Site icon Vistara News

Road Accident : ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

Road Accident

ಕಾರವಾರ: ಬಸ್‌ಗೆ ಸ್ಕೂಟರ್‌ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ಘಟನೆ (Road Accident) ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿ.

ಕೆಎಸ್‌ಆರ್‌ಟಿಸಿ ಬಸ್‌ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಬಸ್‌ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಹಾಸನ: ಹಾಸನ ಹೊರವಲಯದ ಈಚನಹಳ್ಳಿ (Ichanahalli Village) ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ (ಮೇ.26) ಸಂಭವಿಸಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು (Five died on the spot) ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು (Hassan Accident Terrible accident) ಹರಸಾಹಸ ಪಟ್ಟಿದ್ದಾರೆ.

ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಇಬ್ಬರು ಮಹಿಳೆ, ಮೂವರು ಪುರುಷರು, ಒಂದು ಮಗು ಕೂಡ ಮೃತಪಟ್ಟಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಕುಟುಂಬ ತೆರಳಿತ್ತು. ವಾಪಸ್ ಊರಿಗೆ ಮರಳುವಾಗ ನಿದ್ರೆ ಮಂಪರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೃತರು ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಬಾಲಕ ಚೇತನ್ , ಡ್ರೈವರ್‌ ರಾಕೇಶ್ ಮೃತರು ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version