Sirsi News: ಶಕ್ತಿ ಯೋಜನೆ ಎಫೆಕ್ಟ್‌: ಉ.ಕ ಜಿಲ್ಲೆಯಲ್ಲಿ ಸ್ಥಳೀಯರಿಗೆ ಬಸ್‌ ಇಲ್ಲದೇ ಪರದಾಟ - Vistara News

ಉತ್ತರ ಕನ್ನಡ

Sirsi News: ಶಕ್ತಿ ಯೋಜನೆ ಎಫೆಕ್ಟ್‌: ಉ.ಕ ಜಿಲ್ಲೆಯಲ್ಲಿ ಸ್ಥಳೀಯರಿಗೆ ಬಸ್‌ ಇಲ್ಲದೇ ಪರದಾಟ

Sirsi News: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಅನುಷ್ಠಾನವಾದ ಬಳಿಕ ಉತ್ತರ ಕನ್ನಡ ಜಿಲ್ಲೆಗೆ ಪ್ರತಿದಿನ ನಾನಾ ಭಾಗಗಳಿಂದ 2 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು, ಜಿಲ್ಲೆಯಲ್ಲಿ ಖಾಸಗಿ ಬಸ್ ವ್ಯವಸ್ಥೆ ಇಲ್ಲದೇ ಸರ್ಕಾರಿ ಬಸ್‌ಗಳನ್ನೇ ಅವಲಂಬಿಸಿದ ಸ್ಥಳೀಯ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ ದೊರಕದೇ ತೀವ್ರ ತೊಂದರೆ ಅನುಭವಿಸುವಂತಾಗಿದೆ.

VISTARANEWS.COM


on

Shakti Scheme Effect, In Uttara Kannada district locals and students are facing problems without buses
ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುತ್ತಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾಸ್ಕರ್ ಆರ್ ಗೆಂಡ್ಲ, ವಿಸ್ತಾರ ನ್ಯೂಸ್

ಶಿರಸಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದಾಗಿ (Shakti Scheme) ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಪ್ರವಾಸೋದ್ಯಮ, ಧಾರ್ಮಿಕ ಕ್ಷೇತ್ರಗಳೇ ಹೆಚ್ಚಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kannada District) ಪ್ರತಿದಿನ ಎರಡು ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದು, ಸ್ಥಳೀಯ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ದೊರಕದೇ ಹಿಡಿ ಶಾಪ ಹಾಕುವಂತಾಗಿದೆ.

ಹೌದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ವ್ಯವಸ್ಥೆ ಇಲ್ಲದ ಕಾರಣ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸುಗಳೇ ಪ್ರಯಾಣಿಕರಿಗೆ ಆಧಾರ. ಹೀಗಾಗಿ ಜಿಲ್ಲೆಯ ಬಹುತೇಕ ಜನರು ಸರ್ಕಾರಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಆದರೆ ಉಚಿತ ಬಸ್ ವ್ಯವಸ್ಥೆಯಿಂದಾಗಿ ಜಿಲ್ಲೆಗೆ ಬರುವ ಮಹಿಳಾ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನಾನಾ ಭಾಗಗಳಿಂದ ಪ್ರತಿ ದಿನ 2 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಇನ್ನು ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಕಾರಣ ಸ್ಥಳೀಯವಾಗಿ ತೆರಳುವ ಬಸ್‌ಗಳ ಮಾರ್ಗ ಬದಲು ಮಾಡಿದ್ದು, ಇದರಿಂದ ಹಳ್ಳಿಗಾಡಿಗೆ ತೆರಳುವ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿ ದಿನ ಒಂದು ಲಕ್ಷದ ಐವತ್ತು ಸಾವಿರ ಪ್ರಯಾಣಿಕರು ಪ್ರಯಾಣಿಸುತಿದ್ದರು. ಆದರೆ ಶಕ್ತಿ ಯೋಜನೆ ಅನುಷ್ಠಾನ ಆದ ನಂತರ ಇದರ ಸಂಖ್ಯೆ ಎರಡು ಲಕ್ಷದ ಮೂವತ್ತೈದು ಸಾವಿರಕ್ಕೂ ಹೆಚ್ಚಾಗಿದೆ. ಅದರಲ್ಲಿ ಪ್ರತಿ ದಿನ 50 ಸಾವಿರದವರೆಗೆ ಮಹಿಳಾ ಪ್ರಯಾಣಿಕರೇ ಪ್ರಯಾಣಿಸುತಿದ್ದು, ಜಿಲ್ಲೆಯಲ್ಲಿ ವಾಯುವ್ಯ ಸಾರಿಗೆ ಸಂಸ್ಥೆ ಆದಾಯವು 45 ಲಕ್ಷದಿಂದ 70 ಲಕ್ಷ ಏರಿಕೆ ಕಂಡಿದೆ.

ಆದರೆ ಬಸ್‌ಗಳ ಹಾಗೂ ಚಾಲಕರ ಕೊರತೆ ಇರುವುದರಿಂದ ಸ್ಥಳೀಯ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಜಿಲ್ಲೆಯಲ್ಲಿ 120 ಚಾಲಕ-ನಿರ್ವಾಹಕರ ಅವಶ್ಯಕತೆ ಇದ್ದು, 50 ಬಸ್‌ಗಳು ಹೆಚ್ಚುವರಿ ಬೇಕಾಗಿದೆ. ಹೀಗಿದ್ದರೂ ಹತ್ತು ವರ್ಷಕ್ಕೂ ಹೆಚ್ಚು ಮೀರಿದ 70 ಕ್ಕೂ ಹೆಚ್ಚು ಬಸ್‌ಗಳಿದ್ದು ಇವುಗಳ ಜತೆ ಹೊರ ರಾಜ್ಯಕ್ಕೆ ತೆರಳುವ ಬಸ್‌ಗಳನ್ನು ಸಹ ಸ್ಥಳೀಯ ಸಂಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ . ಇನ್ನು ಗುತ್ತಿಗೆ ಆಧಾರದ ಮೇಲೆ 50 ಜನ ಖಾಸಗಿ ಚಾಲಕರನ್ನು ಸಹ ತೆಗೆದುಕೊಳ್ಳಲಾಗಿದೆ. ಹೀಗಿದ್ದರೂ ಬಸ್‌ಗಳ ಕೊರತೆಯಿಂದ 50 ಕ್ಕೂ ಹೆಚ್ಚು ಮಾರ್ಗಗಳಿಗೆ ಸಂಚಾರ ವ್ಯವಸ್ಥೆ ಕಲ್ಪಿಸಲು ವಾಯುವ್ಯ ಸಾರಿಗೆ ಪರದಾಡುತ್ತಿದೆ.

ಶಿರಸಿ ಬಸ್‌ ಡಿಪೋ.

ಒಟ್ಟಾರೆ ಶಕ್ತಿ ಯೋಜನೆಯಿಂದ ಸರ್ಕಾರಿ ಸಾರಿಗೆ ಸಂಸ್ಥೆಗಳಿಗೆ ಲಾಭವೇನೋ ಆಗುತ್ತಿದೆ. ಆದರೆ ಬಸ್‌ಗಳ ಕೊರತೆಯಿಂದಾಗಿ ಸ್ಥಳೀಯ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತೊಡಕಾಗುತಿದ್ದು, ಪ್ರಯಾಣಿಕರು ಹಿಡಿ ಶಾಪ ಹಾಕುವಂತಾಗಿದೆ. ಇನ್ನಾದರೂ ಸಾರಿಗೆ ಇಲಾಖೆ ಇರುವ ಬಸ್‌ಗಳನ್ನು ಮಾರ್ಗ ಬದಲು ಮಾಡುವ ಬದಲು ಹೆಚ್ಚಿನ ಬಸ್‌ಗಳ ವ್ಯವಸ್ಥೆ ಮಾಡಬೇಕಿದೆ ಎಂದು ಸ್ಥಳೀಯ ನಿವಾಸಿಯಾದ ಶ್ರೀಪತಿ ಹೆಗಡೆ ಒತ್ತಾಯಿಸಿದ್ದಾರೆ.

ಗುತ್ತಿಗೆ ಆಧಾರದ ಮೇಲೆ 50 ಜನ ಖಾಸಗಿ ಚಾಲಕರನ್ನು ಸಹ ತೆಗೆದುಕೊಳ್ಳಲಾಗಿದೆ. ಹೀಗಿದ್ದರೂ ಬಸ್‌ಗಳ ಕೊರತೆಯಿಂದ 50 ಕ್ಕೂ ಹೆಚ್ಚು ಮಾರ್ಗಗಳಿಗೆ ಸಂಚಾರ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ. ಮಹಿಳಾ ಪ್ರಯಾಣಿಕರ ಹಣವನ್ನು ಸರ್ಕಾರ ಭರಿಸುತ್ತಿದ್ದು, ಇಲಾಖೆ ಲಾಭದಾಯಕವಾಗಿದೆ. ಇನ್ನು ನಮ್ಮಲ್ಲಿಯ ಸಿಬ್ಬಂದಿಗಳ ನೇಮಕ ಆದರೆ ಇನ್ನೂ ಹೆಚ್ಚಿನ ಲಾಭದತ್ತ ಇಲಾಖೆ ಮುಂದುವರಿಯಲಿದೆ.

ಶ್ರೀನಿವಾಸ್ ಕೆ.ಎಚ್. ಡಿಸಿ, ವಾಯವ್ಯ ರಸ್ತೆ ಸಾರಿಗೆ ಇಲಾಖೆ. ಶಿರಸಿ ವಿಭಾಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ: ಶಾಸಕ ಶಿವರಾಮ ಹೆಬ್ಬಾರ್

Uttara Kannada News: ಬನವಾಸಿ ಕದಂಬೋತ್ಸವ-2024 ರ ಅಂಗವಾಗಿ ಸೋಮವಾರ ಗ್ರಾಮದ ಕದಂಬೋತ್ಸವ ಮೈದಾನದಲ್ಲಿ ಕ್ರೀಡಾಕೂಟ ಕಾರ್ಯಕ್ರಮ ಜರುಗಿತು.

VISTARANEWS.COM


on

Banavasi adambotsava 2024 at banavasi
Koo

ಬನವಾಸಿ: ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ (Uttara Kannada News) ತಿಳಿಸಿದರು.

ಬನವಾಸಿ ಕದಂಬೋತ್ಸವ-2024ರ ಅಂಗವಾಗಿ ಸೋಮವಾರ ಗ್ರಾಮದ ಕದಂಬೋತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಬಳಿಕ ಅವರು ಮಾತನಾಡಿದರು.

ಇದನ್ನೂ ಓದಿ: Ballari News: ಬಳ್ಳಾರಿಯ ವಿಎಸ್‌ಕೆ ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ನೇಮಕ

ಜೀವನದಲ್ಲಿ ಗೆದ್ದಾಗ ಬೀಗದೆ, ಸೋತಾಗ ಕುಗ್ಗದೇ ಜೀವನ ನಡೆಸಿದಾಗ ಮಾತ್ರ ಮನುಷ್ಯನ ಬದುಕು ಸಾರ್ಥಕತೆ ಹೊಂದುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಬಿಸಿಲ ಬೇಗೆಗೆ ಬೆಂದು ಸುಸ್ತಾದ ಜನರು; ಶುಷ್ಕ ವಾತಾವರಣ ಮುಂದುವರಿಕೆ

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಅಪರ್ಣಾ ರಮೇಶ, ತಹಸೀಲ್ದಾರ್‌ ಶ್ರೀಧರ ಮುಂದಲಮನಿ, ತಾ ಪಂ ಇಒ ಸತೀಶ ಹೆಗಡೆ, ದೈಹಿಕ ಶಿಕ್ಷಣ ಪರಿವಿಕ್ಷಕ ಬಿ.ವಿ. ಗಣೇಶ, ಯುವಜನ ಕ್ರೀಡಾ ಇಲಾಖೆಯ ಅಧಿಕಾರಿ ಕಿರಣ್ ನಾಯ್ಕ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಕ್ರೀಡಾಕೂಟದಲ್ಲಿ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು.

Continue Reading

ಉತ್ತರ ಕನ್ನಡ

Uttara Kannada News: ನರೇಂದ್ರ ಮೋದಿ ದೇಶದ, ವಿಶ್ವದ ಆಶಾಕಿರಣ: ರೂಪಾಲಿ ನಾಯ್ಕ

Uttara Kannada News: ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಕಾರವಾರ ನಗರದಲ್ಲಿ ನಾರಿಶಕ್ತಿ ವಂದನ ಮ್ಯಾರಥಾನ್‌ ಕಾರ್ಯಕ್ರಮ ಜರುಗಿತು.

VISTARANEWS.COM


on

Nari Shakti Vandana marathon programme
Koo

ಕಾರವಾರ: ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಅಧಿಕಾರದ ಅವಕಾಶ ಒದಗಿಸಿ, ಭದ್ರತೆ, ಸುರಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿದ್ದು, ನರೇಂದ್ರ ಮೋದಿ ಅವರೇ ಈ ದೇಶದ, ವಿಶ್ವದ ಆಶಾಕಿರಣ ಎಂದು ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ (Uttara Kannada News) ಬಣ್ಣಿಸಿದರು.

ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿದ್ದ ನಾರಿಶಕ್ತಿ ವಂದನ ಮ್ಯಾರಥಾನ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮಿಸಲಾತಿಯನ್ನು ನೀಡಿದ ಬಗ್ಗೆ ಒಬ್ಬ ಮಹಿಳೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹೆಣ್ಣುಮಕ್ಕಳಿಗೆ ಶಕ್ತಿ ನೀಡಲು ಮೊದಲ ಬಾರಿಗೆ ಈ ಮಸೂದೆಯನ್ನು ಜಾರಿಗೆ ತಂದಿದ್ದಾರೆ ಎಂದರು.

ಇದನ್ನೂ ಓದಿ: Karnataka Weather : ಬಿಸಿಲ ಬೇಗೆಗೆ ಬೆಂದು ಸುಸ್ತಾದ ಜನರು; ಶುಷ್ಕ ವಾತಾವರಣ ಮುಂದುವರಿಕೆ

ನಮ್ಮೆಲ್ಲರಿಗೂ ಮೋದಿಯೇ ಗ್ಯಾರಂಟಿ. ಬೇರೆ ಯಾವುದೇ ಗ್ಯಾರಂಟಿ ವಾರಂಟಿ ಬೇಡ. ರಾಜ್ಯ ಸರ್ಕಾರವು ಗ್ಯಾರಂಟಿಯ ಹೆಸರಿನಲ್ಲಿ ಬಡ ಜನರಿಗೆ ತೊಂದರೆ ಕೊಡುತ್ತಿದೆ. ಕೆಲವರಿಗೆ ಮಾತ್ರ ವಿದ್ಯುತ್ ಶುಲ್ಕ ವಿನಾಯಿತಿ ಮಾಡಿದಂತೆ ತೋರಿಸಿ, ಹಿಂಬಾಗಿಲಿನಿಂದ ಇತರರಿಗೆ ವಿದ್ಯುತ್ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಏರಿಸಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೂರು ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇಂದು ಮ್ಯಾರಥಾನ್ ಪೂರ್ಣಗೊಂಡಿದ್ದು, ವಿಧಾನಸಭಾ ಕ್ಷೇತ್ರವಾರು ನಾಳೆ ಬೈಕ್‌ ರ್ಯಾಲಿ, ಮತ್ತು ಮೂರನೆಯ ದಿನ ಪ್ರಧಾನಿ ನರೇಂದ್ರ ಮೋದಿಜಿ ಅವರು ಮಾತನಾಡುವ ಮೂಲಕ ಸಮಾರೋಪಗೊಳ್ಳಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Anant Ambani: ಅನಂತ್‌ ಅಂಬಾನಿ ವಾಚ್‌ ನೋಡಿ ದಂಗಾದ ಜುಕರ್‌ಬರ್ಗ್;‌ ಬೆಲೆ ಎಷ್ಟು ಕೋಟಿ?

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಮಾತನಾಡಿ, ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ. ಮಹಿಳೆಯರು ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸುವಂತೆ ವಿನಂತಿಸಿದರು.

ಈ ವೇಳೆ ಕಾರವಾರ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲ‌ ಅಧ್ಯಕ್ಷ ಸುಭಾಷ ಗುನಗಿ, ಅಂಕೋಲಾ ಮಂಡಲದ ಗೋಪಾಲಕೃಷ್ಣ ವೈದ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚಾ ಪ್ರಮುಖರು, ಯುವ ಮೋರ್ಚಾ ಸೇರಿದಂತೆ ಮತ್ತಿತರ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Job Alert: ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆ

ಕಾರವಾರ ನಗರದ ಮಾಲಾದೇವಿ ಮೈದಾನದಿಂದ ಶ್ರೀ ಸಿದ್ದಿ ವಿನಾಯಕ ದೇವಾಲಯದವರೆಗಿನ ಬೃಹತ್ ಮ್ಯಾರಾಥಾನ್ ಯಶಸ್ವಿಯಾಗಿ ನೆರವೇರಿತು. ಜಿಲ್ಲೆಯ ವಿವಿಧೆಡೆಯಿಂದ ಮಹಿಳೆಯರು ಆಗಮಿಸಿದ್ದರು. ಈ ವೇಳೆ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ವಿವಿಧ ವಿಭಾಗದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Continue Reading

ಉತ್ತರ ಕನ್ನಡ

ಬಾಲಕ ರಾಮನ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಪ್ರತಿಷ್ಠಿತ ‘ಅಭಿನವ ಅಮರಶಿಲ್ಪಿ’ ಪ್ರಶಸ್ತಿ ಪ್ರದಾನ

ಕಾರವಾರದಲ್ಲಿ ಡಾ. ಹಿರೇಮಠ ಫೌಂಡೇಷನ್​ ವತಿಯಿಂದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ʼಅಭಿನವ ಅಮರಶಿಲ್ಪಿʼ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

VISTARANEWS.COM


on

Arun Yogiraj conferred with prestigious 'Abhinava Amarashilpi' award in Karwar
Koo

ಕಾರವಾರ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಬಾಲಕ ರಾಮನ ವಿಗ್ರಹವನ್ನು ಕೆತ್ತಿರುವ ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ (Arun yogiraj) ಅವರಿಗೆ ಡಾ. ಹಿರೇಮಠ ಫೌಂಡೇಷನ್​ ವತಿಯಿಂದ ಸೋಮವಾರ ಪ್ರತಿಷ್ಠಿತ ʼಅಭಿನವ ಅಮರಶಿಲ್ಪಿʼ ಬಿರುದು ನೀಡಿ ಗೌರವಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಗರ್ ದರ್ಶನ್ ಕನ್ವೆನ್ಷನ್ ಹಾಲ್​ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅವರನ್ನು ಪುರಸ್ಕರಿಸಲಾಯಿತು.

ಮೈಸೂರು ಜಿಲ್ಲೆಯಿಂದ ತೆಗೆದುಕೊಂಡು ಹೋಗಿರುವ ಕೃಷ್ಣ ಶಿಲೆಯಿಂದ ಕೆತ್ತಿದ 51 ಇಂಚಿನ ರಾಮಲಲ್ಲಾನ ಮೂರ್ತಿಗೆ ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಅರುಣ್​ ಯೋಗಿರಾಜ್ ಅವರು ಈ ಮೂರ್ತಿ ಕೆತ್ತಿದ್ದು, ಜನವರಿ 22ರಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಾಣಪ್ರತಿಷ್ಠಾಪನೆ ಮಾಡಿದ್ದರು.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ಘನ ದಶರಥನಿಗೆ ನಿಲುಕದ ಅಪೂರ್ವ ಮಿಲನ

ಸೋಮವಾರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿಲ್ಪಿ ಅರುಣ್ ಯೋಗಿರಾಜ್ ಅವರು, “ಅಯೋಧ್ಯೆಯಲ್ಲಿ ಇಡೀ ದೇಶವೇ ಬೆರಗಾಗುವಂತಹ ಅದ್ಭುತ ಶ್ರೀ ರಾಮ ಮಂದಿರ ನಿರ್ಮಿಸಿ ಉದ್ಘಾಟಿಸಿದ ಕೀರ್ತಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಮೋದಿಯವರಲ್ಲದೇ ಮತ್ಯಾರಿಂದಲೂ ಈ ಕೆಲಸ ಕೈಗೂಡುವುದು ಅಸಾಧ್ಯದ ಮಾತಾಗಿತ್ತು. ದೇಶದ ಜನತೆ ಶ್ರೀ ರಾಮನ ಮೇಲಿಟ್ಟಿರುವ ಶೃದ್ಧಾಭಕ್ತಿಗೆ ಬೆರಗಾಗಿದ್ದೇನೆ. ತಿಂಗಳೊಪ್ಪತ್ತಿನಲ್ಲಿ 65 ಲಕ್ಷ ಜನರು ಈಗಾಗಲೇ ಅಯೋಧ್ಯೆಯ ನೂತನ ರಾಮಮಂದಿರಕ್ಕೆ ಭೇಟಿ ನೀಡಿರುವುದು ನಿಜಕ್ಕೂ ಅದ್ಭುತ ಎಂದರು.

ಈ ಪ್ರಶಸ್ತಿ ದೊರಕಿರುವುದು ನನಗೆ ಅತೀವ ಸಂತೋಷ ತಂದಿದೆ. ಇದಕ್ಕೆ ಕಾರಣಕರ್ತರಾದ ನನ್ನ ಸಹ ಕಲಾವಿದರು, ತಂತ್ರಜ್ಞರು ಹಾಗೂ ತಂಡದ ಪ್ರತಿ ಸದಸ್ಯರಿಗೂ ಈ ಐತಿಹಾಸಿಕ ಕ್ಷಣದಲ್ಲಿ ಧನ್ಯವಾದಗಳನ್ನು ತಿಳಿಸುತ್ತೇನೆ. ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ನನ್ನಲ್ಲಿರುವ ಕಲೆ ಹಾಗೂ ಜ್ಞಾನವನ್ನು ಮುಂದಿನ ಪೀಳಿಗೆಗೆ ಕಲಿಸಿಕೊಟ್ಟು, ಅದನ್ನು ಉಳಿಸಲು ಪಣ ತೊಡಲಿದ್ದೇನೆ ಎಂದರು.

ಬೇಲೂರು ಮತ್ತು ಹಳೆಬೀಡಿನ ಐತಿಹಾಸಿಕ ದೇವಸ್ಥಾನಗಳಲ್ಲಿ ಸುಂದರ ಶಿಲ್ಪಗಳನ್ನು ಕೆತ್ತಿರುವ ಶಿಲ್ಪಿ ಜಕಣಾಚಾರಿ ಅವರು ಅಮರಶಿಲ್ಪಿ ಎಂಬ ಬಿರುದು ಹೊಂದಿದ್ದಾರೆ. ಅದಕ್ಕೆ ಸಮಾನಾರ್ಥವಾಗಿ ಅಯೋಧ್ಯೆಯ ರಾಮಮಂದಿರದ ಬಾಲಕ ರಾಮನ ಸುಂದರ ಮೂರ್ತಿಯನ್ನು ಕೆತ್ತಿರುವ ಮೈಸೂರು ಮೂಲದ ಅರುಣ್​ ಯೋಗಿರಾಜ್​ಗೆ ಡಾ. ಹಿರೇಮಠ ಫೌಂಡೇಷನ್​ ಅಭಿನವ ಅಮರಶಿಲ್ಪಿ ಬಿರುದು ನೀಡಿ ಗೌರವಿಸಿತು.

ಇದನ್ನೂ ಓದಿ | Raja Marga Column : ದೇವರ ಬಗ್ಗೆ ಭಯ ಬೇಕಾಗಿಲ್ಲ, ಅವನು ನಮ್ಮ ಬೆಸ್ಟ್‌ ಫ್ರೆಂಡ್‌!

ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ 200ಕ್ಕೂ ಅಧಿಕ ಧಾರ್ಮಿಕ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಅವರು ಮಾತನಾಡಿದರು. ಡಾ. ಹಿರೇಮಠ ಫೌಂಡೇಷನ್​ನ ಡಾ. ವಿಶ್ವನಾಥ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Continue Reading

ಮಳೆ

Karnataka Weather : ಬಿಸಿಲ ಬೇಗೆಗೆ ಬೆಂದು ಸುಸ್ತಾದ ಜನರು; ಶುಷ್ಕ ವಾತಾವರಣ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry Weather) ಇರಲಿದ್ದು, ಹಲವೆಡೆ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗಲಿದೆ.

VISTARANEWS.COM


on

By

Dry weather continues in karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದ ವಾತಾವರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇನ್ನೂ ರಾಜ್ಯಾದ್ಯಂತ ಭಾನುವಾರ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37.4 ಡಿ.ಸೆ ದಾಖಲಾಗಿದ್ದರೆ, ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 16.9 ಡಿ.ಸೆ ದಾಖಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 15.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇನ್ನೂ ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 9 ಡಿಗ್ರಿ ಸೆಲ್ಸಿಯಸ್ ನಿಂದ 11 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ರಾಯಚೂರು ಮತ್ತು ದಾವಣಗೆರೆ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್‌ನಿಂದ 43 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Haveri News : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ; ಯುವಕ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಅರಬ್ಬಿ ಸಮುದ್ರದಲ್ಲಿ ಭಾರೀ‌ ಗಾಳಿ; ಕೆಟ್ಟು ನಿಂತ ಬೋಟ್‌ ಮುಳುಗಡೆ

ಅರಬ್ಬಿ ಸಮುದ್ರದಲ್ಲಿ ಭಾರಿ ಗಾಳಿ ಬೀಸುತ್ತಿದೆ. ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ 17 ಮೀನುಗಾರರ ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡದ ಕಾರವಾರದ ಮುದಗಾ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಂದ್ರು ತಾಂಡೇಲ್ ಎಂಬುವವರಿಗೆ ಸೇರಿದ್ದ ಓಂ ನಮಃ ಶಿವಾಯ ಹೆಸರಿನ ಬೋಟು, ಮುದಗಾ ಬಂದರಿನಿಂದ ಹೊರಟಿತ್ತು. ಆದರೆ ಈ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ನೋಡನೋಡುತ್ತಿದ್ದಂತೆ ಬೋಟ್‌ ಸಮುದ್ರದಲ್ಲಿ ಮುಳುಗಡೆ ಆಗಿತ್ತು. ಈ ವೇಳೆ ಬೋಟ್‌ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು. ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Couple
ದೇಶ24 mins ago

ಹೆಣ್ಣುಮಕ್ಕಳನ್ನು ‘ಡಾರ್ಲಿಂಗ್‌’ ಎಂದು ಕರೆಯುವುದೂ ಇನ್ನು ಲೈಂಗಿಕ ಕಿರುಕುಳ; ಹುಡುಗರೇ ಹುಷಾರ್!

china military
ವಿದೇಶ26 mins ago

ಮಾಲ್ಡೀವ್ಸ್‌ಗೆ ಉಚಿತ ಮಿಲಿಟರಿ ನೆರವು ನೀಡುವ ಒಪ್ಪಂದಕ್ಕೆ ಚೀನಾ ಸಹಿ

Rameshwarm Cafe
ಪ್ರಮುಖ ಸುದ್ದಿ28 mins ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟ; ಚೆನ್ನೈಯಲ್ಲಿ NIA ದಾಳಿ, ಐವರು ಕ್ರಿಮಿಗಳ ಸೆರೆ

NIA Raid
ಕರ್ನಾಟಕ31 mins ago

NIA Raid: ಬೆಂಗಳೂರು ಜೈಲಿನಲ್ಲಿ ಉಗ್ರ ದಾಳಿಗೆ ಸ್ಕೆಚ್; 7 ರಾಜ್ಯಗಳಲ್ಲಿ ಎನ್‌ಐಎ ದಾಳಿ

Missile Attack
ವಿದೇಶ1 hour ago

Missile Attack: ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ; ಕೇರಳ ಮೂಲದ ವ್ಯಕ್ತಿ ಸಾವು

Raja Marga Column Beena das2
ಸ್ಫೂರ್ತಿ ಕತೆ3 hours ago

Raja Marga Column : ಕ್ರಾಂತಿ ಸಿಂಹಿಣಿ ಬೀನಾ ದಾಸ್! ಅನಾಥ ಶವದ ಪರ್ಸಲ್ಲಿತ್ತು ಸುಭಾಸ್ ಚಿತ್ರ!

Best Ways To Clean Fruits
ಆಹಾರ/ಅಡುಗೆ3 hours ago

Best Ways To Clean Fruits: ಹಣ್ಣುಗಳನ್ನು ತಿನ್ನುವ ಮೊದಲು ನೀವು ಈ ವಿಧಾನದಲ್ಲಿ ತೊಳೆದುಕೊಂಡಿದ್ದೀರಾ?

Sunny weather across the karnataka
ಮಳೆ4 hours ago

Karnataka Weather: ರಾಜ್ಯಾದ್ಯಂತ ಇಂದು ಬಿಸಿಲಿನ ವಾತಾವರಣ

Supreme Court On Udhayanidhi Stalin
ದೇಶ4 hours ago

ವಿಸ್ತಾರ ಸಂಪಾದಕೀಯ: ‘ಅಧರ್ಮ’ ಹೇಳಿಕೆಯ ಸ್ಟಾಲಿನ್‌ಗೆ ಸುಪ್ರೀಂ ಚಾಟಿ; ಇನ್ನಾದರೂ ಬುದ್ಧಿ ಬರಲಿ

Dina Bhavishya
ಭವಿಷ್ಯ5 hours ago

Dina Bhavishya: ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣಭಾಗ್ಯ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ17 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ20 hours ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌