ಯಲ್ಲಾಪುರ: “ಬೇಲಿಯೇ ಎದ್ದು ಹೊಲ ಮೇಯ್ದಂತೆ” ಎಂಬ ನುಡಿಗಟ್ಟನ್ನು ಕೇಳಿದ್ದೇವೆ. ಆದರೆ, ಈ ಮಾತಿಗೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಪಟ್ಟಣದಲ್ಲಿ ನಿದರ್ಶನ ದೊರೆತಿದೆ. ಪಟ್ಟಣದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕ್ ಖಾತೆಯಿಂದ ಹೆಂಡತಿ ಖಾತೆಗೆ ೨.೬೯ ಕೋಟಿ ರೂ. ವರ್ಗಾವಣೆ (Crime) ಮಾಡಿಕೊಂಡಿದ್ದಾನೆ. ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿರುವ ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತ ಕಳೆದ ಏಪ್ರಿಲ್ 7ರಿಂದ ಸೆಪ್ಟೆಂಬರ್ 9ರವರೆಗಿನ ಅವಧಿಯಲ್ಲಿ ಬ್ಯಾಂಕ್ ಹಣವನ್ನು ಹೆಂಡತಿ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.
ಬ್ಯಾಂಕ್ ಸಿಬ್ಬಂದಿಯ ಲಾಗಿನ್ಅನ್ನು ಅವರ ಗಮನಕ್ಕೆ ಬರದಂತೆ ಉಪಯೋಗಿಸಿಕೊಂಡು, ಆಂಧ್ರದ ಚಿರಲಾದ ಎಸ್‌ಬಿಐ ಶಾಖೆಯಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಪ್ರಿಯಾಂಕಾ ಗೊರ್ರೆಯ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಪ್ರಕರಣದ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದಾರೆ.
ಇದನ್ನೂ ಓದಿ | ನೂರಾರು ಕೋಟಿ ವಂಚಿಸಿ ವಿದೇಶಕ್ಕೆ ಹಾರಿದ್ದ ಕಾರು ಚಾಲಕ ಅರೆಸ್ಟ್!