ಶಿರಸಿ: ಮನೆಯ ಹಿಂಬಾಗದಲ್ಲಿ ಅಕ್ರಮವಾಗಿ (Illegal) ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ (Sandalwood) ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿದೆ.
ನರೂರು ಗ್ರಾಮದ ಸದಾನಂದ ಬಸಪ್ಪ ಗೌಡ ಅವರ ಮನೆಯ ಹಿಂಬಾಗದಲ್ಲಿ ಕಾನೂನು ಬಾಹಿರವಾಗಿ ಶ್ರೀಗಂಧದ ತುಂಡುಗಳನ್ನು ದಾಸ್ತಾನು ಇಟ್ಟಿರುವ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸುಮಾರು 2 ಲಕ್ಷ 25 ಸಾವಿರ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತನಾದ ಸದಾನಂದ ಬಸಪ್ಪ ಗೌಡ ತಲೆಮರೆಸಿಕೊಂಡಿದ್ದು ಆರೋಪಿಗೆ ಹುಡುಕಾಟ ನಡೆದಿದೆ.
ಇದನ್ನೂ ಓದಿ: Oscars 2024: ಮುಂದಿನ ʻಆಸ್ಕರ್ʼ ರೇಸ್‌ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ?
ಅರಣ್ಯ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಅಹಮದ್ ಶೇಖ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಂ. ವಾಲಿ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅಜಯ್ ನಾಯ್ಕ್, ಉಪ ವಲಯ ಅರಣ್ಯಾಧಿಕಾರಿಗಳಾದ ಇಲಿಯಾಸ್ ಶೇಖ್,ರಾಜು ಪೂಜಾರ,ಚಿದಂಬರ ಗೌಡ ಹಾಗೂ ಚಾಲಕ ನಂದೀಶ್ ಗಾಡಿಗೇರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.