Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ - Vistara News

ಉತ್ತರ ಕನ್ನಡ

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Road Accident: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಸೋಮವಾರ ರಾತ್ರಿ ಜರುಗಿದೆ. ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಇಬ್ಬರು‌ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Road Accident Head on collision between bikes One person died on the spot
ಮೃತ ಯುವಕ ಅರವಿಂದ ಬೆಲ್ದಾರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಡಗೋಡ: ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ (Road Accident) ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಸೋಮವಾರ ರಾತ್ರಿ ಜರುಗಿದೆ.

ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅರವಿಂದ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು‌ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

ಗಾಯಗೊಂಡವರನ್ನು ತಾಲೂಕಿನ ಕೊಪ್ಪ ಗ್ರಾಮದವರು ಎಂದು ತಿಳಿದುಬಂದಿದೆ. ತಕ್ಷಣವೇ ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂಡಗೋಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮುಂಡಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Road Accident: ಬೊಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದ ಮಡ್ಡಿ ಬಳಿ ಬೊಲೇರೋ ಹಾಗೂ ದ್ವಿ ಚಕ್ರ ವಾಹನ‌ಗಳ ನಡುವೆ ರಸ್ತೆ ಅಪಘಾತ (Road Accident) ಸಂಭವಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುರುಸಿದ್ದ (42), ಮಧುಮತಿ (34) ಮೃತ ದುರ್ದೈವಿಗಳು. ಇವರು ಮಾದನಹಿಪ್ಪರಗಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದಿಂದ ಮಹಾರಾಷ್ಟ್ರದ ಮೈಂದರಿಗಿಗೆ ದಂಪತಿ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬುಲೇರೋ ನಿಯಂತ್ರಣಕ್ಕೆ ಸಿಗದೆ ಪಕ್ಕದ ಚರಂಡಿಗೆ ಹೋಗಿ ಬಿದ್ದಿದೆ. ಸ್ಥಳಕ್ಕೆ ಮಾದನಹಿಪ್ಪರಗಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮುಂದಿನ 7 ದಿನ ಭಾರೀ ಮಳೆ: ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್

VISTARANEWS.COM


on

ಭಾರೀ ಮಳೆ

ಭಾರೀ ಮಳೆ ಬೆಂಗಳೂರು:

ನೈಋತ್ಯ ಮುಂಗಾರು ರಾಜ್ಯಕ್ಕೆ ಸಂಪೂರ್ಣವಾಗಿ ಪ್ರವೇಶಿಸಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ 7 ದಿನ ವ್ಯಾಪಕ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, 204.5 ಮಿಲಿಮೀಟರ್‌ಗಿಂತ ಅಧಿಕ ಪ್ರಮಾಣದ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಹೆಚ್ಚಿದ್ದು, ನದಿ, ಹೊಳೆ ಮತ್ತು ಜಲಾಶಯಗಳ ಸಮೀಪ ವಾಸಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Also Read: ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

ಭಾರೀ ಮಳೆ
Continue Reading

ಉತ್ತರ ಕನ್ನಡ

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜತೆಗೆ ಇದ್ದವರೆ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

VISTARANEWS.COM


on

Murder case

ಉತ್ತರ ಕನ್ನಡ : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ (Murder Case) ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಸರ್ಕಾರಿ ಆಸ್ಪತ್ರೆ ಕ್ವಾರ್ಟರ್ಸ್ ಬಳಿ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಇಮ್ತಿಯಾಝ್(25) ಕೊಲೆಯಾದವನು.

ಗಾರೆ ಕೆಲಸಕ್ಕಾಗಿ ಇಮ್ತಿಯಾಝ್‌ ಕಳೆದೊಂದು ತಿಂಗಳಿನಿಂದ ಕುಮಟಾ ಸರಕಾರಿ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ತಂಗಿದ್ದ. ಈತನ ಜತೆ ಹುಬ್ಬಳ್ಳಿ ಮೂಲದ ಮೊಯುದ್ದೀನ್, ಮೌನೇಶ್ ಹಾಗೂ ಸಾದಿಕ್ ಎಂಬುವವರು ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಗಾರೆ ಕೆಲಸಕ್ಕಾಗಿಯೇ ಕುಮಟಾಕ್ಕೆ ಬಂದು, ನಾಲ್ವರು ಒಂದೇ ರೂಮಿನಲ್ಲಿ ತಂಗಿದ್ದ. ಇಮ್ತಿಯಾಝ್ ಕೊಲೆಯ ಬಳಿಕ ಜತೆಗಿದ್ದ ಮೂವರು ಪರಾರಿ ಆಗಿದ್ದಾರೆ.

ಇನ್ಸ್‌ಪೆಕ್ಟರ್ ಯೋಗೀಶ್ ನೇತೃತ್ವದಲ್ಲಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಮೃತಪಟ್ಟರೆ, ಕೆರೆಗೆ ಕಾಲು ಜಾರಿ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ.

VISTARANEWS.COM


on

Medical negligence

ವಿಜಯನಗರ: ವೈದ್ಯರ ನಿರ್ಲಕ್ಷ್ಯಕ್ಕೆ ಐದು ವರ್ಷದ ಮಗು ಮೃತಪಟ್ಟಿರುವುದಾಗಿ (Medical Negligence) ಆರೋಪ ಕೇಳಿ ಬಂದಿದೆ. ಕುಶಾಲ್( 05) ಮೃತಪಟ್ಟವರು. ವಿಜಯನಗರದ ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ದಂಪತಿಯ ಮಗು ಕುಶಾಲ್‌ ಜ್ವರದಿಂದ ಬಳಲುತ್ತಿದ್ದ.

ಹೀಗಾಗಿ ಬೆಳಗ್ಗೆ 7 ಗಂಟೆಗೆ ಬಂದಾಗ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಇರಲಿಲ್ಲ. ಜ್ವರ ಹೆಚ್ಚಿದೆ ಅಂತ ಖಾಸಗಿ ಆಸ್ಪತ್ರೆಗೆ ರೇಫರ್ ಮಾಡಿದ್ದರು. ಆ ಖಾಸಗಿ ಆಸ್ಪತ್ರೆಯಿಂದ ಮತ್ತೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹೋಗಿದ್ದರು. ಮಗು ಚೆನ್ನಾಗಿದೆ ಅಂತ ಹೇಳಿ ವೈದ್ಯರು ಕಳಿಸಿದ್ದರು. ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಬರಲು ಜ್ವರ ಹೆಚ್ಚಿತ್ತು, ಬಂದಾಗ ತುರ್ತು ಚಿಕಿತ್ಸೆಗೆ ವೈದ್ಯರಿರಲಿಲ್ಲಾ ಅಂತ ಪೊಷಕರು ಆರೋಪಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತ ಮಗುವಿನ ತಾಯಿ ಗೋಳಾಟ ಜೋರಾಗಿತ್ತು. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಹಂಸ (19) ಮೃತ ದುರ್ದೈವಿ. ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ ನಿನ್ನೆ ರಜೆ ಹಿನ್ನೆಲೆಯಲ್ಲಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಅಲ್ಲೆ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು ಈ ವೇಳೆ ಕೆರೆ ಕೋಡಿ ನೋಡುವ ವೇಳೆ ಕಾಲು ಜಾರಿ ಬಿದ್ದಿದ್ದಾಳೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿ ಮೃತದೇಹ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ 766EEಯ ಹಾರೂಗಾರ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರ ಅಮ್ಮಿನಳ್ಳಿಯ ಅಡಳ್ಳಿ ಮೂಲದವರು ಎನ್ನಲಾಗಿದೆ. ಬೆಳಗಿನ ಜಾವ ಶಿರಸಿಯತ್ತ ತೆರಳುತ್ತಿದ್ದ ಬೈಕ್ ಸವಾರ, ರಸ್ತೆಯಂಚಿಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಆಂಬ್ಯುಲೆನ್ಸ್ ತಲುಪುವ ವೇಳೆಗಾಗಲೇ ಸವಾರ ಮೃತಪಟ್ಟಿದ್ದಾರೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಿವೈಡರ್‌ಗೆ ಕೇರಳ ಬಸ್‌; ಚಾಲಕ ಸ್ಪಾಟ್‌ ಡೆತ್‌

ಚಾಲಕನ ನಿಯಂತ್ರಣ ತಪ್ಪಿ ಕೇರಳ ಬಸ್‌ವೊಂದು ರೋಡ್ ಡಿವೈಡರ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಗೆಜ್ಜಲಗೆರೆ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೇರಳ ಬಸ್‌ ಚಾಲಕ ಹಸೀಬ್ (48) ಸ್ಥಳದಲ್ಲೇ ಮೃತಪಟ್ಟವರು. ಚಾಲಕನ ಮೃತದೇಹ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading
Advertisement
ಬಿಡದಿ ಟೌನ್‌ಶಿಪ್‌
Latest20 hours ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest21 hours ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest2 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest2 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest3 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest3 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ4 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest4 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest4 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest4 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌