Site icon Vistara News

Sirsi News: ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ: ಕಾಗೇರಿ ಖಂಡನೆ

Uttara Kannada Lok Sabha Constituency BJP Candidate Vishweshwara Hegde Kageri latest Statement

ಶಿರಸಿ: ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ಮಹಿಳೆಯರಿಗೆ ಗ್ಯಾರಂಟಿ (Guarantee) ನೀಡಿದ್ದೇವೆ ಎಂದು ಹೇಳುತ್ತಾ ಇಂದು ಮಹಿಳೆಯರ ಜೀವಕ್ಕೆ ಗ್ಯಾರಂಟಿ ಇಲ್ಲದ ದುಸ್ಥಿತಿ ರಾಜ್ಯಕ್ಕೆ ಬಂದಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ (Sirsi News) ನಡೆಸಿದರು.

ಶಿರಸಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಪ್ರತಿ ಸಂದರ್ಭದಲ್ಲಿಯೂ ಜನರಲ್ಲಿ ಮತೀಯ ಭಾವನೆ ಕೆರಳಿಸಿ, ಕೋಮು ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಮತ ಗಳಿಕೆ ಮತ್ತು ಅಧಿಕಾರದ ಆಸೆಯ ಮೂಲ ಉದ್ದೇಶದಿಂದ ಹಿಂದೂ ಸಮಾಜವನ್ನು ಬಲಿ ಕೊಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.‌

ಇದನ್ನೂ ಓದಿ: Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನೂ ಸಮನಾಗಿ ನೋಡುವುದನ್ನು ಬಿಟ್ಟು ಓಲೈಕೆಯ ರಾಜಕಾರಣಕ್ಕೆ ಬಹುಸಂಖ್ಯಾತರ ಭಾವನೆಯನ್ನು ಕಾಂಗ್ರೆಸ್ ಧಿಕ್ಕರಿಸುತ್ತಿದೆ ಎಂದ ಕಾಗೇರಿ, ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮತದಾರರು ಜಾಗೃತರಾಗಿ ಯೋಚಿಸಬೇಕಾಗಿದೆ ಎಂದು ಎಚ್ಚರಿಕೆ ನೀಡಿದರು.

ಹನುಮಾನ್ ಚಾಲೀಸ ಪಠಿಸಿದರೆ, ಜೈಶ್ರೀರಾಮ ಘೋಷಣೆ ಕೂಗಿದರೆ ಹಿಂದೂಗಳ ಮೇಲೆ ಕಾಂಗ್ರೆಸ್ ಸರ್ಕಾರ ಪ್ರಕರಣ ದಾಖಲಿಸುತ್ತದೆ. ನಮ್ಮ ಸನಾತನ ಧರ್ಮದ ಪವಿತ್ರ ಭಗವಾಧ್ವಜ ಹಾರಿಸಲು ಬಿಡುತ್ತಿಲ್ಲ. ನಮ್ಮ ರಾಜ್ಯದ ಪವಿತ್ರ ದೇಗುಲ ಎಂದು ಕರೆಯುವ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಕ್ರಮ ಕೈಗೊಳ್ಳದೇ ರಾಜ್ಯ ಸರ್ಕಾರ ಸುಮ್ಮನೆ ಕುಳಿತುಕೊಂಡಿದೆ. ಓಲೈಕೆಯ ರಾಜಕಾರಣ ನಡೆಯುವುದಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಪರಮೇಶ್ವರ್‌ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

ಹಣ, ಗ್ಯಾರಂಟಿ, ಜಾತಿ, ಧರ್ಮವನ್ನು ಒಡೆದು ಆಳುವ ಸ್ವಾರ್ಥದ ರಾಜಕಾರಣ ಕಾಂಗ್ರೆಸ್ ಮಾಡುತ್ತಿದ್ದು, ಅಲ್ಪಸಂಖ್ಯಾತರನ್ನು ದಾರಿತಪ್ಪಿಸುವ ಕೆಲಸಕ್ಕೆ ಕೈ ಹಾಕಿದೆ, ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹತ್ಯೆ ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ, ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಬೇಕು ಎಂದು ವಿನಂತಿಸಿದರು.

Exit mobile version