Site icon Vistara News

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Self Harming

ಕಾರವಾರ: ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದವರು. ಜೂಜಾಟ ಆರೋಪದಡಿ ಭಾಸ್ಕರ್‌ ವಿರುದ್ಧ ರಾಮನಗರ ಪಿಎಸ್ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದಾನೆ.

ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತರೊಬ್ಬರು (Farmer Death) ಆತ್ಮಹತ್ಯೆ (Self Harming) ಮಾಡಿಕೊಂಡು ಮೃತಪಟ್ಟಿದ್ದಾರೆ. ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣೇಗೌಡ (57) ಮೃತ ದುರ್ದೈವಿ.

ಅಣ್ಣೇಗೌಡ ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಒಬಿ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದರು. ಖಾಸಗಿ ಬ್ಯಾಂಕ್‌ನಲ್ಲಿ 14 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆರೆಯಿಂದ ರೈತನ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version