೆದ್ದಂತೆ ಸಂಭ್ರಮಿಸುವುದು ವಿಷಾದನೀಯ. ಇದನ್ನು ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧವೇ ಕಾಂಗ್ರೆಸ್ ಸರ್ಕಾರ ಇಂದು ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿಂದೆಯೂ ಸಹ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮಾಧ್ಯಮದ ಸ್ವಾತಂತ್ರ್ಯವನ್ನು ಕಿತ್ತುಕೊಂಡಿತ್ತು. ಸ್ವಾತಂತ್ರ್ಯದ 75 ವರ್ಷಗಳ ಬಳಿಕವೂ ಮಾಧ್ಯಮಕ್ಕೆ ಸ್ವಾತಂತ್ರ್ಯ ಇಲ್ಲದ ಪರಿಸ್ಥಿತಿ ರಾಜ್ಯದಲ್ಲಿ ಉಂಟಾಗಿದೆ. ಇವೆಲ್ಲವನ್ನೂ ವಿರೋಧ ಪಕ್ಷವಾಗಿ ಬಿಜೆಪಿ ಕಟುವಾಗಿ ಖಂಡಿಸುತ್ತದೆ. ಇಂತಹ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅತ್ಯಗತ್ಯ ಎಂದರು.

ಇದನ್ನೂ ಓದಿ: Karnataka Weather : ಬಿಸಿಲ ತಾಪಕ್ಕೆ ಕರಾವಳಿ, ಉತ್ತರ ಕರ್ನಾಟಕ ತತ್ತರ

ಇತ್ತೀಚಿನ ಬಜೆಟ್‌ನಲ್ಲಿಯೂ ಸಹ ಯಾವ ರೀತಿಯಲ್ಲಿ ಒಂದು ಸಮುದಾಯದ ಪುಷ್ಟೀಕರಣಕ್ಕೆ ಮುಂದಾಗಿರುವುದನ್ನು ನಾವೆಲ್ಲ ನೋಡಿದ್ದೇವೆ. ಅಲ್ಪಸಂಖ್ಯಾತರಿಗೋಸ್ಕರವೇ ನಮ್ಮ ಸರ್ಕಾರ ಎಂದು ಹೇಳಿಕೊಳ್ಳುವ ಅವರು, ದೇಶವನ್ನು ತುಂಡರಿಸುವ ಕೈಗಳಿಗೋಸ್ಕರ ಸರ್ಕಾರ ನಡೆಸುತ್ತಿರುವುದು ವಿಷಾದನೀಯ. ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಅಲ್ಪಸಂಖ್ಯಾತರು ಹಾಗೂ ಬಹುಸಂಖ್ಯಾತರಾಗಿ ಇಬ್ಭಾಗ ಮಾಡುವ ದುರುದ್ದೇಶ ಹೊಂದಿದೆ. ಇಂತಹ ಕಾಂಗ್ರೆಸ್ ಸರ್ಕಾರ ದೇಶದಿಂದ ನಾಶವಾಗಬೇಕು. ಇದಕ್ಕೆ 2014 ರಿಂದಲೇ ದೇಶದ ಜನರು ಮುನ್ನುಡಿ ಹಾಕಿದ್ದು, ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಮುಕ್ತ ಭಾರತದ ರಚನೆಗೆ ದೇಶದ ಜನರು ಕೈಜೋಡಿಸಲಿದ್ದಾರೆ ಎನ್ನುವ ಭರವಸೆ ಇದೆ ಎಂದರು.

ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ರಾಜೆಂದ್ರ ನಾಯ್ಕ ಮಾತನಾಡಿ, ಘಟನೆಯ ಕುರಿತು ಪರಿಶೀಲನೆ ನಡೆಸುವುದಾಗಿ ಕಾಂಗ್ರೆಸ್ ಮುಖಂಡರು ಹೇಳುತ್ತಾರೆ ಹೊರತು, ತಪ್ಪನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ. ದೇಶದ್ರೋಹಿಗಳಿಗೆ ಕಠಿಣ ಶಿಕ್ಷೆ ನೀಡಲೇಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Summer Shopping 2024: ಮಾಲ್‌ಗಳಲ್ಲಿ ಸಮ್ಮರ್‌ಗೂ ಮುನ್ನವೇ ಶುರುವಾಯ್ತು ಸೀಸನ್‌ ಶಾಪಿಂಗ್‌

ಹಿರಿಯ ಮುಖಂಡ ಪ್ರಮೋದ್ ಹೆಗಡೆ ಮಾತನಾಡಿ, ನಮ್ಮ ಸುಸಂಸ್ಕೃತ ದೇಶಕ್ಕೆ ಪ್ರತಿನಿತ್ಯ ಅಶಾಂತಿಯನ್ನು ಉಂಟು ಮಾಡುತ್ತಿರುವ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಖಂಡನಾರ್ಹ ಎಂದು ತಿಳಿಸಿದರು.

ಪ್ರತಿಭಟನಾಕಾರರು ತಹಸೀಲ್ದಾರ್‌ ಎಂ .ಗುರುರಾಜ್ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ: Job Alert: ದ್ವಿತೀಯ ಪಿಯುಸಿ ಪಾಸ್‌ ಆದವರಿಗೆ ಗುಡ್‌ನ್ಯೂಸ್‌; 2,500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಧಾನ ಕಾರ್ಯದರ್ಶಿ ರವಿ ಕೈಟ್ಕರ್, ನಿಕಟಪೂರ್ವ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್, ಪ್ರಮುಖರಾದ ರಾಮು ನಾಯ್ಕ, ಪ.ಪಂ. ಸದಸ್ಯ ಸೋಮೇಶ್ವರ ನಾಯ್ಕ, ಮಹಿಳಾ ಮೋರ್ಚಾ ಸದಸ್ಯೆ ರೇಖಾ ಹೆಗಡೆ, ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Uttara Kannada News: ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಚುನಾವಣಾ ನೋಡಲ್ ಅಧಿಕಾರಿಗಳಿಗೆ ಸೂಚನೆ

Uttara Kannada News: ಕಾರವಾರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ನೋಡಲ್ ಅಧಿಕಾರಿಗಳ ಸಭೆ ಜರುಗಿತು.

VISTARANEWS.COM


on

Uttara Kannada DC Gungubai manakar spoke in Election Nodal Officers Meeting at Karwar
Koo

ಕಾರವಾರ: ಮುಂಬರುವ ಲೋಕಸಭಾ ಚುನಾವಣಾ (Lok Sabha Election) ಪ್ರಯುಕ್ತ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿಗಳನ್ನು ಅರಿತುಕೊಂಡು ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ (Uttara Kannada News) ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲಾ ನೋಡಲ್ ಅಧಿಕಾರಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಗಳ ಬಗ್ಗೆ ತಮ್ಮ ಅಧೀನ ಸಿಬ್ಬಂದಿಗೆ ಸೂಕ್ತ ತರಬೇತಿಗಳನ್ನು ನೀಡಿ ಅವರನ್ನು ಚುನಾವಣಾ ಕರ್ತವ್ಯಗಳಿಗೆ ಸಜ್ಜುಗೊಳಿಸಬೇಕು. ತರಬೇತಿ ಸಮಯದಲ್ಲಿ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಣೆ ಕುರಿತಂತೆ ಇರುವ ಎಲ್ಲಾ ಸಂದೇಹ ಮತ್ತು ಗೊಂದಲಗಳನ್ನು ಪರಿಹರಿಸಿ, ಅವರು ಪರಿಪೂರ್ಣವಾಗಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: Air India: ವ್ಹೀಲ್‌ಚೇರ್‌ ಸಿಗದೆ ವೃದ್ಧ ಮೃತಪಟ್ಟ ಘಟನೆ; ಏರ್ ಇಂಡಿಯಾಕ್ಕೆ ಬಿತ್ತು ಭಾರೀ ದಂಡ

ಚುನಾವಣಾ ದಿನಾಂಕ ಘೋಷಣೆಯಾದ ಕೂಡಲೇ ತಮ್ಮ ವ್ಯಾಪ್ತಿಗಳಲ್ಲಿ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅದಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಸಾಕಷ್ಟು ಮುಂಚಿತವಾಗಿ ಮಾಡಿಕೊಳ್ಳುವುದರ ಮೂಲಕ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಿದ್ದರಿರುವಂತೆ ತಿಳಿಸಿದರು.

ಚುನಾವಣಾ ಪ್ರಕ್ರಿಯೆ ನಡೆಸಲು ಅಗತ್ಯವಿರುವ ಸಿಬ್ಬಂದಿ, ವಾಹನಗಳು, ಇವಿಎಂಗಳು, ಸಂಪರ್ಕ ವ್ಯವಸ್ಥೆಗಳು, ಮಾಧ್ಯಮ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ, ತಾಂತ್ರಿಕ ಸಿಬ್ಬಂದಿಗಳು, ಚುನಾವಣಾ ಸಾಮಗ್ರಿಗಳ ಹಂಚಿಕೆ, ಅಂಚೆ ಮತಪತ್ರಗಳ ನಿರ್ವಹಣೆ, ಚುನಾವಣಾ ಲೆಕ್ಕಪತ್ರಗಳ ನಿರ್ವಹಣೆ, ಚುನಾವಣಾ ವೀಕ್ಷಕರ ಕಾರ್ಯನಿರ್ವಹಣೆಗೆ ಅಗತ್ಯವಿರುವ ಮೂಲಭೂತ ವ್ಯವಸ್ಥೆಗಳು, ವಿಕಲಚೇತನ ಮತದಾರರು ಮತ್ತು ಹಿರಿಯ ನಾಗರೀಕ ಮತದಾರರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ಇಡೀ ಚುನಾವಣಾ ಪ್ರಕ್ರಿಯೆಯನ್ನು ಸುಗಮ, ಶಾಂತಿಯುತ, ಮತ್ತು ಪಾರದರ್ಶಕವಾಗಿ ನಡೆಸಲು ಎಲ್ಲಾ ನೋಡಲ್ ಅಧಿಕಾರಿಗಳು ಅತ್ಯಂತ ಹೆಚ್ಚಿನ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವಂತೆ ನಿದೇರ್ಶನ ನೀಡಿದರು.

ಚುನಾವಣೆ ಘೋಷಣೆಯಾದ ನಂತರ ಚುನಾವಣಾ ಆಯೋಗ ಹೊರಡಿಸುವ ಹೊಸ ಮಾರ್ಗಸೂಚಿಗಳು ಮತ್ತು ಆದೇಶಗಳ ಬಗ್ಗೆ ಎಲ್ಲಾ ನೋಡಲ್ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು ಹಾಗೂ ಆಯೋಗದ ಮಾರ್ಗಸೂಚಿಯಂತೆಯೇ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: IPL 2024: ಲಕ್ನೋ ಸೂಪರ್​ ಜೈಂಟ್ಸ್​ ತಂಡಕ್ಕೆ ನಿಕೋಲಸ್ ಪೂರನ್ ಉಪನಾಯಕ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Road Accident: ಸ್ಕೂಟಿಗೆ ಬಸ್‌ ಡಿಕ್ಕಿ; ಹೆದ್ದಾರಿಯಲ್ಲೇ ಒದ್ದಾಡಿ ಪ್ರಾಣ ಬಿಟ್ಟ ತಾಯಿ, ಮಗಳು

Road Accident : ಅಮ್ಮ ಮತ್ತು ಮಗಳು ಸ್ಕೂಟಿಯಲ್ಲಿ ಸಾಗುತ್ತಿದ್ದರು. ಅವರು ಹೆದ್ದಾರಿ ದಾಡುತ್ತಿದ್ದಾಗ ಒಮ್ಮೆಗೇ ಬಂದ ಬಸ್‌ ಡಿಕ್ಕಿ ಹೊಡೆದಿದೆ. ಅವರಿಬ್ಬರೂ ಅಲ್ಲೇ ರಸ್ತೆಗೆ ಬಿದ್ದು ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ.

VISTARANEWS.COM


on

Road Accident honnavara
Koo

ಕಾರವಾರ : ರಾಷ್ಟ್ರೀಯ ಹೆದ್ದಾರಿ (National High Way) ದಾಟುತ್ತಿದ್ದ ವೇಳೆ ಸ್ಕೂಟಿಗೆ ಬಸ್ ಡಿಕ್ಕಿಯಾಗಿ (Bus hits Scooty) ತಾಯಿ ಮತ್ತು ಮಗಳು (Mother and daughter dead) ದಾರುಣವಾಗಿ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ (Uttara Kannada News) ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಗ್ರಾಮದ ಬಳಿ ಘಟನೆ (Road Accident) ನಡೆದಿದೆ.

ಭಟ್ಕಳ ತಾಲ್ಲೂಕಿನ ಮುರ್ಡೇಶ್ವರದ ಮಾವಳ್ಳಿ ನಿವಾಸಿಗಳಾದ ಸವಿತಾ ಆಚಾರಿ(40) ಮತ್ತು ಮಗಳು ಅಂಕಿತಾ ಆಚಾರಿ(17) ಮೃತ ದುರ್ದೈವಿಗಳು.

ಸವಿತಾ ಮತ್ತು ಅಂಕಿತಾ ಅವರು ಸ್ಕೂಟಿಯಲ್ಲಿ ಸಾಗುತ್ತಿದ್ದರು. ಮಂಕಿ ಬಳಿ ಅವರು ಹೆದ್ದಾರಿಯನ್ನು ದಾಟುತ್ತಿದ್ದಾಗ ಮಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಏಕಾಏಕಿಯಾಗಿ ನುಗ್ಗಿ ಬಂದಿದೆ.

ವೇಗವಾಗಿ ಬಂದ ಬಸ್‌ ಒಮ್ಮಿಂದೊಮ್ಮೆಗೇ ಬ್ರೇಕ್‌ ಹಾಕಿ ಸ್ಕೂಟಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನ ನಡೆಸಿದ್ದಾನೆ. ಹೀಗೆ ಮಾಡುವಾಗ ಬಸ್‌ ರಸ್ತೆ ಮಧ್ಯದ ಡಿವೈಡರ್ ಹತ್ತಿ ದೂರ ಹೋಗಿ ನಿಂತಿದೆ.

ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : Kidnap Case : ಸಮುದ್ರದಲ್ಲೇ ಮೀನುಗಾರರ ಮೇಲೆ ದಾಳಿ ಮಾಡಿ ಕಿಡ್ನಾಪ್‌; ಕೊನೆಗೂ ರಕ್ಷಣೆ

ಗೆಳೆಯರ ಜತೆ ಪಾರ್ಟಿಗೆ ಹೋಗಿದ್ದ ಯುವಕ ಸುಟ್ಟ ಸ್ಥಿತಿಯಲ್ಲಿ ಪತ್ತೆ

ರಾಯಚೂರು: ಗೆಳೆಯರ ಜೊತೆ ಪಾರ್ಟಿಗೆ ತೆರಳಿದ್ದ ಯುವಕ ಶವವಾಗಿ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿಯಲ್ಲಿ ನಡೆದಿದೆ.

ನೀರಮಾನ್ವಿ ಬಳಿಯ ಮಿಟ್ಟಿ ಕ್ಯಾಂಪ್‌ ಗ್ರಾಮದ ಹೊಲದಲ್ಲಿ ಸುರೇಶ್ ನಾಯಕ್ (20) ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಆತನ ಶವವನ್ನು ಪೆಟ್ರೋಲ್‌ ಹಾಕಿ ಸುಡಲಾಗಿದೆ.

ಸುರೇಶ್‌ ಮೂರು ದಿನಗಳ ಹಿಂದೆ ಸ್ನೇಹಿತರ ಜೊತೆ ತೆರಳಿದ್ದ. ಸ್ನೇಹಿತರ ಜೊತೆ ಪಾರ್ಟಿ ಮಾಡೋದಾಗಿ ಹೇಳಿ ಹೋಗಿದ್ದ ಸುರೇಶ್ ಮನೆಗೆ ಬಾರದೆ ನಿಗೂಢವಾಗಿ ನಾಪತ್ತೆಯಾಗಿದ್ದ. ಇದೀಗ ಮೂರು ದಿನಗಳ ಸುರೇಶ್‌ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

Raichur suresh death

ಮಾನ್ವಿ ಪಟ್ಟಣದ ಸ್ಥಳೀಯ ನಿವಾಸಿ ಆಗಿರೋ ಮೃತ ಸುರೇಶ್ ಬೆಂಗಳೂರಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ. ಇತ್ತಿಚೆಗೆ ಜಾತ್ರೆಯ ಸಲುವಾಗಿ ಊರಿಗೆ ಬಂದಿದ್ದ. ಇದೀಗ ಆತನನ್ನು ಕರೆದುಕೊಂಡು ಹೋಗಿರುವ ಸ್ನೇಹಿತರು ನಾಪತ್ತೆಯಾಗಿದ್ದಾರೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಸುರೇಶ್ ಶವಕಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement
Elephants spotted in many places
ಹಾಸನ3 mins ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

DY Patil T20 Cup 2024
ಕ್ರೀಡೆ16 mins ago

Ishan Kishan: ಮತ್ತೆ ಎಡವಟ್ಟು ಮಾಡಿಕೊಂಡು ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಇಶಾನ್​ ಕಿಶನ್​

Caste Census Basava jaya Mruthyunjaya swameeji
ಬೆಂಗಳೂರು17 mins ago

Caste Census : ಹೆಗ್ಡೆ ವರದಿ ಸುಳ್ಳು, ರಾಜ್ಯದಲ್ಲಿ 24% ಲಿಂಗಾಯತರಿದ್ದಾರೆ; ಜಯ ಮೃತ್ಯುಂಜಯ ಸ್ವಾಮೀಜಿ

Sensex points
ದೇಶ21 mins ago

Sensex Jump : ಷೇರು ಮಾರುಕಟ್ಟೆಯಲ್ಲಿ ಮಿಂಚಿನ ಸಂಚಾರ; 1000 ಅಂಕಗಳಷ್ಟು ಏರಿಕೆ

BJP meeting
ದೇಶ59 mins ago

Lok Sabha Election: ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಈ ಬಾರಿ ಹೊಸ ಮಾನದಂಡ! ಹೊಸ ಮುಖಗಳಿಗೆ ಚಾನ್ಸ್

blast at Bangalore
ಬೆಂಗಳೂರು1 hour ago

Blast in Bangalore : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ; ಐವರು ಗಂಭೀರ

jnu violence
ಪ್ರಮುಖ ಸುದ್ದಿ1 hour ago

JNU Violence: ಜೆಎನ್‌ಯು ವಿವಿಯಲ್ಲಿ ಎಡ- ಬಲ ವಿದ್ಯಾರ್ಥಿಗಳ ಚಕಮಕಿ, ಹಿಂಸಾಚಾರ

Sedition case FSL report arrives pro Pakistan slogans confirmed BJP accuses Congress
ರಾಜಕೀಯ1 hour ago

Sedition case: FSL ವರದಿ ಬಂದಿದೆ, ಪಾಕ್‌ ಪರ ಘೋಷಣೆ ದೃಢಗೊಂಡಿದೆ! ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ

Former Miss India Tripura Rinky Chakma 28 Dies
ಸಿನಿಮಾ2 hours ago

Rinky Chakma: ಮಾಜಿ ಮಿಸ್ ಇಂಡಿಯಾ ಸ್ತನ ಕ್ಯಾನ್ಸರ್‌ನಿಂದ ನಿಧನ

Murder Case Chakra
ಕಲಬುರಗಿ2 hours ago

Murder Case : ಕೊಲೆಗೆ ಮುನ್ನ ಹಾರ ಹಾಕಿ ಸನ್ಮಾನ; ಕಟುಕರ ಕೈಯ ಕುರಿಯಂತಾದರಾ ಚಕ್ರ?

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephants spotted in many places
ಹಾಸನ3 mins ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ10 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ1 day ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ3 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ3 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ3 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ3 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ4 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ4 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

ಟ್ರೆಂಡಿಂಗ್‌