ಕಾರವಾರ: ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ಮಾಂಸ ಪ್ರಿಯರನ್ನು ಟಾರ್ಗೆಟ್ ಮಾಡಿದ್ದ ಕೆಲವು ಅಲೆಮಾರಿ ಜನಾಂಗದ ಯುವಕರು, ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡಿ ವಂಚಿಸಿದ್ದರು. ಹತ್ತಾರು ಮನೆಗಳಿಗೆ ಮಾಂಸ ಮಾರಾಟ ಮಾಡಿ ಮೋಸ ಮಾಡಿದ್ದ ಇಬ್ಬರು ಯುವಕರನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ.
ಇದನ್ನೂ ಓದಿ | Youth drowned: ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ; ಮುಗಿಲುಮುಟ್ಟಿದ ಪಾಲಕರ ಆಕ್ರಂದನ
ಮಾಂಸದ ವಿಚಾರವಾಗಿ ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದ ವೇಳೆ ನಾಯಿ ಹಿಡಿಯುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ನಾಯಿಗಳನ್ನು ಹಿಡಿಯುತ್ತಿದ್ದ ಯುವಕರನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.