ಶಿರಸಿ/ಹುಬ್ಬಳ್ಳಿ: ಮಾಜಿ ಶಾಸಕ ವಿ.ಎಸ್. ಪಾಟೀಲ್ ಇದ್ದ ಕಾರು ಅಪಘಾತಕ್ಕೀಡಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಾರವಳ್ಳಿ ಗ್ರಾಮದ ಬಳಿ ಅಪಘಾತ (Road Accident) ನಡೆದಿದೆ.
ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಗ್ರಾಮ ಅಂದಲಗಿಗೆ ತೆರಳುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ ಡಿಕ್ಕಿ ರಭಸಕ್ಕೆ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ವಿ.ಎಸ್. ಪಾಟೀಲರ ಎದೆಗೆ ಪೆಟ್ಟಾಗಿದೆ. ಯಲ್ಲಾಪುರ-ಮುಂಡಗೋಡ ಕ್ಷೇತ್ರದಲ್ಲಿ ಒಂದು ಭಾರಿ ಶಾಸಕರಾಗಿದ್ದ ವಿ.ಎಸ್. ಪಾಟೀಲ್ ಮೃದು ಹಾಗೂ ಸಜ್ಜನ ರಾಜಕಾರಿಣಿ ಎಂದೇ ಚಿರಪರಿಚಿತಾರಾಗಿದ್ದರು. ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Elephant Death : ಶಿವರಾತ್ರಿಯಂದೇ ಶಿವೈಕ್ಯಳಾದ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಲತಾ
ಬೈಕ್‌ಗೆ ಟಿಪ್ಪರ್ ಡಿಕ್ಕಿ, ಸವಾರ ಸಾವು
ಬೈಕ್‌ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ. ಹುಬ್ಬಳ್ಳಿಯ ಕುಸಗಲ್ ಬಳಿ ಅಪಘಾತ ಸಂಭವಿಸಿದೆ. ಇಂಗಳಹಳ್ಳಿಯ ರಾಜೇಸಾಬ್ ಕೊಲ್ಯಾಡಿ (24) ಮೃತ ದುರ್ದೈವಿ.
ಇನ್ನೂ ಬೈಕ್ ಟ್ಯಾಂಕ್ ಮೇಲೆ ಕುಳಿತಿದ್ದ 12 ವರ್ಷದ ಬಾಲಕ ಅದೃಷ್ಟವಶಾತ್ ಪಾರಾಗಿದ್ದಾನೆ. ಕುಡಿದ ಮತ್ತಿನಲ್ಲಿ ಟಿಪ್ಪರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದಾನೆಂಬ ಮಾಹಿತಿ ಲಭ್ಯವಾಗಿದೆ. ಟಿಪ್ಪರ್ ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯಾಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ