Site icon Vistara News

CM Siddaramaiah: ಶಿವರಾಂ ಹೆಬ್ಬಾರ್, ಎಸ್‌.ಟಿ. ಸೋಮಶೇಖರ್ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ: ಸಿದ್ದರಾಮಯ್ಯ

Shivaram Hebbar and ST Somashekar welcome if they agree with party ideology CM Siddaramaiah

ಶಿರಸಿ: ಶಾಸಕರಾದ ಎಸ್.ಟಿ. ಸೋಮಶೇಖರ್ (ST Somashekhar) ಹಾಗೂ ಶಿವರಾಂ ಹೆಬ್ಬಾರ್ (Shivaram Hebbar) ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು (Congress party ideology) ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಎಸ್.ಟಿ. ಸೋಮಶೇಖರ್‌ ಹಾಗೂ ಗೈರಾದ ಶಿವರಾಂ ಹೆಬ್ಬಾರ್‌ ಅವರ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಹೀಗೆ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Water Crisis: ಬೆಂಗಳೂರಲ್ಲಿ ಹಾಲಿನ ಟ್ಯಾಂಕರ್ ಮೂಲಕ ನೀರು ಪೂರೈಕೆ; ಬರದ ವಾಸ್ತವ ಬಿಚ್ಚಿಟ್ಟ ಎಚ್.ಡಿ. ದೇವೇಗೌಡ!

ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಯುತ್ತಿದೆ

ತಮಗೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್‌ಐಎ ಅಧಿಕಾರಿಗಳು ಸೂಕ್ತ ತನಿಖೆಯನ್ನು ನಡೆಸುತ್ತಿದ್ದಾರೆ. ಸ್ಫೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್‌ಐಎ ಅಧಿಕಾರಿಗಳು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದು ತಿಳಿಸಿದರು.

ದೇಶದ್ರೋಹಿಗಳು ಯಾರು?

ಪಾಕ್ ಪರ ಘೋಷಣೆ ಪ್ರಕರಣದ ಎಫ್‌ಎಸ್ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂಬುದು ತಿಳಿಯುತ್ತದೆ ಎಂದು ಹೇಳಿದರು.

ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಶೀಘ್ರ

ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: HD Devegowda: 692 ರೈತರು ಆತ್ಮಹತ್ಯೆಯೇ ಸಿದ್ದರಾಮಯ್ಯ ಸಾಧನೆಯ ಕಿರುನೋಟ: ಎಚ್‌.ಡಿ. ದೇವೇಗೌಡ ವ್ಯಂಗ್ಯ

ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

Exit mobile version